ಡಿ ಕೆ ಶಿವಕುಮಾರ್  
ರಾಜ್ಯ

ಗ್ರೇಟರ್ ಬೆಂಗಳೂರು ಮಾಸ್ಟರ್ ಪ್ಲಾನ್ ಅಂತಿಮ ಹಂತದಲ್ಲಿದೆ: ಡಿಸಿಎಂ ಡಿ ಕೆ ಶಿವಕುಮಾರ್

ಚನ್ನಪಟ್ಟಣ ಚನ್ನಪಟ್ಟಣದಲ್ಲಿಯೇ ಇರುತ್ತದೆ, ರಾಮನಗರ ರಾಮನಗರದಲ್ಲಿ ಇರುತ್ತದೆ, ಮಾಗಡಿ ಮಾಗಡಿಯಲ್ಲಿ ಇರುತ್ತದೆ, ಕನಕಪುರ ಕನಕಪುರದಲ್ಲಿಯೇ ಇರುತ್ತದೆ ಎಂದರು.

ಬೆಂಗಳೂರು: ಗ್ರೇಟರ್ ಬೆಂಗಳೂರಿನ ಬಗ್ಗೆ ಮಾಸ್ಟರ್ ಪ್ಲಾನ್ ಅಂತಿಮ ಹಂತದಲ್ಲಿದೆ. ಈ ಬಗ್ಗೆ ಮುಂದಿನ ವಾರ ಮುಖ್ಯಮಂತ್ರಿಗಳಿಗೆ ಪ್ರಾತ್ಯಕ್ಷಿಕೆ ನೀಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬಿಬಿಎಂಪಿ ಅಧಿಕಾರಿಗಳ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ನಿಮ್ಮ ಕನಸಿನ ಯೋಜನೆಯಾದ ಗ್ರೇಟರ್ ಬೆಂಗಳೂರಿಗಾಗಿ ಬಿಬಿಎಂಪಿ ವಿಭಜನೆ ಮಾಡಲಾಗುವುದೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು

ಯಾವ ಬಿಬಿಎಂಪಿಯನ್ನು ಒಡೆಯುವುದಿಲ್ಲ. ಈಗ ಎಲ್ಲವನ್ನು ಹೇಳಲು ಆಗುವುದಿಲ್ಲ. ಸಭೆ ಸೇರಿದ್ದು ಕೇವಲ ಗ್ರೇಟರ್ ಬೆಂಗಳೂರು ವಿಚಾರಕ್ಕಲ್ಲ. ಚುನಾವಣೆ ಇದ್ದ ಕಾರಣ, ಕಳೆದ ನಾಲ್ಕು ತಿಂಗಳುಗಳಿಂದ ಅನೇಕ ಕೆಲಸಗಳು ಬಾಕಿ ಉಳಿದಿದ್ದವು. ಈ ವಿಚಾರವಾಗಿ ಚರ್ಚೆ ಮಾಡಲು ಸಭೆ ಸೇರಲಾಗಿತ್ತು ಎಂದು ಹೇಳಿದರು. ರಾಮನಗರವನ್ನು ಬೆಂಗಳೂರಿಗೆ ಸೇರಿಸುವ ಬಗ್ಗೆ ಕೇಳಿದಾಗ ಇದರ ಬಗ್ಗೆ ಆನಂತರ ಚರ್ಚೆ ಮಾಡುತ್ತೇನೆ. ಚನ್ನಪಟ್ಟಣ ಚನ್ನಪಟ್ಟಣದಲ್ಲಿಯೇ ಇರುತ್ತದೆ, ರಾಮನಗರ ರಾಮನಗರದಲ್ಲಿ ಇರುತ್ತದೆ, ಮಾಗಡಿ ಮಾಗಡಿಯಲ್ಲಿ ಇರುತ್ತದೆ, ಕನಕಪುರ ಕನಕಪುರದಲ್ಲಿಯೇ ಇರುತ್ತದೆ ಎಂದರು.

ಬಿಬಿಎಂಪಿ ಹಾಗೂ ಬಿಡಿಎ ಕಾಮಗಾರಿಗಳಿಗೆ ವೇಗ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸ್ಕೈಡೆಕ್‌ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ಈ ಯೋಜನೆಗಳೆಲ್ಲವನ್ನೂ ಸಿಎಂಗೆ ವಿವರಿಸಬೇಕಾಗಿದೆ. ಮುಂದಿನ ವಾರ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಎಲ್ಲವನ್ನೂ ಚರ್ಚಿಸಲಾಗುತ್ತದೆ ಎಂದು ಹೇಳಿದರು. ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್‌, ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ವಿಶೇಷ ಆಯುಕ್ತ ಮುನೀಶ್‌ ಮೌದ್ಗೀಲ್‌ ಮತ್ತಿತರರು ಸಭೆಯಲ್ಲಿ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel