ಸಾಂದರ್ಭಿಕ ಚಿತ್ರ 
ರಾಜ್ಯ

ರೌಡಿ ಅಭಿಮಾನಿಗಳ ಫ್ಯಾನ್ ಪೇಜ್ ಹಾವಳಿ: ಕಡಿವಾಣಕ್ಕೆ ಸಿಸಿಬಿ ಪೊಲೀಸರು ಮುಂದು!

ಕುಖ್ಯಾತ ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ, ಸೈಕಲ್ ರವಿ ಸೇರಿದಂತೆ ಹಲವರ ಹೆಸರಿನಲ್ಲಿ ಬಾಸ್ ಟ್ಯಾಗ್ ಲೇನ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾನ್ ಪೇಜ್ ಗಳನ್ನು ತೆರೆಯಲಾಗುತ್ತಿದೆ.

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿರುವ ರೌಡಿ ಅಭಿಮಾನಿಗಳ ಫ್ಯಾನ್ ಪೇಜ್ ಗಳಿಗೆ ಕಡಿವಾಣ ಹಾಕಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ. ಸೈಬರ್ ಕ್ರೈಂ ಪೊಲೀಸರ ಸಹಾಯದೊಂದಿಗೆ ಅಂತಹ ಫೇಜ್ ಗಳನ್ನು ನಿಷ್ಕ್ರಿಯಗೊಳಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ.

ಕುಖ್ಯಾತ ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ, ಸೈಕಲ್ ರವಿ ಸೇರಿದಂತೆ ಹಲವರ ಹೆಸರಿನಲ್ಲಿ ಬಾಸ್ ಟ್ಯಾಗ್ ಲೇನ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾನ್ ಪೇಜ್ ಗಳನ್ನು ತೆರೆಯಲಾಗುತ್ತಿದೆ. ಸಿನಿಮಾಗಳ ಡೈಲಾಗ್, ಹಾಡು ಬಳಸಿ ಪ್ರಚೋದಿಸಲಾಗುತ್ತಿದೆ. ಇಂತಹ ಫೇಜ್ ಗಳ ಫಾಲೋವರ್ಸ್ ಸಂಖ್ಯೆ ಹಾಗೂ ರೌಡಿಸಂನತ್ತ ಆಕರ್ಷಿತರಾಗುತ್ತಿರುವ ಯುವಕರ ಸಂಖ್ಯೆ ಹೆಚ್ಚಾಗುತ್ತಿದೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಅಧಿಕಾರಿಗಳು, ಸೈಬರ್ ಕ್ರೈಂ ಪೊಲೀಸರ ಸಹಾಯದಿಂದ ಈಗಾಗಲೇ ಹಲವು ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇದೇ ರೀತಿಯ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸುವವರ ವಿರುದ್ಧವೂ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT