ಸಾಂದರ್ಭಿಕ ಚಿತ್ರ 
ರಾಜ್ಯ

ಮಧುಗಿರಿಯಲ್ಲಿ ಪಾವಗಡ ಮಾದರಿಯ ಸೋಲಾರ್ ಪಾರ್ಕ್ ನಿರ್ಮಾಣ

ಕೇಂದ್ರ ಸರ್ಕಾರದ ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಷನ್ ಸಹಭಾಗಿತ್ವದಲ್ಲಿ ಈ ಸೋಲಾರ್ ಪಾರ್ಕ್ ನಿರ್ಮಾಣವಾಗಲಿದೆ.

ಬೆಂಗಳೂರು: ಶುದ್ಧ ಇಂಧನ ಮೂಲಸೌಕರ್ಯ ಹೆಚ್ಚಿಸಲು ಮತ್ತು ರಾಜ್ಯಕ್ಕೆ ಇಂಧನ ಭದ್ರತೆ ಹೆಚ್ಚಿಸಲು ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನಲ್ಲಿ ಪಾವಗಡ ಮಾದರಿಯಲ್ಲಿ ಸೋಲಾರ್ ಪಾರ್ಕ್ ಶೀಘ್ರದಲ್ಲೇ ನಿರ್ಮಾಣ ಮಾಡಲಾಗುವುದು ಎಂದು ಇಂಧನ ಸಚಿವ ಕೆಜೆ ಜಾರ್ಜ್ ಸೋಮವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರದ ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಷನ್ ಸಹಭಾಗಿತ್ವದಲ್ಲಿ ಈ ಸೋಲಾರ್ ಪಾರ್ಕ್ ನಿರ್ಮಾಣವಾಗಲಿದೆ.

ಸೋಲಾರ್ ಪಾರ್ಕ್ ಗೆ ಅಗತ್ಯವಾದ ಸೂಕ್ತವಾದ ಭೂಮಿಯನ್ನು ಗುರುತಿಸಲು ಸ್ಥಳೀಯ ಪರಿಣತಿ ಮತ್ತು ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಉದ್ದೇಶ ಇದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಕೆಜೆ ಜಾರ್ಜ್ ಅವರು ಸೋಮವಾರ ತುಮಕೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕುಸುಮ್-ಸಿ ಯೋಜನೆಯ ಅನುಷ್ಠಾನದ ಪರಿಶೀಲನೆ ನಡೆಸಿದರು. ಅವರೊಂದಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕ ಕೆ.ಷಡಕ್ಷರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ(ಇಂಧನ ಇಲಾಖೆ) ಗೌರವ್ ಗುಪ್ತಾ, ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬಿಳಗಿ ಮತ್ತು ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಇದ್ದರು.

ಇದೇ ವೇಳೆ ತುಮಕೂರು ಜಿಲ್ಲೆಯಲ್ಲಿ ಎರಡು ಹೊಸ ವಿದ್ಯುತ್ ಉಪಕೇಂದ್ರಗಳನ್ನು ಉದ್ಘಾಟಿಸಲಾಯಿತು. ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ 12.62 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 2X8 ಎಂವಿಎ 66/11 ಕೆವಿ ಸಬ್ ಸ್ಟೇಷನ್ ಮತ್ತು 14.33 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸಂಕೇನಹಳ್ಳಿಯ(ಐಕೆ ಕಾಲೋನಿ) 2X8 ಎಂವಿಎ, 66/11 ಕೆವಿ ಸಬ್ ಸ್ಟೇಷನ್ ಗೆ ಚಾಲನೆ ನೀಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT