ನಿರ್ದೇಶಕ ಮಿಲನ ಪ್ರಕಾಶ್ 
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಿರ್ದೇಶಕ ಮಿಲನ ಪ್ರಕಾಶ್ ವಿಚಾರಣೆ ನಡೆಸಿದ ಪೊಲೀಸರು!

ರೇಣುಕಾಸ್ವಾಮಿ ಹತ್ಯೆಯಾದ ಬೆನ್ನಲ್ಲೇ ದರ್ಶನ್ ಡೆವಿಲ್ ಚಿತ್ರದ ಶೂಟಿಂಗ್‌ಗೆ ತೆರಳಿದ್ದರು. ಮಿಲನ ಪ್ರಕಾಶ್ ಈ ಚಿತ್ರದ ನಿರ್ದೇಶಕರಾಗಿದ್ದು, ನಗರದ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಹಾಜರಾಗಿ ಹೇಳಿಕೆಯನ್ನು ದಾಖಲಿಸಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ನಿರ್ದೇಶಕ ಮಿಲನ ಪ್ರಕಾಶ್ ಅವರನ್ನು ಪೊಲೀಸರು ಶುಕ್ರವಾರ ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 15 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ರೇಣುಕಾಸ್ವಾಮಿ ಹತ್ಯೆಯಾದ ಬೆನ್ನಲ್ಲೇ ದರ್ಶನ್ ಡೆವಿಲ್ ಚಿತ್ರದ ಶೂಟಿಂಗ್‌ಗೆ ತೆರಳಿದ್ದರು. ಮಿಲನ ಪ್ರಕಾಶ್ ಈ ಚಿತ್ರದ ನಿರ್ದೇಶಕರಾಗಿದ್ದು, ನಗರದ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಹಾಜರಾಗಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಬೆಂಗಳೂರು ಮಾಜಿ ಉಪಮೇಯರ್ ಮೋಹನ್ ರಾಜ್ ಕೂಡಾ ಪೊಲೀಸರ ಮುಂದೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.

ಈ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಅವರಿಗೆ ಪತ್ರ ಬರೆದಿದ್ದು, ಪವಿತ್ರಗೌಡ ದರ್ಶನ್ ಅವರ ಪತ್ನಿ ಅಲ್ಲ, 2003ರಲ್ಲಿ ದರ್ಶನ್ ಮತ್ತು ನಾನು ಮದುವೆ ಆಗಿದ್ದೀವಿ. 19-05-2003 ರಲ್ಲಿ ದರ್ಶನ್ ಅವರ ಧರ್ಮಪತ್ನಿಯಾಗಿದ್ದೀನಿ. ನಮ್ಮಿಬ್ಬರಿಗೆ ಒಬ್ಬ ಮಗ ಇದ್ದಾನೆ ಎಂದು ಬರೆದಿದ್ದಾರೆ.

ಪವಿತ್ರಗೌಡ ಸಂಜಯ್ ಸಿಂಗ್ ಎಂಬುವವರನ್ನು ಮದುವೆ ಆಗಿದ್ದಾರೆ. ಅವರಿಬ್ಬರಿಗೂ ಒಬ್ಬಳು ಹೆಣ್ಣು ಮಗಳಿದ್ದಾಳೆ. ನೀವು ಮಾಧ್ಯಮಗೋಷ್ಠಿಯಲ್ಲಿ ದರ್ಶನ್ ಅವರ ಪತ್ನಿ ಪವಿತ್ರಗೌಡ ಅಂತ ಹೇಳಿದ್ದೀರಿ. ಅದೇ ರೀತಿ ಗೃಹಸಚಿವರೂ ಕೂಡ ಒಮ್ಮೆ ಅದನ್ನೇ ಉಚ್ಚರಣೆ ಮಾಡಿದ್ದಾರೆ. ಹೀಗಾಗಿ ಪೊಲೀಸ್ ರೆಕಾರ್ಡ್ ಅಲ್ಲಿ ಪವಿತ್ರಗೌಡ ದರ್ಶನ್ ಅವರ ಪತ್ನಿ, ದರ್ಶನ್ ಅವರನ್ನು ಮದುವೆಯಾಗಿದ್ದಾರೆ ಎಂದು ಉಲ್ಲೇಖಿಸಬೇಡಿ, ಯಾವುದೇ ದಾಖಲೆಗಳಲ್ಲಿ ದರ್ಶನ್ ಅವರ ಪತ್ನಿ ಎಂದು ಬರೆಯಬೇಡಿ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಚಿತ್ರದುರ್ಗದ ದರ್ಶನ್ ಅವರ ಅಭಿಮಾನಿ ರೇಣುಕಾಸ್ವಾಮಿ ಅವರನ್ನು ಜೂನ್ 8 ರಂದು ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT