ಎಚ್.ಕೆ ಪಾಟೀಲ್ 
ರಾಜ್ಯ

ಡಿಪಿಎಆರ್ ಅಡಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ: ಭಕ್ತವತ್ಸಲ ಆಯೋಗದ ಶಿಫಾರಸ್ಸು ಕೈ ಬಿಡಲು ಸಚಿವ ಸಂಪುಟ ತೀರ್ಮಾನ

ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯ ವಿಮಾದಾರರಿಗೆ 2018-20ರ ದೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus)ವನ್ನು ಘೋ಼ಷಿಸುವುದು. 5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ಫೆ‌. 28- 2025ರವರೆಗೆ ವಿಸ್ತರಿಸಲು ಒಪ್ಪಿಗೆ ನೀಡಲಾಗಿದೆ.

ಬೆಂಗಳೂರು: ಎಲ್ಲಾ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ನಿಯಂತ್ರಣಕ್ಕೆ ತರುವ ನ್ಯಾಯಮೂರ್ತಿ ಕೆ ಭಕ್ತವತ್ಸಲ ಆಯೋಗದ ಶಿಫಾರಸುಗಳಲ್ಲಿ ಒಂದನ್ನು ಕೈಬಿಡಲು ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ಹಿಂದುಳಿದ ವರ್ಗಗಳ ರಾಜಕೀಯ ಪ್ರಾತಿನಿಧ್ಯವನ್ನು ಅಧ್ಯಯನ ಮಾಡಲು ರಚಿಸಲಾದ ಆಯೋಗವು ಕೆಲವು ಶಿಫಾರಸುಗಳೊಂದಿಗೆ ತನ್ನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು.

ಡಾ. ಜಸ್ಟೀಸ್ ಕೆ ಭಕ್ತವತ್ಸಲ ಆಯೋಗವು ಮಾಡಿರುವ ಶಿಫಾರಸ್ಸನ್ನು ಕೈಬಿಡುವ ಹಾಗೂ ಹಾಲಿ ವ್ಯವಸ್ಥೆಗೆ ಸಂಬಂಧಿಸಿದಂತೆ ಸರ್ಕಾರ ಜಾರಿಗೊಳಿಸಿರುವ 03 ಶಿಫಾರಸ್ಸುಗಳ ಪೈಕಿ ಎಲ್ಲ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣಾ ವಿಭಾಗವನ್ನು ಡಿಪಿಎಆರ್ ನಿಯಂತ್ರಣಕ್ಕೆ ತರುವ ಶಿಫಾರಸ್ಸನ್ನು ಕೈಬಿಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.

ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಚುನಾವಣಾ ಘಟಕಗಳನ್ನು ಆಯಾ ಇಲಾಖೆಗಳ ನಿಯಂತ್ರಣದಲ್ಲಿ ಉಳಿಸಿ, ಪ್ರಸ್ತುತ ಚಾಲ್ತಿಯಲ್ಲಿರುವ ವ್ಯವಸ್ಥೆಯನ್ನು ಮುಂದುವರೆಸಲು ಸಚಿವ ಸಂಪುಟ ನಿರ್ಣಯಿಸಿದೆ.

ಮತ್ತೊಂದು ಮಹತ್ವದ ಕ್ರಮದಲ್ಲಿ, ನವದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳನ್ನು ಮಾತ್ರ ಉಳಿಸಿಕೊಳ್ಳಲು ಸಂಪುಟ ನಿರ್ಧರಿಸಿದೆ. ಸದ್ಯ ಐವರು ಐಎಎಸ್ ಅಧಿಕಾರಿಗಳಿದ್ದಾರೆ. ಕರ್ನಾಟಕ ಸರ್ಕಾರಿ ಸಚಿವಾಲಯದ ಸೇವೆಗಳ (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024 ಮತ್ತು ಕರ್ನಾಟಕ ಸಾಮಾನ್ಯ (ಸರ್ಕಾರಿ ಹಾಸ್ಪಿಟಾಲಿಟಿ ಸ್ಥಾಪನೆ) (ತಿದ್ದುಪಡಿ) ನಿಯಮಗಳು, 2024 ಗೆ ಅನುಮೋದನೆಯನ್ನು ನೀಡಲಾಗಿದೆ.

ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯ ವಿಮಾದಾರರಿಗೆ 2018-20ರ ದೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus)ವನ್ನು ಘೋ಼ಷಿಸುವುದು. 5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ಫೆ‌. 28- 2025ರವರೆಗೆ ವಿಸ್ತರಿಸಲು ಒಪ್ಪಿಗೆ ನೀಡಲಾಗಿದೆ.

ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ ಹಂತ-2ನ್ನು ರಾಜ್ಯದ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮೊತ್ತ 2000 ಕೋಟಿ ರೂ.ಗಳ ಯೋಜನಾ ಅಂದಾಜಿನಲ್ಲಿ ರಾಜ್ಯ ಸರ್ಕಾರದ ಪಾಲಿನ ಶೇ.7.5ರಷ್ಟು ಮೊತ್ತ 150.00 ಕೋಟಿ ರೂ.ಗಳು, ಮಹಾನಗರ ಪಾಲಿಕೆಯ ಸ್ವಂತ ಸಂಪನ್ಮೂಲದಿಂದ ಶೇ.7.5ರಷ್ಟು ಮೊತ್ತ 150.00 ಕೋಟಿ ರೂ.ಗಳು ಹಾಗೂ ಯುಐಡಿಎಫ್​​ನಿಂದ ಸಾಲದ ರೂಪದಲ್ಲಿ ಶೇ.85 ರಷ್ಟು ಮೊತ್ತ 1700.00 ಕೋಟಿ ರೂ.ಗಳಲ್ಲಿ 2024-25ನೇ ಸಾಲಿನಿಂದ 2026-27ನೇ ಸಾಲಿನವರೆಗೆ ಮೂರು ವರ್ಷಗಳ ಅವಧಿಯಲ್ಲಿ ಪೌರಾಡಳಿತ ನಿರ್ದೇಶನಾಲಯದಿಂದ ರಾಜ್ಯ ಮಟ್ಟದಲ್ಲಿ ಟೆಂಡರ್ ಕರೆದು ಅನುಷ್ಠಾನಗೊಳಿಸಲು ಸಚಿವ ಸಂಪುಟ ಅನುಮೋದಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT