ಮಂಗಳೂರಿನಲ್ಲಿ ಮಣ್ಣು ಕುಸಿತ 
ರಾಜ್ಯ

ಮಂಗಳೂರು ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ: ಅವಶೇಷಗಳಡಿ ಸಿಲುಕಿದ ಓರ್ವ ಕಾರ್ಮಿಕನ ರಕ್ಷಣೆ, ಮತ್ತೋರ್ವನಿಗಾಗಿ ಶೋಧ!

ಬಲ್ಮಠ ಬಳಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ. ಈ ಹಿನ್ನಲೆ ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಮಂಗಳೂರು: ಮಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಬುಧವಾರ ವರದಿಯಾಗಿದೆ.

ಮಂಗಳೂರು(Mangaluru) ನಗರದ ಬಲ್ಮಠ ಬಳಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ. ಈ ಹಿನ್ನಲೆ ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಈಗಾಗಲೇ ಮಣ್ಣಿನಡಿಯಲ್ಲಿರುವ ಕಾರ್ಮಿಕರ ಜೊತೆ ರಕ್ಷಣಾ ತಂಡದ ಸಿಬ್ಬಂದಿಗಳು ಸಂಪರ್ಕ ಸಾಧಿಸಿದ್ದು, ಅವಶೇಷದಡಿ ಸಿಲುಕಿದ್ದ ಓರ್ವ ಕೂಲಿ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೂಲಗಳ ಪ್ರಕಾರ ಕಳೆದ ಮೂರು ದಿನದ ಹಿಂದೆ ಸುರಿದ ಮಳೆಯಿಂದ ಮಣ್ಣಿನ‌ ದಿಬ್ಬ ಸಡಿಲಗೊಂಡಿದ್ದು, ರಿಟೇನಿಂಗ್ ವಾಲ್ ಹಾಗೂ ಹಾಕಲಾದ ಶೀಟ್‌ಗಳ ಮೇಲೆ ಮಣ್ಣು ಬಿದ್ದಿದೆ. ಇದರಿಂದ ರಿಟೇನಿಂಗ್ ವಾಲ್ ಹಾಗೂ ಶೀಟ್ ಮಧ್ಯೆ ಕಾರ್ಮಿಕರು ಸಿಲುಕಿದ್ದು, ಕೋರ್ ಕಟ್ಟಿಂಗ್ ಮೂಲಕ ರಕ್ಷಣ ಕಾರ್ಯ ನಡೆಸಲಾಗುತ್ತಿದೆ. ಅದರಂತೆ ಓರ್ವನನ್ನು ರಕ್ಷಣೆ ಮಾಡಲಾಗಿದ್ದು, ಮತ್ತೋರ್ವನಿಗಾಗಿ ಕಾರ್ಯಾಚರಣೆ ಮುಂದವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಗೆ ಮಳೆ ಅಡ್ಡಿ

ಮಣ್ಣಿನಡಿ ಬಿಹಾರ ಮೂಲದವರಾದ ಚಂದನ್ ಮತ್ತು ರಾಜಕುಮಾರ್ ಎಂಬುವವರು ಸಿಲುಕಿದ್ದರು. ಈ ಪೈಕಿ ಓರ್ವ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ. ಸ್ಟ್ರೆಚ್ಚರ್ ಜೊತೆ ಆಗಮಿಸಿದ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಓರ್ವ ಕಾರ್ಮಿಕನನ್ನು ಮೇಲೆ ಎತ್ತುತ್ತಿದ್ದಂತೆ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನುಳಿದ ಓರ್ವನಿಗಾಗಿ ಕಾರ್ಯಾಚರಣೆ ಶುರುವಾಗಿದ್ದು, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ