ಬಸವರಾಜ ಬೊಮ್ಮಾಯಿ 
ರಾಜ್ಯ

ರಾಜ್ಯ ಸರ್ಕಾರ ಡೆಂಘಿ ಸಾವಿನ ಸಂಖ್ಯೆ ಮುಚ್ಚಿಡುತ್ತಿದೆ: ಬಸವರಾಜ ಬೊಮ್ಮಾಯಿ ಆರೋಪ

ಹಾವೇರಿಯಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಜನರು ದಾವಣಗೆರೆ ಹುಬ್ಬಳ್ಳಿಗೆ ಹೋಗುತ್ತಿದ್ದಾರೆ. ಸರಿಯಾದ ಚಿಕಿತ್ಸೆ ಸಿಗದೆ ರೋಗಿಗಳು ಸಾವನ್ನಪ್ಪುತ್ತಿದ್ದು, ಸರ್ಕಾರ ಅದನ್ನು ಮುಚ್ಚಿಡುತ್ತಿದೆ

ಶಿಗ್ಗಾವಿ: ರಾಜ್ಯ ಸರ್ಕಾರ ಡೆಂಘಿ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವೈಫಲ್ಯ ಮುಚ್ಚಿಕೊಳ್ಳಲು ಡೆಂಘಿ ರೋಗಿಗಳ ಸಾವಿನ ಸಂಖ್ಯೆ ಮುಚ್ಚಿಡುತ್ತಿದೆ. ಹಾವೇರಿಯಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಜನರು ದಾವಣಗೆರೆ ಹುಬ್ಬಳ್ಳಿಗೆ ಹೋಗುತ್ತಿದ್ದಾರೆ. ಸರಿಯಾದ ಚಿಕಿತ್ಸೆ ಸಿಗದೆ ರೋಗಿಗಳು ಸಾವನ್ನಪ್ಪುತ್ತಿದ್ದು, ಸರ್ಕಾರ ಅದನ್ನು ಮುಚ್ಚಿಡುತ್ತಿದೆ ಎಂದರು.

ಡೆಂಘಿ ಹೆಚ್ಚಾಗುತ್ತಿದೆ ಎಂದು ನಾನು ಮೊದಲೇ ಹೇಳಿದ್ದೆ ಆದರೆ, ಸರ್ಕಾರ ಯಾವುದೇ ವ್ಯವಸ್ಥೆ ಮಾಡಿಲ್ಲ. ರೋಗಿಗಳು ಪರದಾಡುತ್ತಿದ್ದಾರೆ. ಸಾವು ನೋವು ಹೆಚ್ಚಾಗುತ್ತಿವೆ. ಈಗಾಗಲೇ ಹಲವಾರು ಸಾವು ಆಗಿದೆ. ಇಡೀ ರಾಜ್ಯದಲ್ಲಿಯೇ ಅತಿ ಹೆಚ್ಚು ಡೆಂಘಿ ಸಾವು ಹಾವೇರಿಯಲ್ಲಿ ಆಗಿದೆ. ಕೂಡಲೇ ಡಿ.ಹೆಚ್ ಒ ವರ್ಗಾವಣೆ ಮಾಡಬೇಕು. ಸಮರ್ಥ ಡಿ.ಹೆಚ್ ಒ ಹಾಕಬೇಕು ಯಾರನ್ನೂ ವಾಪಾಸ್ ಕಳಿಸದೇ ಚಿಕಿತ್ಸೆ ಮಾಡಬೇಕು. ಆಶಾ ಕಾರ್ಯಕರ್ತೆಯರ ಸಹಾಯ ತೆಗೆದುಕೊಂಡು ಜಾಗೃತಿ ಮೂಡಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ದಿವಾಳಿಯಾಗಿರುವುದನ್ನು ಪ್ರತಿ ಹೆಜ್ಜೆಯಲ್ಲಿ ಪ್ರದರ್ಶನ ಮಾಡುತ್ತಿದೆ. ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡುವುದರಿಂದ ಹಿಡಿದು ಎಲ್ಲಾ ದರ ಹೆಚ್ಚಳ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನವನ್ನು ವರ್ಗಾಯಿಸುತ್ತಿದ್ದಾರೆ. ಎಸ್ ಸಿ ಎಸ್ ಟಿ ಸಮುದಾಯಗಳಿಗೆ 14, 000 ಕೋಟಿ ರೂಪಾಯಿ ಅನುದಾನ ಬಳಕೆ ಆಗಬೇಕಿತ್ತು.ಆದರೆ ಎಲ್ಲಾ ಹಣ ಗ್ಯಾರಂಟಿಗಳಿಗೆ ಹೋಗುತ್ತಿದೆ. ಕಾಂಗ್ರೆಸ್ ನವರು ಓಟಿಗಾಗಿ ಮಾಡಿದ ಯೋಜನೆಗಳಿಗೆ ಎಸ್ ಸಿ ಎಸ್ ಟಿ ಹಣ ಬಳಸುತ್ರಿದ್ದಾರೆ. ಎಸ್ ಸಿ ಎಸ್ ಟಿ ಗಳಿಗೆ ಸರ್ಕಾರ ಮೋಸ ಮಾಡುತ್ತಿದೆ. ಸರ್ಕಾರ ಸುಭದ್ರವಾಗಿದ್ದರೆ ಅವರ ಹಣಕ್ಕೆ ಯಾಕೆ ಕೈ ಹಾಕಿದ್ದಾರೆ. ವಾಲ್ಮೀಕಿ ನಿಗಮದ ಹಣ ಕೂಡಾ ಲೂಟಿ ಮಾಡಿದ್ದಾರೆ. ಎಸ್ ಸಿ ಎಸ್ ಟಿ, ಒಬಿಸಿ ಜನರಿಗೆ ರಾಜ್ಯ ಸರ್ಕಾರ ಸರ್ಕಾರ ದ್ರೋಹ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಚರ್ಚೆ: ಹಾವೇರಿ ವಿಭಾಗದಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಬಳಿ ಮಾತನಾಡಿದ್ದೇನೆ. ಈ ಬಗ್ಗೆ ಚರ್ಚಿಸಲು ಅವರು ಮುಂದಿನ ವಾರ ವಿಶೇಷವಾದ ಸಮಯ ನೀಡಿದ್ದಾರೆ. ಆಮೆಗತಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 4ರ ಕಾಮಗಾರಿ ಹಾಗೂ ಹಾನಗಲ್, ಶಿಗ್ಗಾವಿ, ಸವಣೂರು, ಲಕ್ಷ್ಮೇಶ್ವರ, ಗದಗ ಮಾರ್ಗವಾಗಿ ಹಾಯ್ದು ಹೋಗುವ ಇಳಕಲ್ -ಕಾರವಾರ ರಾಷ್ಟ್ರೀಯ ಹೆದ್ದಾರಿ ಯೋಜನೆ, ರಿಂಗ್ ರಸ್ತೆಗಳ ನಿರ್ಮಾಣ ಕುರಿತು ಪ್ರಾಥಮಿಕ ಹಂತದ ಚರ್ಚೆ ನಡೆಸಿದ್ದೇನೆ. ಈ ಎಲ್ಲ ವಿಷಯಗಳ ಕುರಿತು ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಅಗತ್ಯ ಸಹಕಾರ ನೀಡುವುದಾಗಿ ನಿತಿನ್ ಗಡ್ಕರಿ ತಿಳಿಸಿದ್ದಾರೆ ಎಂದು ಹೇಳಿದರು.

ಇನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜೊತೆಗೆ ಶಿವಮೊಗ್ಗ ಶಿಕಾರಿಪುರ ಮಾರ್ಗವಾಗಿ ರಾಣೆಬೆನ್ನೂರು ಹೊಸ ರೈಲು ಮಾರ್ಗದ ಕುರಿತು ಚರ್ಚೆ ನಡೆಸಲಾಗಿದೆ. ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರದ ಸಹಕಾರ ಅಗತ್ಯವಿದ್ದು, ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಈ ಯೋಜನೆ ಹಾಗೂ ಯಲವಿಗಿ ಗದಗ ರೈಲು ಯೋಜನೆಯನ್ನು ಪ್ರಾರಂಭ ಮಾಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

ಶಿಗ್ಗಾವಿಯಲ್ಲಿ ಜುಲೈ 12 ರಿಂದ ಧನ್ಯವಾದ ಯಾತ್ರೆ: ಬರುವ ಜುಲೈ 12 ನೇ ತಾರೀಖಿನಿಂದ ಹಂತ ಹಂತವಾಗಿ ಧನ್ಯವಾದ ಯಾತ್ರೆ ಮಾಡುತ್ತೇನೆ. ಪ್ರತಿ‌ ಗ್ರಾಮದ ಜನರನ್ನು ಭೇಟಿಯಾಗಿ‌ ಧನ್ಯವಾದ ಹೇಳುತ್ತೇನೆ. ಈ‌ ಮೂಲಕ ಜನರಿಗೆ ಧನ್ಯವಾದ ಹೇಳುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT