ಬಿ ವೀರಪ್ಪ  
ರಾಜ್ಯ

ನೂತನ ಉಪಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ವೀರಪ್ಪ ನೇಮಕ

ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ರಾಜ್ಯಪಾಲರು ಶುಕ್ರವಾರ ನೇಮಕ ಮಾಡಿ ಆದೇಶಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ರಾಜ್ಯಪಾಲರು ಶುಕ್ರವಾರ ನೇಮಕ ಮಾಡಿ ಆದೇಶಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಸೆಕ್ಷನ್‌ 3(1)ರ ಅಡಿ ದೊರೆತಿರುವ ಅಧಿಕಾರ ಬಳಸಿ ನಿವೃತ್ತ ನ್ಯಾಯಮೂರ್ತಿ ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ನೇಮಕ ಮಾಡಿರುವುದಾಗಿ ರಾಜ್ಯಪಾಲರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ, ವಿಧಾನಸಭೆ ಸ್ಪೀಕರ್‌, ಪರಿಷತ್‌ ಸಭಾಪತಿ ಮತ್ತು ವಿರೋಧ ಪಕ್ಷದ ನಾಯಕರ ಜೊತೆ ಸಮಾಲೋಚನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ವೀರಪ್ಪ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನವರಾದ ವೀರಪ್ಪ, 2023ರ ಮೇ ತಿಂಗಳಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ