ಬಜೆಟ್-2024-25 (ಸಾಂಕೇತಿಕ ಚಿತ್ರ) 
ರಾಜ್ಯ

ಸಮುದಾಯದ ಸಬಲೀಕರಣಕ್ಕೆ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ. ಮಂಜೂರು ಮಾಡಲು ಮುಸ್ಲಿಂ ಶಾಸಕರ ಮನವಿ

ಮುಸ್ಲಿಂ ಶಾಸಕರು ಸಮುದಾಯದ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದು, ಮುಂಬರುವ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡಿ 4,990 ಕೋಟಿ ರೂ.ಗಳನ್ನು ಮೀಸಲಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು: ಮುಸ್ಲಿಂ ಶಾಸಕರು ಸಮುದಾಯದ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದು, ಮುಂಬರುವ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡಿ 4,990 ಕೋಟಿ ರೂ.ಗಳನ್ನು ಮೀಸಲಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಕಲಬುರಗಿ ಶಾಸಕಿ ಕನೀಜ್ ಫಾತಿಮಾ, ಶಾಂತಿನಗರ ಶಾಸಕ ಎನ್.ಎ.ಹ್ಯಾರೀಸ್, ಎಂಎಲ್ ಸಿ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮಾಜಿ ಶಾಸಕ ಫಿರೋಜ್ ಸೇಠ್ ಸೇರಿದಂತೆ ಮುಖಂಡರು ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಮೂಲಕ ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಸಮುದಾಯಕ್ಕೆ ಶೈಕ್ಷಣಿಕ ಅವಕಾಶಗಳು, ಹೆಚ್ಚಿನ ಪದವಿ ಕಾಲೇಜುಗಳ ಹಂಚಿಕೆ, ವಿದ್ಯಾರ್ಥಿವೇತನ ಮತ್ತು ಆರೋಗ್ಯ ಸೌಲಭ್ಯಗಳನ್ನು ಸಮುದಾಯದ ಮುಖಂಡರು ಸರ್ವಾನುಮತದಿಂದ ಕೇಳಿದ್ದಾರೆ.

ಎಂಎಲ್‌ಸಿ ನಸೀರ್‌ ಅಹಮದ್‌ ಮಾತನಾಡಿ, ಸಮುದಾಯದ ಸರ್ವಾಂಗೀಣ ಅಭಿವೃದ್ಧಿ ಕುರಿತು ಇತ್ತೀಚೆಗೆ ಸಭೆ ನಡೆಸಿ ಮುಖಂಡರು ತೀರ್ಮಾನಿಸಿದ್ದಾರೆ. “ನಾವು 4,990 ಕೋಟಿ ರೂಪಾಯಿಗಳ ಬಜೆಟ್ ಯೋಜನೆಯನ್ನು ರಚಿಸಿದ್ದೇವೆ. ಅತ್ಯುತ್ತಮ ಶೈಕ್ಷಣಿಕ ಅವಕಾಶಗಳನ್ನು ಒದಗಿಸುವ ಮೂಲಕ ಸಮುದಾಯವನ್ನು ಉನ್ನತೀಕರಿಸುವುದರತ್ತ ಮುಖ್ಯವಾಗಿ ಗಮನ ಹರಿಸುತ್ತಿದ್ದೇವೆ. ವಿದ್ಯಾರ್ಥಿ ವೇತನೆಕ್ಕೆ ವ್ಯವಸ್ಥೆ ಮಾಡಲೂ ಸಿಎಂಗೆ ಮನವಿ ಮಾಡಿದ್ದೇವೆ’ ಎಂದು ಹೇಳಿದರು.

ರಾಜ್ಯಾದ್ಯಂತ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಕೊಳೆಗೇರಿಗಳನ್ನು ಅಭಿವೃದ್ಧಿಪಡಿಸಲು 800 ಕೋಟಿ ರೂಪಾಯಿಗಳ ಮುಖ್ಯಮಂತ್ರಿ ವಿಶೇಷ ಅಭಿವೃದ್ಧಿ ಯೋಜನೆಯನ್ನು ಪುನಶ್ಚೇತನಗೊಳಿಸಬೇಕೆಂದು ಸಮುದಾಯದ ಮುಖಂಡರು ಇದೇ ವೇಳೆ ಒತ್ತಾಯಿಸಿದ್ದಾರೆ. 

2013 ರಿಂದ 2018 ರ ನಡುವಿನ ಮೊದಲ ಅಧಿಕಾರಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು 800 ಕೋಟಿ ರೂ ಮೊತ್ತದ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಕೊಳೆಗೇರಿ ಪ್ರದೇಶಗಳಲ್ಲಿ ವಾಸಿಸುವ ಜನರ ಜೀವನದ ಗುಣಮಟ್ಟವನ್ನು ಸುಧಾರಿಸಲು ಸಾಧ್ಯವಾಗಿತ್ತು ಎಂದು ಅಹ್ಮದ್ ಹೇಳಿದ್ದಾರೆ.

ಇತ್ತೀಚೆಗಷ್ಟೇ ನಡೆದ ಸಭೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಮತ್ತಿತರ ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ ಎಂದು ಶಾಸಕ ಹ್ಯಾರಿಸ್ ತಿಳಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಅಡಿಯಲ್ಲಿ ಜಿಲ್ಲೆಗಳಲ್ಲಿ ಹೆಚ್ಚಿನ ಕಾಲೇಜುಗಳನ್ನು ಒತ್ತಾಯಿಸಿದ್ದೇವೆ ಎಂದು ಫಿರೋಜ್ ಸೇಠ್ ಹೇಳಿದ್ದಾರೆ. "ಉನ್ನತ ಅಧ್ಯಯನಕ್ಕಾಗಿ ವಿದೇಶಗಳಿಗೆ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ನಾವು ಹೆಚ್ಚಿನ ವಿದ್ಯಾರ್ಥಿವೇತನ ಮತ್ತು ಹಣಕಾಸಿನ ನೆರವು ಕೇಳಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT