ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. 
ರಾಜ್ಯ

ಫೇಕ್ ನ್ಯೂಸ್ ಬಗ್ಗೆ ಸಮಾಜ ಬಹಳ ಎಚ್ಚರದಿಂದಿರಬೇಕು: ಸಿಎಂ ಸಿದ್ದರಾಮಯ್ಯ

ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ ಹಾಗೂ ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.

ಬೆಂಗಳೂರು: ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ ಹಾಗೂ ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಇಂದು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ ಹಾಗೂ ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು. ಸಾಮಾಜಿಕ‌ ಜಾಲತಾಣಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು, ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಹೇಳಿದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಫ್ಯಾಕ್ಟ್ ಚೆಕ್ ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮಗಳು ಸತ್ಯಸಂಗತಿ ಜನರಿಗೆ ತಿಳಿಸಿ, ಸುಳ್ಳುಸುದ್ದಿಗೆ ಜನರು ಬಲಿಯಾಗದಂತೆ ತಡೆಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT