ತುಂಗಭದ್ರಾ ಜಲಾಶಯ 
ರಾಜ್ಯ

ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ: ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ

ಎರಡು ತಿಂಗಳ ಹಿಂದೆ ಜಲಾಶಯದಲ್ಲಿ 3 ಟಿಎಂಸಿ ಅಡಿ ಇದ್ದ ನೀರಿನ ಮಟ್ಟ, ಇದೀಗ 8 ಟಿಎಂಸಿ ಅಡಿಗೆ ಏರಿಕೆಯಾಗಿದೆ.

ಹೊಸಪೇಟೆ: ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಹೆಚ್ಚಳವಾಗಿದೆ.

ಎರಡು ತಿಂಗಳ ಹಿಂದೆ ಜಲಾಶಯದಲ್ಲಿ 3 ಟಿಎಂಸಿ ಅಡಿ ಇದ್ದ ನೀರಿನ ಮಟ್ಟ, ಇದೀಗ 8 ಟಿಎಂಸಿ ಅಡಿಗೆ ಏರಿಕೆಯಾಗಿದೆ. ಕಳೆದ ಎರಡು ದಿನಗಳಿಂದ 10,503 ಕ್ಯೂಸೆಕ್ ಒಳಹರಿವು ಇದೆ ಎಂದು ವರದಿಗಳು ತಿಳಿಸಿವೆ.

ಕಳೆದ ವರ್ಷ ಇದೇ ವೇಳೆಗೆ ಬರಗಾಲದ ಕಾರಣ ಜಲಾಶಯದಲ್ಲಿ ಕೇವಲ 3 ಟಿಎಂಸಿ ಅಡಿ ಸಂಗ್ರಹವಿತ್ತು. ಈ ವರ್ಷ, ಜಲಾಶಯದ ಮಟ್ಟವು 100.855 ಟಿಎಂಸಿ ಅಡಿ ಸಾಮರ್ಥ್ಯದ ಬದಲಿಗೆ 80 ಟಿಎಂಸಿಎಫ್‌ಟಿಗೆ ಏರಬಹುದು ಎಂದು ಅಧಿಕಾರಿಗಳು ಆಶಿಸಿದ್ದಾರೆ.

ತುಂಗಾ ಮತ್ತು ಭದ್ರಾ ನದಿಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹುಟ್ಟಿದ್ದು, ಎರಡು ವಾರಗಳ ಹಿಂದೆ ನದಿಗಳ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ.

ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಲೆಗಳಿಗೆ 200 ಕ್ಯೂಸೆಕ್ ನೀರು ಬಿಡಲಾಗುತ್ತಿದೆ ಎಂದು ಹೊಸಪೇಟೆಯ ರೈತ ಮುಖಂಡ ಶಾಂತಾರಾಮ್ ಕೆ ಹೇಳಿದ್ದಾರೆ.

ಇದೇ ವೇಳೆ ವಿಜಯನಗರ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಭತ್ತ, ಮೆಣಸಿನಕಾಯಿ ಬೆಳೆಗಳಿಗೆ ನೀರಿನ ಅಗತ್ಯವಿದ್ದು, ನೀರು ಬಿಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್