ಎಚ್.ಡಿ ರೇವಣ್ಣ 
ರಾಜ್ಯ

ಸೂರಜ್ ಮಹಾನ್ ದೈವ ಭಕ್ತ, ಶೀಘ್ರವೇ ಹೊರಬರುತ್ತಾನೆ; ಸದ್ಯಕ್ಕೆ ಪ್ರಜ್ವಲ್ ಭೇಟಿಯಾಗಲ್ಲ; ಎಚ್.ಡಿ ರೇವಣ್ಣ

ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರಿಲ್ಲ. ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೋಟ್ಟ ಅಂತಾ ಹೇಳುತ್ತಾರೆ‌ ಹೀಗಾಗಿ ನಾನು ಹೋಗಲ್ಲ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.

ಮೈಸೂರು: ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರಿಲ್ಲ. ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೋಟ್ಟ ಅಂತಾ ಹೇಳುತ್ತಾರೆ‌ ಹೀಗಾಗಿ ನಾನು ಹೋಗಲ್ಲ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸೂರಜ್ ರೇವಣ್ಣ ಮಹಾನ್ ದೈವ ಭಕ್ತ. ಅವನು ಬಹಳ ಬೇಗ ಇದರಿಂದ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ. ಉಳಿದ ಯಾವ ವಿಚಾರಗಳ ಬಗ್ಗೆಯೂ ನಾನು ಮಾತನಾಡಲ್ಲ. ಎಲ್ಲವೂ ನ್ಯಾಯಾಲಯದ ಮುಂದೆ ಇವೆ. ಎಲ್ಲವೂ ಮುಗಿಯಲಿ, ಆಮೇಲೆ ಎಲ್ಲವನ್ನೂ ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ ಎಂದು ರೇವಣ್ಣ ತಿಳಿಸಿದರು. ಸೋಮವಾರ ನನ್ನ ಪತ್ನಿ ಹೋಗಿದ್ದಾರೆ, ಮಗ ಅಲ್ವಾ, ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ-ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ ಎಂದರು.

ಎಂಥೆಂತವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ. ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ. ಎಲ್ಲದಕ್ಕೂ ಕಾಲದಲ್ಲಿ ಉತ್ತರ ಸಿಗುತ್ತದೆ. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತೀಯ ನೌಕಾಪಡೆ ಅತಿಥಿ' 'ಐರಿಸ್ ದೇನಾ' ಯುದ್ಧನೌಕೆಯನ್ನು ಅಮೆರಿಕ ಹೊಡೆದುರುಳಿಸಿದೆ; ಇರಾನ್

'ಇದು ನನ್ನ ಮನದ ಆಸೆ': ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

ರಾಂಚಿಯಲ್ಲಿ ಅತಿ ವೇಗವಾಗಿ ಕಾರು ಚಾಲನೆ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿಗೆ ದಂಡ!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ ಕ್ರಿಕೆಟಿಗ, ಕನ್ನಡಿಗ Vaishak Vijayakumar, ಹುಡುಗಿ ಯಾರು ಗೊತ್ತಾ? Video

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

SCROLL FOR NEXT