ವಿಸ್ಟ್ರಾನ್ ಕಂಪನಿ ಜೊತೆ ರಾಜ್ಯ ಸರ್ಕಾರ ಒಡಂಬಡಿಕೆ 
ರಾಜ್ಯ

ರಾಜ್ಯದಲ್ಲಿ ಲ್ಯಾಪ್-ಟಾಪ್ ತಯಾರಿಕೆ ಘಟಕ: ವಿಸ್ಟ್ರಾನ್ ಕಂಪನಿಯಿಂದ 1,500 ಕೋಟಿ ರೂ. ಹೂಡಿಕೆ

ತೈವಾನ್ ಮೂಲದ ಜಗದ್ವಿಖ್ಯಾತ ಕಂಪನಿ ವಿಸ್ಟ್ರಾನ್, ರಾಜ್ಯದಲ್ಲಿ 1,500 ಕೋಟಿ ರೂ. ಹೂಡಿಕೆಯೊಂದಿಗೆ ತನ್ನ ಲ್ಯಾಪ್-ಟಾಪ್ ಉತ್ಪಾದನಾ ಘಟಕವನ್ನು ಆರಂಭಿಸಲಿದೆ. 

ಬೆಂಗಳೂರು: ತೈವಾನ್ ಮೂಲದ ಜಗದ್ವಿಖ್ಯಾತ ಕಂಪನಿ ವಿಸ್ಟ್ರಾನ್, ರಾಜ್ಯದಲ್ಲಿ 1,500 ಕೋಟಿ ರೂ. ಹೂಡಿಕೆಯೊಂದಿಗೆ ತನ್ನ ಲ್ಯಾಪ್-ಟಾಪ್ ಉತ್ಪಾದನಾ ಘಟಕವನ್ನು ಆರಂಭಿಸಲಿದೆ. 

ಈ ಸಂಬಂಧ ಅದು ರಾಜ್ಯ ಸರಕಾರದೊಂದಿಗೆ ಬುಧವಾರ ಇಲ್ಲಿ ಅಧಿಕೃತವಾಗಿ ಒಡಂಬಡಿಕೆಗೆ ಅಂಕಿತ ಹಾಕಿದ್ದು, ಬೆಂಗಳೂರಿನ ಖನಿಜ ಭವನದಲ್ಲಿ ಈ ಸಭೆ ನಡೆದ ಸಭೆಯಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಸಮ್ಮುಖದಲ್ಲಿ ರಾಜ್ಯದ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವಿಸ್ಟ್ರಾನ್ ಕಂಪನಿಯ ಅಧ್ಯಕ್ಷ ಅಲೆಕ್ ಲಾಯ್ ಅವರು ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿದರು. 

ನಂತರ ಮಾತನಾಡಿದ ಸಚಿವ ಎಂಬಿ ಪಾಟೀಲ್ ಅವರು, `ವಿಸ್ಟ್ರಾನ್ ಕಂಪನಿಯು ಈಗಾಗಲೇ ಕೋಲಾರದಲ್ಲಿ ತನ್ನ ಘಟಕವನ್ನು ಹೊಂದಿದೆ. ಆದರೆ, ಈ ಹೊಸ ಹೂಡಿಕೆಯ ಮೂಲಕ ರಾಜ್ಯದಲ್ಲಿ ಪ್ರಪ್ರಥಮ ಲ್ಯಾಪ್-ಟಾಪ್ ತಯಾರಿಕಾ ಘಟಕವೂ ತಲೆ ಎತ್ತುತ್ತಿದ್ದು, 2026ರ ಜನವರಿ ವೇಳೆಗೆ ಇದರಲ್ಲಿ ಉತ್ಪಾದನಾ ಚಟುವಟಿಕೆ ಆರಂಭಿಸಲಿದೆ. ಈ ಯೋಜನೆಯಿಂದ 3,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ವಿಸ್ಟ್ರಾನ್ ಕಂಪನಿಯ ಈ ಯೋಜನೆಗಾಗಿ 32 ಎಕರೆ ಜಮೀನನ್ನು ಬೆಂಗಳೂರಿನ ಸಮೀಪ ಕೇಳಿದ್ದು ಒಂದು ವಾರದಲ್ಲಿ ಇದು ಅಂತಿಮವಾಗಲಿದೆ. ಇಲ್ಲಿ ತಯಾರಾಗುವ ಲ್ಯಾಪ್-ಟಾಪ್ ಗಳ ಪೈಕಿ ಶೇಕಡ 50ರಷ್ಟು ಹೊರದೇಶಗಳಿಗೆ ರಫ್ತಾಗಲಿದೆ. ಇದರಿಂದ ರಾಜ್ಯದ ರಫ್ತು ವಹಿವಾಟಿಗೂ ಮೌಲಿಕ ಕೊಡುಗೆ ಸಿಗಲಿದೆ. ಉದ್ದೇಶಿತ ಘಟಕವು ಸಂಪೂರ್ಣ ಆಟೋಮೇಶನ್ ಸೌಲಭ್ಯ ಹೊಂದಿರಲಿದೆ ಎಂದು ಅವರು ವಿವರಿಸಿದರು.

ವಿಸ್ಟ್ರಾನ್ ಲ್ಯಾಪ್ಟಾಪ್ ತಯಾರಿಕಾ ಘಟಕವು ಸರ್ವರ್ ಗಳು,  ಐಒಟಿ (ಇಂಟರ್ನೆಟ್ ಆಫ್ ಥಿಂಗ್ಸ್), ವಿದ್ಯುತ್ ಚಾಲಿತ ವಾಹನಗಳ ವಲಯಕ್ಕೆ ಸಂಬಂಧಿಸಿದ ಉಪಕರಣಗಳನ್ನು ತಯಾರಿಸಲಿದೆ. ಈ ವರ್ಷದ ಜುಲೈನಲ್ಲಿ ಘಟಕದ ಕಾಮಗಾರಿ ಆರಂಭವಾಗಲಿದ್ದು, ಈ ಘಟಕವು ರಾಜ್ಯ ಸರಕಾರದ 4.0 ಕೈಗಾರಿಕಾ ಕ್ರಾಂತಿಯ ಆಶಯಗಳಿಗೆ ಪೂರಕವಾಗಿರಲಿದೆ. ಸರ್ಕಾರವು ಕೈಗಾರಿಕೆ ಮತ್ತು ಹೂಡಿಕೆಗಳ ಪರವಾಗಿದ್ದು, ಉದ್ಯಮಸ್ನೇಹಿ ನೀತಿಗಳನ್ನು ಹೊಂದಿದೆ. ಜೊತೆಗೆ ಕಾಲಕಾಲಕ್ಕೆ ಹಲವು ಉಪಯುಕ್ತ ಉಪಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನ ಜತೆಗೆ ರಾಜ್ಯದ ಉಳಿದ ಭಾಗಗಳಲ್ಲೂ ಆಧುನಿಕ ಉದ್ಯಮಗಳು ನೆಲೆಯೂರುವಂತೆ ಮಾಡಲು ಆದ್ಯತೆ ನೀಡಲಾಗಿದೆ  ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಿಸ್ಟ್ರಾನ್ ಕಂಪನಿಯ ಹಿರಿಯ ನಿರ್ದೇಶಕ ಡೆನಿಸ್ ಹಂಗ್, ಜನರಲ್ ಮ್ಯಾನೇಜರ್ ರಾಚೆಲ್ ಲೂ, ಉನ್ನತಾಧಿಕಾರಿಗಳಾದ ಸಿ.ಸುಧೀರ್, ಪ್ರಿಯವ್ರತ ಪಾಂಡಾ, ಉದ್ಯಮಿ ಸಿ.ಎ.ಸುರೇಶ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT