ಹೈಕೋರ್ಟ್  
ರಾಜ್ಯ

ಶಿಸ್ತು ಕಲಿಸುವ ನೆಪದಲ್ಲಿ ಮಕ್ಕಳ ಜೀವಕ್ಕೆ ಎರವಾಗಬೇಡಿ: ಶಿಕ್ಷಕರ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ವಿದ್ಯಾರ್ಥಿನಿ ಮತ್ತೊಬ್ಬ ಯುವಕನ ಜೊತೆ ಮಾತನಾಡುವುದು ಅಶಿಸ್ತು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.

ಬೆಂಗಳೂರು: ಶಿಕ್ಷಕರು ಶಿಸ್ತು ಕಲಿಸುವ ನೆಪದಲ್ಲಿ ಜೀವಕ್ಕೆ ಹಾನಿಯಾಗುವಂತಹ ಕೃತ್ಯಗಳಿಗೆ ಮುಂದಾಗಬಾರದು ಎಂದು ಅಭಿಪ್ರಾಯ ಪಟ್ಟಿರುವ ಹೈಕೋರ್ಟ್, ವಿದ್ಯಾರ್ಥಿನಿಯೊಬ್ಬರಿಗೆ ಬೆದರಿಕೆ ಹಾಕುವ ಮೂಲಕ ಆತ್ಮಹತ್ಯೆಗೆ ಕಾರಣವಾದ ಶಿಕ್ಷಕರ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ.

ಸಹಪಾಠಿಯೊಬ್ಬರನ್ನು ಚುಂಬಿಸುವ ವಿಡಿಯೋವನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ ವಿದ್ಯಾರ್ಥಿನಿ ಸಾವಿಗೆ ಕಾರಣವಾಗಿದ್ದ ಆರೋಪದಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಧರ್ಮಸ್ಥಳದ ಖಾಸಗಿ ಪ್ರೌಢ ಶಾಲೆ ಕಲಾ ಶಿಕ್ಷಕರಾದ ರೂಪೇಶ್ ಮತ್ತು ಸದಾನಂದ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು ಘಟನೆ ಕುರಿತು ವಿಚಾರಣೆ ನಡೆಸಬೇಕಾದ ಅಗತ್ಯವಿದೆ ಎಂದು ತಿಳಿಸಿ ಅರ್ಜಿ ವಜಾಗೊಳಿಸಿದೆ.

ಅಲ್ಲದೆ, ಹದಿಹರೆಯದ ಮಕ್ಕಳಿಗೆ ಶಿಕ್ಷಕರು ಬೋಧನೆ ಮಾಡುವ ಸಂದರ್ಭದಲ್ಲಿ ಅವರ ಮಾನಸಿಕ ಸ್ಥಿತಿಗತಿ ಗಮನದಲ್ಲಿಟ್ಟುಕೊಳ್ಳಬೇಕು. ಬದಲಿಗೆ ಮಕ್ಕಳನ್ನು ನಿರ್ಜಿವಿಗಳಂತೆ ನೋಡಬಾರದು ಎಂದು ತಿಳಿಸಿದೆ. ದೂರುದಾರರ ಹೇಳಿಕೆಯ ಪರಿಶೀಲನೆಯು ನ್ಯಾಯಾಲಯದ ಆತ್ಮಸಾಕ್ಷಿಯನ್ನು ಆಘಾತಗೊಳಿಸುತ್ತದೆ ಮತ್ತು ಅರ್ಜಿದಾರರು ಯಾವ ಶಿಸ್ತನ್ನು ಕಲಿಸಲು ಬಯಸಿದ್ದರು ಎಂಬುದು ನಿಜಕ್ಕೂ ನಿಗೂಢವಾಗಿದೆ. ಶಿಕ್ಷಕರು ಮತ್ತು ಬೋಧಕರ ನಡುವೆ ಸೌರ್ಹಾದ ಸಂಬಂಧವಿರಬೇಕು. ಮಕ್ಕಳ ವಿಚಾರದಲ್ಲಿ ಶಿಕ್ಷಕರಲ್ಲಿನ ಸಂಕುಚಿತ ದೃಷ್ಟಿಕೋನ ಬದಲಾಗಬೇಕು. ವಿದ್ಯಾರ್ಥಿಗಳ ಜೀವನ ಅತ್ಯಂತ ಅಮೂಲ್ಯವಾಗಿದ್ದು, ಶಿಕ್ಷಕರು ಶಿಸ್ತು ಕಲಿಸುವ ನೆಪದಲ್ಲಿ ಕ್ಷಮಿಸಲಾಗದ ಕೃತ್ಯಗಳನ್ನು ಮಾಡುವ ಮೂಲಕ ಮಕ್ಕಳ ಜೀವ ಆಕಸ್ಮಿಕವಾಗಿ ಕಳೆದುಕೊಳ್ಳುವಂತೆ ಮಾಡಬಾರದು ಎಂದು ಪೀಠ ತಿಳಿಸಿದೆ.

ಅಲ್ಲದೆ, ಶಿಕ್ಷಕ ಸದಾನಂದ ಎಂಬುವರು ಮೃತ ವಿದ್ಯಾರ್ಥಿನಿ ಬಳಿ ನೀನು ಮತ್ತೊಬ್ಬ ಯುವಕನನ್ನು ಚುಂಬಿಸುತ್ತಿರುವ ವಿಡಿಯೋ ತನ್ನ ಬಳಿ ಇದೆ. ಅದನ್ನು ಎಲ್ಲರಿಗೂ ತಿಳಿಯುವಂತೆ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂಬುದಾಗಿ ಮೃತ ವಿದ್ಯಾರ್ಥಿನಿ ಮರಣಪೂರ್ವ ಹೇಳಿಕೆ ನೀಡಿದ್ದರು. ಪ್ರಕರಣ ಸಂಬಂಧ ಅದೇ ಶಾಲೆಯ ಚಿತ್ರಕಲಾ ಶಿಕ್ಷಕ ರೂಪೇಶ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಸದಾನಂದ ವಿರುದ್ಧ ವಿದ್ಯಾರ್ಥಿನಿ ತಾಯಿ ದೂರು ಸಲ್ಲಿಸಿದ್ದರು.

ಶಿಕ್ಷಕರಾಗಿರುವ ಅರ್ಜಿದಾರರು ವಿದ್ಯಾರ್ಥಿನಿ ಅಶಿಸ್ತಿನಿಂದ ನಡೆದುಕೊಂಡಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ವಿದ್ಯಾರ್ಥಿನಿ ಮತ್ತೊಬ್ಬ ಯುವಕನ ಜೊತೆ ಮಾತನಾಡುವುದು ಅಶಿಸ್ತು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ. ಶಿಕ್ಷಕರು ವಿದ್ಯಾರ್ಥಿನಿಯೊಂದಿಗೆ ಸೂಕ್ಷ್ಮವಾಗಿ ವ್ಯವಹರಿಸುಲ್ಲಿ ಸೋತಿದ್ದಾರೆ, ಮಗುವಿನ ಜೀವ ಅಮೂಲ್ಯವಾದದ್ದು ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT