ಡಾ. ಜಿ. ಪರಮೇಶ್ವರ್ 
ರಾಜ್ಯ

ರಾಹುಲ್ ಹೇಳಿಕೆ ಅರ್ಥೈಸಿಕೊಳ್ಳುವಲ್ಲಿ ಬಿಜೆಪಿ ವಿಫಲ; ನಟ ದರ್ಶನ್ ಗೆ ವಿಶೇಷ ಸತ್ಕಾರವಿಲ್ಲ: ಡಾ. ಜಿ.ಪರಮೇಶ್ವರ್

ದರ್ಶನ್‌ಗೆ ಜೈಲಿನಲ್ಲಿ ಯಾವುದೇ ರೀತಿಯ ವಿಶೇಷ ಸತ್ಕಾರ ಕೊಡುತ್ತಿಲ್ಲ. ಇದರ ಬಗ್ಗೆ ಅಂದೇ ಸ್ಪಷ್ಟಪಡಿಸಿದ್ದೇನೆ. ಬಿರಿಯಾನಿ ಅವೆಲ್ಲ ಏನೂ ಕೊಡುತ್ತಿಲ್ಲ. ಜೈಲಿನ ಒಳಗೂ ಬಿರಿಯಾನಿ ಕೊಡುತ್ತಿಲ್ಲ. ಬೇಕಾದರೆ ನನ್ನ ಜೊತೆ ಬನ್ನಿ, ಕರೆದುಕೊಂಡು ಹೋಗಿ ತೋರಿಸುತ್ತೇನೆ

ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಅರ್ಥೈಸಿಕೊಳ್ಳುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮಂಗಳವಾರ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಧರ್ಮ ಎಲ್ಲರನ್ನು ಒಗ್ಗೂಡಿಸಿ ಶಾಂತಿ, ನೆಮ್ಮದಿಯಿಂದ ಸಮಾಜದ ಎಲ್ಲ ವರ್ಗವನ್ನು ಮುನ್ನಡೆಸಿಕೊಂಡು ಹೋಗಬೇಕಾದ ಸಾರಾಂಶವನ್ನು ಹೊಂದಿದೆ. ಇದಕ್ಕೆ ವಿರುದ್ಧವಾಗಿ ಇರುವವರು ಹಿಂದುಗಳಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಆ ರೀತಿ ಯಾರು ಇರುತ್ತಾರೋ ಅವರಿಗೆ ಅನ್ವಯಿಸುತ್ತದೆ ಎಂಬರ್ಥದಲ್ಲಿ ಹೇಳಿದ್ದಾರೆ‌. ಬಿಜೆಪಿಯವರು ರಾಹುಲ್ ಗಾಂಧಿಯವರ ಭಾಷಣ ಅರ್ಥ ಮಾಡಿಕೊಂಡಿಲ್ಲ‌ ಎಂಬುದು ಸ್ಪಷ್ಟವಾಗಿದೆ ಎಂದರು.

ಹೊಸ ಕಾನೂನು ಚರ್ಚೆಯಾಗಬೇಕು: ಕೇಂದ್ರದಿಂದ ಹೊಸ ಮೂರು ಅಪರಾಧ ಕಾನೂನು ಜಾರಿ ಕುರಿತು ಪ್ರತಿಕ್ರಿಯಿಸಿದ ಸಚಿವರು, ಹೊಸ ಕಾನೂನುಗಳು ಒಂದು ರಾಜ್ಯಕ್ಕೆ ಮಾತ್ರ ಸಂಬಂಧಪಟ್ಟಿದ್ದರೆ ವಾಪಸ್ ಪಡೆಯುವಂತೆ ಹೇಳಬಹುದಿತ್ತು. ಇದು ಇಡೀ ದೇಶಕ್ಕೆ ಸಂಬಂಧಿಸಿದ್ದು. ಹೊಸ ಕಾನೂನು ಅಡಿ ರಾಜ್ಯದಲ್ಲಿ 80 ಪ್ರಕರಣಗಳು, ಬೆಂಗಳೂರು ನಗರದಲ್ಲಿ 25ಕ್ಕೂ ಹೆಚ್ಚು ಪ್ರಕರಣಗಳು ನಿನ್ನೆ ದಾಖಲಾಗಿವೆ. ಮುಂದೆ ಲಕ್ಷಾಂತರ ಕೇಸ್‌ಗಳು ದಾಖಲಾಗುತ್ತವೆ. ಇದೆಲ್ಲವನ್ನು ಹೊಸ ಕಾನೂನಿನ ಅಡಿ ದಾಖಲಿಸಬೇಕು‌. ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದ್ದು ಕಲಿತುಕೊಳ್ಳುತ್ತಾರೆ ಎಂದರು.

ಉಪವಾಸ ಸತ್ಯಾಗ್ರಹ ಮಾಡಿದರೆ ಆತ್ಮಹತ್ಯೆ ಪ್ರಕರಣ ದಾಖಲು ಸೇರಿದಂತೆ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡಬಹುದು. ಕೆಲವು ಉತ್ತಮವಾದ ಅಂಶಗಳು ಇವೆ.‌ ಎಲ್ಲವನ್ನು ತೆಗೆದು ಹಾಕಲು ಆಗುವುದಿಲ್ಲ. ಬ್ರಿಟಿಷ್ ಕಾಲದಲ್ಲಿ ಇದ್ದ ಕಾನೂನುಗಳನ್ನು ಬದಲಾವಣೆ ಮಾಡಿ, ಆಧುನಿಕ ಜಗತ್ತಿಗೆ ಬೇಕಾದ ಕಾನೂನುಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು‌.

ಸಿಎಂ, ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ಸಂಬಂಧ ನೋಟಿಸ್ ನೀಡುವುದು ಅಧ್ಯಕ್ಷರು ಮಾಡುವ ಕೆಲಸ. ಕಾರ್ಯಕರ್ತರು, ಶಾಸಕರು, ಸಚಿವರು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು ಎಂಬರ್ಥದಲ್ಲಿ ಅರ್ಥೈಸಿಕೊಂಡಿದ್ದೇನೆ. ಶಿಸ್ತು ಉಲ್ಲಂಘನೆ ಕುರಿತು ಸಮಿತಿ ವಿಚಾರಣೆ ಬಳಿಕ ತೀರ್ಮಾನ ಕೈಗೊಳ್ಳುವುದು ಪಕ್ಷದ ಅಧ್ಯಕ್ಷರಿಗೆ ಬಿಟ್ಟಿದ್ದು ಎಂದು ಹೇಳಿದರು.

ವಿಶೇಷ ಸತ್ಕಾರವಿಲ್ಲ: ಇದೇ ವೇಳೆ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಆರೋಪ ಕುರಿತು ಮಾತನಾಡಿದ ಸಚಿವರು, ದರ್ಶನ್‌ಗೆ ಜೈಲಿನಲ್ಲಿ ಯಾವುದೇ ರೀತಿಯ ವಿಶೇಷ ಸತ್ಕಾರ ಕೊಡುತ್ತಿಲ್ಲ. ಇದರ ಬಗ್ಗೆ ಅಂದೇ ಸ್ಪಷ್ಟಪಡಿಸಿದ್ದೇನೆ. ಬಿರಿಯಾನಿ ಅವೆಲ್ಲ ಏನೂ ಕೊಡುತ್ತಿಲ್ಲ. ಜೈಲಿನ ಒಳಗೂ ಬಿರಿಯಾನಿ ಕೊಡುತ್ತಿಲ್ಲ. ಬೇಕಾದರೆ ನನ್ನ ಜೊತೆ ಬನ್ನಿ, ಕರೆದುಕೊಂಡು ಹೋಗಿ ತೋರಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ