ರೇಣುಕಾಸ್ವಾಮಿ ಮತ್ತು ನಟ ದರ್ಶನ್ (ಸಂಗ್ರಹ ಚಿತ್ರ) 
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: BBMP ಮಾಜಿ ಉಪಮೇಯರ್​ ಸೇರಿ ಮೂವರಿಗೆ ನೋಟಿಸ್ ಜಾರಿ

ಮಾಜಿ ಉಪಮೇಯರ್ ಮೋಹನ್ ರಾಜ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಪೊಲೀಸರು, ಬಸವೇಶ್ವರನಗರ ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ‌ ಸೂಚಿಸಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಉಪ ಮೇಯರ್ ಮೋಹನ್ ರಾಜು ಸೇರಿ ಮೂವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.

ಮಾಜಿ ಉಪಮೇಯರ್ ಮೋಹನ್ ರಾಜ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಪೊಲೀಸರು, ಬಸವೇಶ್ವರನಗರ ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ‌ ಸೂಚಿಸಿದ್ದಾರೆ.

ಮೋಹನ್ ರಾಜ್ ರಿಂದ 40 ಲಕ್ಷ ಹಣ ಪಡೆದಿದ್ದರ ಬಗ್ಗೆ ವಿಚಾರಣೆ ವೇಳೆ ದರ್ಶನ್ ಅವರು ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಯಾವ ಉದ್ದೇಶಕ್ಕಾಗಿ ದರ್ಶನ್ ಅವರಿಗೆ ಹಣ ನೀಡಲಾಗಿತ್ತು ಎಂಬುದರ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಮೋಹನ್ ರಾಜ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಪ್ರಕರಣ ಸಂಬಂಧ ಪವಿತ್ರಾಗೌಡ ಸ್ನೇಹಿತೆ ಸಮತ ಅವರಿಗೂ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ಆರೋಪಿ ಒಬ್ಬನಿಗೆ ಹಣಕಾಸಿನ ಸಹಾಯ ಮಾಡಿರುವ ಆರೋಪ ಇವರ ಮೇಲಿದೆ.

ಬೆಂಗಳೂರಿನ ಪ್ರಭಾವಿ ಶಾಸಕನ ಕಾರು ಚಾಲಕನಿಗೂ ನೋಟಿಸ್ ನೀಡಿದ್ದು. ಕಾರ್ತಿಕ್ ಪುರೋಹಿತ್ ಎಂಬ ಕಾರು ಚಾಲಕನಿಗೆ ನೋಟಿಸ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಹತ್ಯೆ ಕೇಸ್ ಆರೋಪಿ ಪ್ರದೋಷ್ ಗೆ ಆಪ್ತನಾಗಿರುವ ಕಾರ್ತಿಕ್ ಪುರೋಹಿತ್ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!