ರಾಜ್ಯ

ಉತ್ತರ ಕನ್ನಡ: ಒಂದೇ ದಿನ 8 ಜನರಲ್ಲಿ ಮಂಗನ ಕಾಯಿಲೆ ಪತ್ತೆ, 10 ವರ್ಷದ ಮಗುವಿನ ಸ್ಥಿತಿ ಗಂಭೀರ!

Vishwanath S

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ದಿನೇ ದಿನೇ ಹೆಚ್ಚಾಗುತ್ತಿದ್ದು ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನದಲ್ಲಿ 8 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ.

ಸಿದ್ದಾಪುರದ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಿಡ್ಡಿಯಲ್ಲಿಯೇ 7 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ 10 ದಿನದಲ್ಲಿ ಪ್ರಕರಣಗಳ ಸಂಖ್ಯೆ 16ಕ್ಕೇರಿದೆ. ಮಂಗನ ಕಾಯಿಲೆಯಿಂದಾಗಿ 10 ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಮಂಗನ ಕಾಯಿಲೆ ಅಥವಾ ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌(ಕೆಎಫ್‌ಡಿ)ನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ 19 ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಕಳೆದ ಜನವರಿ 8ರಂದು ಮೃತಪಟ್ಟಿದ್ದಳು.

SCROLL FOR NEXT