ಸಂಸದ ಡಾ. ಸಿಎನ್ ಮಂಜುನಾಥ್ 
ರಾಜ್ಯ

ಡೆಂಗ್ಯೂಗೆ ನಿಖರವಾದ ಚಿಕಿತ್ಸೆ ಅನ್ನೋದು ಇಲ್ಲ; ಮೆಡಿಕಲ್ ಎಮೆರ್ಜೆನ್ಸಿ ಘೋಷಿಸಿ: ಸಂಸದ ಡಾ. ಸಿಎನ್ ಮಂಜುನಾಥ್‌

ಮಳೆಗಾಲದ ಪ್ರಾರಂಭದಲ್ಲಿ ಸೊಳ್ಳೆಯಿಂದ ಹರಡುವ ಕಾಯಿಲೆ ಇದು. ಡೆಂಗ್ಯೂ ತಡೆಗಟ್ಟದಿದ್ರೆ ಚಿಕನ್ ಗುನ್ಯಾ, ಝಿಕಾ ವೈರಸ್ ಬರಬಹುದು ಎಂದು ಎಚ್ಚರಿಸಿದ್ದಾರೆ.

ಬೆಂಗಳೂರು: ಡೆಂಗ್ಯೂಗೆ ನಿಖರವಾದ ಚಿಕಿತ್ಸೆ ಅನ್ನೋದು ಇಲ್ಲ ಇದರ ಜೊತೆಗೆ ಇತರ ಕಾಯಿಲೆಗಳು ಬರುತ್ತವೆ. ಕೋವಿಡ್‌ ಅನ್ನು ಪ್ಯಾಂಡಮಿಕ್‌ ಕಾಯಿಲೆ ಎಂದೆವು. ಇದು ಎಂಡಮೆಕ್‌ ಕಾಯಿಲೆ. ಕೋವಿಡ್‌ ಮಾದರಿಯಲ್ಲಿ ಇದಕ್ಕೆ ಚಿಕಿತ್ಸೆ ನೀಡಬೇಕು. ಮೆಡಿಕಲ್‌ ಎಮರ್ಜೆನ್ಸಿ ಎಂದು ಘೋಷಣೆ ಮಾಡಬೇಕು ಎಂದು ಸಂಸದ ಡಾ.ಸಿಎನ್ ಮಂಜುನಾಥ್ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್ ಅವರು ಡೆಂಗ್ಯೂ ಜ್ವರದ ನಿಯಂತ್ರಣ ಅಂದ್ರೆ ಸೊಳ್ಳೆಯ ನಿಯಂತ್ರಣ. ಸೊಳ್ಳೆ ನಿಯಂತ್ರಣವಾದ್ರೆ ಮಾತ್ರ ಡೆಂಗ್ಯೂ ನಿಯಂತ್ರಣ ಆಗಲಿದೆ. ಮಳೆಗಾಲದ ಪ್ರಾರಂಭದಲ್ಲಿ ಸೊಳ್ಳೆಯಿಂದ ಹರಡುವ ಕಾಯಿಲೆ ಇದು. ಡೆಂಗ್ಯೂ ತಡೆಗಟ್ಟದಿದ್ರೆ ಚಿಕನ್ ಗುನ್ಯಾ, ಝಿಕಾ ವೈರಸ್ ಬರಬಹುದು ಎಂದು ಎಚ್ಚರಿಸಿದ್ದಾರೆ.

ಡೆಂಗ್ಯೂ ರಾಜ್ಯಾದ್ಯಂತ ಹರಡಿರುವುದರಿಂದ ಇದಕ್ಕೆ ತುರ್ತು ಚಿಕಿತ್ಸೆ ನೀಡುವ ಅಗತ್ಯವಿದೆ. ಇದಕ್ಕಾಗಿ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು. ಡೆಂಗ್ಯೂ ನಿಯಂತ್ರಿಸಲು ಪ್ರತ್ಯೇಕ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಡೆಂಗ್ಯೂ‌ ಪರೀಕ್ಷೆಗೆ ದರ ನಿಗದಿ ಮಾಡಲಾಗಿದೆ. ಲ್ಯಾಬ್ ಗಳು ಹೆಚ್ಚು ಹಣ ವಸೂಲಿ ಮಾಡಿದ್ರೆ ಅವುಗಳ ಬಾಗಿಲು ಮುಚ್ಚಿಸಬೇಕು ಎಂದಿದ್ದಾರೆ.

ಡೆಂಗ್ಯೂ ಫೀವರ್‌ಗೆ ಅಡ್ಮಿಟ್ ಆದವರಿಗೆ ಕೋವಿಡ್ ಸಂದರ್ಭದಲ್ಲಿ ಯಾವ ರೀತಿ ಉಚಿತ ಚಿಕಿತ್ಸೆ ನೀಡಲಾಯಿತು. ಅದೇ ರೀತಿ ಡೆಂಗ್ಯೂ ಬಂದವರಿಗೂ ಕನಿಷ್ಠ ಮಾನದಂಡದಲ್ಲಿ ಉಚಿತ ಚಿಕಿತ್ಸೆ ನೀಡಬೇಕು. ಡೆಂಗ್ಯೂ ಬಂದು ಮತ್ತೆ ಹುಷಾರಾಗುವಾಗ ಪ್ಲೇಟ್ ಲೆಟ್ಸ್ ಕಡಿಮೆ ಆಗುತ್ತೆ. ಜೊತೆಗೆ ದೇಹದಲ್ಲಿ ನೀರು ತುಂಬಿಕೊಳ್ಳುತ್ತದೆ.

ಅವಶ್ಯಕತೆ ಇರುವವರಿಗೆ ಮೊದಲೇ ಚಿಕಿತ್ಸೆ ನೀಡಬೇಕು. ಡೆಂಗ್ಯೂ ಕಾಯಿಲೆಗೆ ಬೇಕಾದ ಮಾತ್ರೆಗಳ ಕೊರತೆ ಕೂಡ ಎದುರಾಗಿದೆ. ವಾರ್ ರೂಮ್ ಮೂಲಕ ಮಾನಿಟರ್ ಮಾಡಬೇಕು. ಮುಂದುವರೆದ ದೇಶಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಕಾಯಿಲೆ ತಡೆದಿದ್ದಾರೆ. ಮಸ್ಕ್ಯೂಟೋ ರೆಫಲೆಂಟ್ಸ್ ಅಂತ ಸ್ಟಿಕರ್ ಬರಲಿದೆ. ಅದನ್ನ ಇಲ್ಲೂ ಹಾಕಬೇಕು. ಇದರಿಂದ ಮಕ್ಕಳಿಗೆ ಸೊಳ್ಳೆ ಕಡಿಯೋದ್ರಿಂದ ತಪ್ಪಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT