ಸಾಂದರ್ಭಿಕ ಚಿತ್ರ  
ರಾಜ್ಯ

ಡೆಂಘೀ ಜ್ವರಕ್ಕೆ ಬೆಂಗಳೂರಿನಲ್ಲಿ ಬಾಲಕ ಸಾವು; ಝೀಕಾ ವೈರಸ್ ಗೆ ಶಿವಮೊಗ್ಗದಲ್ಲಿ ವೃದ್ಧ ಬಲಿ

ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿ ಅಬ್ಬರಿಸುತ್ತಿದೆ. ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ನಾಲ್ಕು ಮಕ್ಕಳು ಬಲಿಯಾಗಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರ ಹೆಚ್ಚಾಗುತ್ತಿದೆ. ಹಾಸನದಲ್ಲಿ ಮಕ್ಕಳ ಸಾವಿನ ನಂತರ ಬೆಂಗಳೂರಿನಲ್ಲಿ ಡೆಂಗ್ಯೂಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಂಜನಾಪುರದ 11 ವರ್ಷದ ಬಾಲಕ ಗಗನ್ ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಬಾಲಕ ಗಗನ್ ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ. ನಿನ್ನೆ ತಡರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಹಾಸನದಲ್ಲಿ ಡೆಂಗ್ಯೂ ಜ್ವರಕ್ಕೆ ಮಕ್ಕಳ ಸಾವು: ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿ ಅಬ್ಬರಿಸುತ್ತಿದೆ. ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ನಾಲ್ಕು ಮಕ್ಕಳು ಬಲಿಯಾಗಿದ್ದಾರೆ.

ಶಿವಮೊಗ್ಗದಲ್ಲಿ ಝೀಕಾ ವೈರಸ್​ಗೆ ವೃದ್ಧ ಬಲಿ: ಶಿವಮೊಗ್ಗದ ಗಾಂಧಿ ನಗರದಲ್ಲಿ ಝೀಕಾ ವೈರಸ್​ಗೆ 74 ವರ್ಷದ ವೃದ್ಧ ಬಲಿಯಾಗಿದ್ದಾರೆ. ಜೂನ್​​ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರಲ್ಲಿ ಝೀಕಾ ವೈರಸ್ ಇರುವುದು ಪತ್ತೆಯಾಗಿತ್ತು. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಡಿಸ್ಚಾರ್ಜ್​ ಮಾಡಲಾಗಿತ್ತು. ಗುರುವಾರ ಮನೆಗೆ ಕರೆದೊಯ್ದಿದ್ದರು. ಆದರೆ ನಿನ್ನೆ ಮನೆಯಲ್ಲಿ ವೃದ್ಧ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರದಲ್ಲೂ ಡೆಂಗ್ಯೂಗೆ ವ್ಯಕ್ತಿ ಬಲಿ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ನಿವಾಸಿ ವೇಣು ಡೆಂಗ್ಯೂ ಜ್ವರಕ್ಕೆ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಮೃತರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT