ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿದ ಸಚಿವ ಶರಣ್ ಪ್ರಕಾಶ್ ಪಾಟೀಲ್ 
ರಾಜ್ಯ

ಕೊಡಗಿನಲ್ಲಿ ಹೃದಯ ಚಿಕಿತ್ಸಾ ಕೇಂದ್ರ ಸ್ಥಾಪನೆ: ಸಚಿವ ಶರಣ್ ಪ್ರಕಾಶ್ ಪಾಟೀಲ್ ಭರವಸೆ

ಕೊಡಗಿನಲ್ಲಿ ಹೃದಯ ತಪಾಸಣೆ ಕೇಂದ್ರ ಸ್ಥಾಪಿಸುವುದಾಗಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ್ ಭರವಸೆ ನೀಡಿದ್ದಾರೆ.

ಮಡಿಕೇರಿ: ಕೊಡಗಿನಲ್ಲಿ ಹೃದಯ ತಪಾಸಣೆ ಕೇಂದ್ರ ಸ್ಥಾಪಿಸುವುದಾಗಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ್ ಭರವಸೆ ನೀಡಿದ್ದಾರೆ.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಕೊಐಎಂಎಸ್) ಶುಕ್ರವಾರ ಭೇಟಿ ನೀಡಿದ ಅವರು, ಜಿಲ್ಲೆಗೆ ಹೃದಯ ಪರೀಕ್ಷಾ ಕೇಂದ್ರವನ್ನು ಮುಂದಿನ ಬಜೆಟ್‌ನಲ್ಲಿ ಘೋಷಿಸಲಾಗುವುದು ಎಂದು ಖಚಿತಪಡಿಸಿದರು. “ಜಿಲ್ಲೆಗೆ ಮುಂದಿನ ಬಜೆಟ್‌ನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿಯಲ್ಲಿ ಹೃದ್ರೋಗ ಚಿಕಿತ್ಸಾ ಕೇಂದ್ರವನ್ನು ಘೋಷಿಸಲಾಗುವುದು.

ಮಡಿಕೇರಿಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನ ಆಸ್ಪತ್ರೆ ಕಟ್ಟಡವನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಸಚಿವರು ಖಚಿತಪಡಿಸಿದರು. ಅಂತೆಯೇ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ ಪ್ರಯತ್ನದ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಎಂಆರ್‌ಐ ಯಂತ್ರ ಅಳವಡಿಸಲಾಗಿದ್ದು, ಶೀಘ್ರದಲ್ಲಿಯೇ ಉದ್ಘಾಟನೆಗೊಳ್ಳಲಿದೆ ಎಂದು ವಿವರಿಸಿದರು.

ಮಡಿಕೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಪೂರ್ಣಗೊಳ್ಳಲು 55ರಿಂದ 60 ಕೋಟಿ ರೂ.ನಿಧಿಯ ಅಗತ್ಯವಿದೆ ಎಂದು ಖಚಿತಪಡಿಸಿದ ಸಚಿವರು, ‘ಹಣಕಾಸು ಇಲಾಖೆ ಮೂಲಕ ಹಣ ಮಂಜೂರು ಮಾಡಲು ಕ್ರಮಕೈಗೊಳ್ಳಲಾಗುವುದು. ವೈದ್ಯರ ಕೊರತೆ ಇದ್ದು, ಶೀಘ್ರದಲ್ಲಿಯೇ ಪರಿಹಾರ ನೀಡಲಾಗುವುದು. ಯುವ ವೈದ್ಯರು ಸಣ್ಣ ಜಿಲ್ಲೆಗಳಲ್ಲಿ ಕೆಲಸ ಮಾಡಲು ಉತ್ಸುಕರಾಗಿದ್ದಾರೆ ಮತ್ತು ವೈದ್ಯಕೀಯದಲ್ಲಿ ಪಿಜಿ ಕೋರ್ಸ್‌ಗಳನ್ನು ಪರಿಚಯಿಸಲು ಕ್ರಮಕೈಗೊಳ್ಳಲಾಗುವುದು.

ಜಿಲ್ಲಾ ಆಸ್ಪತ್ರೆಯಾದ್ಯಂತ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವರು ಕೇಂದ್ರದ ವಿವಿಧ ಘಟಕಗಳ ಕಾರ್ಯವೈಖರಿಯನ್ನು ವೀಕ್ಷಿಸಿದರು.

ಇದೇ ವೇಳೆ ನೀಟ್ ಅಕ್ರಮಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ''ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರ 24 ಲಕ್ಷ ವಿದ್ಯಾರ್ಥಿಗಳ ಭವಿಷ್ಯವನ್ನು ಅತಂತ್ರಗೊಳಿಸಿದೆ. ಪರೀಕ್ಷೆಗಳನ್ನು ಪಾರದರ್ಶಕಗೊಳಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆಸುವಾಗ ಸಂಪೂರ್ಣ ಪಾರದರ್ಶಕತೆ ಇರುತ್ತದೆ.

ನೀಟ್‌ ಅವ್ಯವಸ್ಥೆಯಿಂದ ಒಕ್ಕೂಟ ವ್ಯವಸ್ಥೆ ಮೇಲೆ ಪರಿಣಾಮ ಬೀರಿದ್ದು, ಈ ಕುರಿತು ಪ್ರಶ್ನಿಸಿದಾಗ ರಾಹುಲ್ ಗಾಂಧಿ ಅವರನ್ನು ಕೇಂದ್ರ ಸರ್ಕಾರ ಅವಮಾನಿಸಿದೆ. ಈ ಅಕ್ರಮಗಳು ಈ ಹಿಂದೆಯೂ ವರದಿಯಾಗಿರುವ ಶಂಕೆ ಇದೆ' ಎಂದು ಅಭಿಪ್ರಾಯಪಟ್ಟಿದ್ದಾರೆ. ನೀಟ್ ಮೋದಿ ನೇತೃತ್ವದ ಸರ್ಕಾರದ ಅತಿ ದೊಡ್ಡ ಹಗರಣವಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸಚಿವರ ಭೇಟಿ ವೇಳೆ ಶಾಸಕ ಡಾ.ಮಂತರ್ ಗೌಡ, ಡಿಸಿ ವೆಂಕಟ್ ರಾಜಾ ಮತ್ತಿತರರು ಉಪಸ್ಥಿತರಿದ್ದರು. ಸಚಿವರು KoIMS ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಅವರ ವಿವಿಧ ಸಮಸ್ಯೆಗಳನ್ನು ಪರಿಹರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT