ಸಿಎಂ ಸಿದ್ದರಾಮಯ್ಯ 
ರಾಜ್ಯ

SC/ST UPSC ಆಕಾಂಕ್ಷಿಗಳ ಅನುದಾನ ಹೆಚ್ಚಳ: ರಾಜ್ಯ ಸರ್ಕಾರ

ಐಎಎಸ್, ಐಆರ್'ಎಸ್ ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ ಎಸ್‌ಸಿ ಮತ್ತು ಎಸ್‌ಟಿ ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು.

ಬೆಂಗಳೂರು: ನವದೆಹಲಿಯಲ್ಲಿ ನಾಗರಿಕ ಸೇವಾ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಕರ್ನಾಟಕದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ವಿದ್ಯಾರ್ಥಿಗಳಿಗೆ ಮಾಸಿಕ ಆರ್ಥಿಕ ಸಹಾಯವನ್ನು 10,000 ರೂ.ನಿಂದ 15,000 ರೂ.ಗೆ ಹೆಚ್ಚಿಸಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆ ನಡೆಯಿತು. ಸಭೆಯಲ್ಲಿ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಹಲವು ಸೂಚನೆಗಳನ್ನು ನೀಡಿದರು.

ಐಎಎಸ್, ಐಆರ್'ಎಸ್ ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ ಎಸ್‌ಸಿ ಮತ್ತು ಎಸ್‌ಟಿ ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು) ದೆಹಲಿ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಮಾಡಲಾಗುವುದು. ಅಲ್ಲಿ ಎಲ್ಲಾ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದರು.

ಇಡೀ ದೇಶದಲ್ಲಿ scsp/tsp ಕಾಯ್ದೆ ಮಾಡಿರುವುದು ನಾವು ಮಾತ್ರ. ಜನಸಂಖ್ಯೆಗೆ ಅನುಗುಣವಾಗಿ sc-st ಸಮುದಾಯಕ್ಕೆ ಹಣ ಖರ್ಚು ಕೊಡುತ್ತಿರುವುದು ನಾವು ಮಾತ್ರ. ನಮ್ಮ ಸರ್ಕಾರ ಮಾತ್ರ. 2024-25 ನೇ ಸಾಲಿನಲ್ಲಿ 39121.46 ಕೋಟಿ ಇದ್ದರೆ, ಹಿಂದಿನ ವರ್ಷ 35221.84 ಕೋಟಿ ಇತ್ತು. ಇದರಲ್ಲಿ ಬಿಡುಗಡೆ ವೆಚ್ಚದ ಶೇ 99.64 ಕೋಟಿಯಷ್ಟು ಖರ್ಚಾಗಿದೆ. ಉಳಿದದ್ದು ಏಕೆ ಆಗಿಲ್ಲ ಎಂದು ಪ್ರಶ್ನಿಸಿದರು.

ಆಯಾಯ ವರ್ಷವೇ ಶೇ 100 ರಷ್ಟು ಖರ್ಚು ಮಾಡಬೇಕು ಎನ್ನುವ ಕಾನೂನು ಮಾಡಿದ್ದು ನಾವೇ. ಖರ್ಚು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎನ್ನುವ ನಿಯಮವನ್ನೂ ಮಾಡಿದ್ದೇವೆ. ಯಾರು ನಿರ್ಲಕ್ಷ್ಯ ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ನಿರ್ಲಕ್ಷ್ಯಕ್ಕೆ ಕ್ಷಮೆ ಇಲ್ಲ. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಎಸ್‌.ಸಿ.ಎಸ್‌.ಪಿ., ಟಿ.ಎಸ್.ಪಿ. ಕಾಯ್ದೆ 2013 ನ್ನು ಜಾರಿಗೆ ತಂದು, ಸರ್ಕಾರದ ಒಟ್ಟಾರೆ ಅಭಿವೃದ್ಧಿ ಆಯವ್ಯಯದ ಶೇ. 24.1 ರಷ್ಟನ್ನು ಈ ಸಮುದಾಯಗಳ ಅಭಿವೃದ್ಧಿಗೆ ವೆಚ್ಚ ಮಾಡಲಾಗುತ್ತಿದೆ. ಇಂದು ನಡೆದ ರಾಜ್ಯ ಪರಿಷತ್‌ ಸಭೆಯಲ್ಲಿ 2024-25 ನೇ ಸಾಲಿಗೆ ಎಸ್.ಸಿ.ಎಸ್‌.ಪಿ. / ಟಿಎಸ್‌.ಪಿ. ಅಡಿ ಒಟ್ಟಾರೆ. ರೂ.39,121.46 ಕೋಟಿ ಅನುದಾನ ಒದಗಿಸಲಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಇದು ಶೇ.11ರಷ್ಟು ಅಂದರೆ ರೂ.3897 ಕೋಟಿ ಹೆಚ್ಚಳವಾಗಿದೆ. ಎಸ್‌.ಸಿ.ಎಸ್‌.ಪಿ. ಅಡಿ 27,673.96 ಕೋಟಿ ರೂ. ಹಾಗೂ ಟಿ.ಎಸ್.ಪಿ. ಅಡಿ 11447.50 ಕೋಟಿ ರೂ. ಒದಗಿಸಲಾಗಿದೆ. ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಮುಖ್ಯವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 8,480 ಕೋಟಿ ರೂ., ಇಂಧನ ಇಲಾಖೆಗೆ 5026 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ 4174 ಕೋಟಿ ರೂ., ಕಂದಾಯ ಇಲಾಖೆಗೆ 3403 ಕೋಟಿ ರೂ. , ಗ್ರಾಮೀಣಾಭಿವೃದ್ಧಿ ಇಲಾಖೆಗೆ 3163 ಕೋಟಿ ರೂ. ಒದಗಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT