ಚಂದನ್ ಕುಮಾರ್ TNIE
ರಾಜ್ಯ

ಮಂಗಳೂರು: ಮಣ್ಣು ಕುಸಿತದಲ್ಲಿ ಓರ್ವ ಸಾವು, ಪವಾಡಸದೃಶ್ಯ ರೀತಿ ಮತ್ತೊಬ್ಬ ಪಾರು; ಪ್ರಸ್ತುತ ಕಟ್ಟಡ ನಿರ್ಮಾಣಕ್ಕೆ MCC ಬ್ರೇಕ್

ಮೃತನನ್ನು ಉತ್ತರ ಪ್ರದೇಶದ 30 ವರ್ಷದ ಚಂದನ್ ಕುಮಾರ್ ಎಂದು ಗುರುತಿಸಲಾಗಿದ್ದು ಪವಾಡಸದೃಶ್ಯ ರೀತಿ ಬದುಕುಳಿದ ಯುವಕ ಬಿಹಾರ ಮೂಲದ 18 ವರ್ಷದ ರಾಜ್ ಕುಮಾರ್ ಎಂದು ತಿಳಿದುಬಂದಿದೆ.

ಮಂಗಳೂರು: ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಾಮಗಾರಿ ವೇಳೆ ಮಣ್ಣು ಕುಸಿದು ವಲಸೆ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ರಕ್ಷಿಸಲಾಗಿದೆ. ಮೃತನನ್ನು ಉತ್ತರ ಪ್ರದೇಶದ 30 ವರ್ಷದ ಚಂದನ್ ಕುಮಾರ್ ಎಂದು ಗುರುತಿಸಲಾಗಿದ್ದು ಪವಾಡಸದೃಶ್ಯ ರೀತಿ ಬದುಕುಳಿದ ಯುವಕ ಬಿಹಾರ ಮೂಲದ 18 ವರ್ಷದ ರಾಜ್ ಕುಮಾರ್ ಎಂದು ತಿಳಿದುಬಂದಿದೆ.

ಇಬ್ಬರು ಕಾರ್ಮಿಕರು ಖಾಸಗಿ ನಿರ್ಮಾಣ ಸಂಸ್ಥೆಗೆ ಸೇರಿದ ವಾಣಿಜ್ಯ ಕಟ್ಟಡದ ನಿರ್ಮಾಣ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾಗ ಇಂದು ಮಧ್ಯಾಹ್ನ 12.30ರ ಸುಮಾರಿಗೆ ಅವರ ಮೇಲೆ ಮಣ್ಣು ಕುಸಿದು ಬಿದ್ದಿತ್ತು. ಘಟನೆ ನಡೆದ ಒಂದು ಗಂಟೆಯೊಳಗೆ ರಾಜ್ ಕುಮಾರ್ ಅವರನ್ನು ರಕ್ಷಿಸಲಾಗಿದ್ದು, ಅವರು ಸುರಕ್ಷಿತವಾಗಿ ಹೊರ ಬಂದಿದ್ದಾರೆ. ಏಳು ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ನಂತರ ಚಂದನ್ ಕುಮಾರ್ ಅವರನ್ನು ಹೊರತೆಗೆಯುವಷ್ಟರಲ್ಲಿ ಮೃತಪಟ್ಟಿದ್ದರು.

ಕೊನೆಯವರೆಗೂ ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಚಂದನ್ ಆಳದಲ್ಲಿ ಹೂತು ಹೋಗಿದ್ದರು. ಹೀಗಾಗಿ ಅವರ ಕಾರ್ಯಾಚರಣೆಗೆ ಹೆಚ್ಚು ಸಮಯ ತೆಗೆದುಕೊಂಡಿತ್ತು. ಈ ನಡುವೆ ಭಾರೀ ಮಳೆ ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿತ್ತು ಎಂದರು.

ನಿರ್ಮಾಣ ಸ್ಥಳದಲ್ಲಿ ಹೆಚ್ಚಿನ ಕಾರ್ಮಿಕರಿದ್ದರು ಆದರೆ ಘಟನೆ ಸಂಭವಿಸಿದಾಗ ಅವರು ಊಟಕ್ಕೆ ಹೋಗಿದ್ದರಿಂದ ಹೆಚ್ಚಿನ ಸಾವು ನೋವು ತಪ್ಪಿದೆ. ಕಟ್ಟಡವನ್ನು ನಿರ್ಮಿಸಲು ಭೂಮಿಯನ್ನು ಸುಮಾರು 25 ಅಡಿ ಆಳಕ್ಕೆ ಅಗೆಯಲಾಗಿತ್ತು. ಮತ್ತೊಂದೆಡೆ ಇಳಿಜಾರು ಇದ್ದಿದ್ದರಿಂದ ಭಾರೀ ಮಳೆಗೆ ಸಡಿಲಗೊಂಡು ಮಣ್ಣು ಕುಸಿದಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ನಿರ್ಮಾಣ ಚಟುವಟಿಕೆಯನ್ನು ಮುಂದೂಡಿ: MCC

ಘಟನೆಯಿಂದ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಆಯುಕ್ತ ಆನಂದ್ ಅವರು, ಮುಂಗಾರು ಅವಧಿ ಮುಗಿಯುವವರೆಗೆ ನಗರದಲ್ಲಿ ನಿರ್ಮಾಣ ಚಟುವಟಿಕೆಗಳನ್ನು ಮುಂದೂಡುವಂತೆ ಸಾರ್ವಜನಿಕರಿಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಸಾಕಷ್ಟು ಸುರಕ್ಷತಾ ಕ್ರಮಗಳಿಲ್ಲದೆ ಅನೇಕರು ಭೂಮಿಯನ್ನು ಅಗೆಯುವುದು ಮತ್ತು ಕಟ್ಟಡಗಳನ್ನು ನಿರ್ಮಿಸುತ್ತಿರುವುದು ಕಂಡುಬಂದಿದೆ. ಇದು ಭೂಕುಸಿತಗಳಿಂದ ಖಾಸಗಿ ಮತ್ತು ಸಾರ್ವಜನಿಕ ಆಸ್ತಿಗಳಿಗೆ ಹಾನಿಯಾಗುತ್ತಿದೆ ಎಂದು ತಿಳಿಸಿರುವ MCC, ಎಲ್ಲಾ ಹೊಸ ನಿರ್ಮಾಣಗಳನ್ನು ಮುಂದೂಡಲು ಸಲಹೆ ನೀಡಿದೆ. ಈಗಾಗಲೇ ನಿರ್ಮಾಣ ಕಾರ್ಯ ಆರಂಭಗೊಂಡಿದ್ದರೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಯಾರಾದರೂ ಈ ನಿಯಮ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT