ಸಿಲಿಂಡರ್ ಸ್ಫೋಟ (ಸಾಂದರ್ಭಿಕ ಚಿತ್ರ) 
ರಾಜ್ಯ

ದಾವಣಗೆರೆಯಲ್ಲಿ ಸಿಲಿಂಡರ್ ಸ್ಫೋಟ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ಅಡುಗೆ ಮಾಡುವಾಗ ಎಲ್ ಪಿಜಿ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ದಾವಣಗೆರೆ: ದಾವಣಗೆರೆ ನಗರದ ಎಸ್‌ಒಜಿ ಕಾಲೋನಿಯಲ್ಲಿ ಮಂಗಳವಾರ ಸಿಲಿಂಡರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯಗಳಾಗಿವೆ.

ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಈ ಘಟನೆ ನಡೆದಿದ್ದು, ಗಾಯಗೊಂಡವರನ್ನು ಲಲಿತಮ್ಮ(50), ಮಲ್ಲೇಶಪ್ಪ (60), ಪಾರ್ವತಮ್ಮ(45), ಸೌಭಾಗ್ಯ(36) ಮತ್ತು ಪ್ರವೀಣ್ (35) ಎಂದು ಗುರುತಿಸಲಾಗಿದೆ.

ಐವರಿಗೂ ಶೇ. 50 ರಿಂದ 60 ರಷ್ಟು ಸುಟ್ಟ ಗಾಯಗಳಾಗಿದ್ದು, ಅವರನ್ನು ಮೊದಲು ಸರ್ಕಾರಿ ಆಸ್ಪತ್ರೆಯ ಸುಟ್ಟಗಾಯಗಳ ವಾರ್ಡ್‌ಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್‌ಎಸ್ ಹೈಟೆಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಅಡುಗೆ ಮಾಡುವಾಗ ಎಲ್ ಪಿಜಿ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆ ಸಂಬಂಧ ವಿದ್ಯಾನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video