ಡಾ.ಸೂರಜ್ ರೇವಣ್ಣ 
ರಾಜ್ಯ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ

ಸೂರಜ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಕೊನೆಗೊಂಡಿತ್ತು. ಹೀಗಾಗಿ ಪೊಲೀಸರು ಆರೋಪಿಯನ್ನು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ಸಿಐಡಿ ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡಿದ್ದು, ಬುಧವಾರ ಕೋರ್ಟ್ ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ.

ಸೂರಜ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಕೊನೆಗೊಂಡಿತ್ತು. ಹೀಗಾಗಿ ಪೊಲೀಸರು ಆರೋಪಿಯನ್ನು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಸಿಐಡಿ ಪೊಲೀಸರು ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದರು.

ಕಳೆದ ವಾರ ಸಿಐಡಿ ಸೂರಜ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿತ್ತು ಮತ್ತು ಅವರ ಡಿಎನ್‌ಎ ಮಾದರಿಗಳನ್ನೂ ಸಂಗ್ರಹಿಸಿದೆ.

ಜೂನ್ 23ರಂದು ಬಂಧಿತರಾಗಿದ್ದ ರೇವಣ್ಣ ಅವರನ್ನು ಪುರುಷತ್ವ ಸಾಮರ್ಥ್ಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅಲ್ಲದೆ ಸೂರಜ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿರುವ ಇಬ್ಬರು ಸಂತ್ರಸ್ತರ ಡಿಎನ್‌ಎ ಮಾದರಿಗಳನ್ನೂ ಸಿಐಡಿ ಸಂಗ್ರಹಿಸಿದೆ.

ಮೊದಲ ಪ್ರಕರಣದಲ್ಲಿ, ಜೂನ್ 16 ರಂದು ತಮ್ಮ ತೋಟದ ಮನೆಯಲ್ಲಿ ಸೂರಜ್ ರೇವಣ್ಣ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಹಾಸನ ಜಿಲ್ಲೆಯ ಯುವಕ ಆರೋಪಿಸಿದ್ದಾರೆ.

ಎರಡನೇ ಪ್ರಕರಣದಲ್ಲಿ, ಮೂರು ವರ್ಷಗಳ ಹಿಂದೆ, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ 36 ಜೆಡಿಎಸ್ ನಾಯಕ ತನ್ನನ್ನು ಲೈಂಗಿಕವಾಗಿ ನಿಂದಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ