ಡಾ.ಸೂರಜ್ ರೇವಣ್ಣ 
ರಾಜ್ಯ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಡಾ. ಸೂರಜ್ ರೇವಣ್ಣ ಮತ್ತೆ ಎರಡು ದಿನ ಸಿಐಡಿ ಪೊಲೀಸ್ ಕಸ್ಟಡಿಗೆ!

ಯುವಕನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಅರೋಪದಡಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಜೂನ್‌ 22ರಂದು ಸೂರಜ್‌ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು.

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ಸಿಐಡಿ ಪೊಲೀಸ್ ಕಸ್ಟಡಿ ಅವಧಿಯನ್ನು ಮತ್ತೆ ಎರಡು ದಿನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.

ಡಾ. ಸೂರಜ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಕೊನೆಗೊಂಡಿತ್ತು. ಹೀಗಾಗಿ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಮತ್ತೆ ಐದು ದಿನ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಯುವಕನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಅರೋಪದಡಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಜೂನ್‌ 22ರಂದು ಸೂರಜ್‌ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 8 ದಿನ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿತ್ತು.

ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಸೂರಜ್‌ ಅವರನ್ನು ಹಾಜರುಪಡಿಸಲಾಗಿತ್ತು. ಹೀಗಾಗಿ ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್‌ ಸೂರಜ್‌ಗೆ ಜುಲೈ 3ರವರೆಗೆ ಕಸ್ಟಡಿ ವಿಸ್ತರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT