ಸಂಸದ ಡಾ.ಸಿಎನ್ ಮಂಜುನಾಥ್, ಎಲ್ ಕೆ ಅಡ್ವಾನಿ, ಕೇಂದ್ರ ಸಚಿವ ವಿ ಸೋಮಣ್ಣ online desk
ರಾಜ್ಯ

social Media ಸುಳ್ಳು ಸುದ್ದಿ ಯಡವಟ್ಟು: ಜೀವಂತ ಇರುವ LK ಅಡ್ವಾನಿಗೆ ಸೋಮಣ್ಣ, ಎನ್ ಸಿಎನ್ ಮಂಜುನಾಥ್ ಶ್ರದ್ಧಾಂಜಲಿ!

ಅಡ್ವಾನಿ ನಿಧನದ ಸುದ್ದಿ ಸುಳ್ಳು ಸುದ್ದಿ ಎಂದು ತಿಳಿದ ಕೂಡಲೇ ತಮ್ಮಿಂದ ಆದ ಅಚಾತುರ್ಯಕ್ಕೆ ಕ್ಷಮೆ ಕೋರಿದ ಕೇಂದ್ರ ಸಚಿವ ಸೋಮಣ್ಣ ಸಭೆಯಿಂದ ನಿರ್ಗಮಿಸಿದರು.

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಂದ ಸುಳ್ ಸುದ್ದಿಯನ್ನು ನಂಬಿ ಕೇಂದ್ರ ಸಚಿವ ವಿ ಸೋಮಣ್ಣ, ಸಂಸದ ಡಾ. ಸಿಎನ್ ಮಂಜುನಾಥ್ ಮಾಜಿ ಉಪ ಪ್ರಧಾನಿ, ಮಾಜಿ ಗೃಹ ಸಚಿವ, ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿರುವ ಘಟನೆ ನಡೆದಿದೆ.

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಈ ಯಡವಟ್ಟು ನಡೆದಿದ್ದು, ಬಳಿಕ ಈ ಮಾಹಿತಿ ಸಮಾಜಿಕ ಜಾಲತಾಣದಲ್ಲಿ ಬಂದ ಸುಳ್ಳು ಸುದ್ದಿ ಎಂಬುದನ್ನು ಅರಿತ ಬಳಿಕ ಇಬ್ಬರೂ ನಾಯಕರು ತಮ್ಮಿಂದ ಆದ ಅಚಾತುರ್ಯಕ್ಕೆ ಕ್ಷಮೆ ಕೋರಿದ್ದಾರೆ.

ಗುಬ್ಬಿಯಲ್ಲಿ ನಡೆದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಭಾಷಣ ಮಾಡಿದ ಕೇಂದ್ರ ಸಚಿವ ಸೋಮಣ್ಣ, ತಮಗೆ ಬಂದ ಮಾಹಿತಿಯ ಆಧಾರದಲ್ಲಿ ವೇದಿಕೆಯ ಮೇಲೆ ಮಾತನಾಡುತ್ತಾ, ನಮ್ಮ ನಾಯಕ ಅಡ್ವಾಣಿ ಈಗ ತಾನೇ ನಿಧನರಾದರು ಎಂದು ಘೋಷಿಸಿದರು. ಅಷ್ಟೇ ಅಲ್ಲದೇ ಅಗಲಿದ ನಾಯಕನಿಗೆ 2 ನಿಮಿಷ ಮೌನ ಆಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸೋಣ ಎಂದು ಮನವಿ ಮಾಡಿದರು. ಅಷ್ಟೇ ಅಲ್ಲದೇ ದೆಹಲಿಗೆ ಹೊರಡಬೇಕಿರುವುದರಿಂದ ಕಾರ್ಯಕ್ರಮ ಮುಂದೂಡುತ್ತಿರುವುದಾಗಿ ಹೇಳಿದರು. ಆದರೆ ಅಡ್ವಾನಿ ನಿಧನದ ಸುದ್ದಿ ಸುಳ್ಳು ಸುದ್ದಿ ಎಂದು ತಿಳಿದ ಕೂಡಲೇ ತಮ್ಮಿಂದ ಆದ ಅಚಾತುರ್ಯಕ್ಕೆ ಕ್ಷಮೆ ಕೋರಿ ಸಭೆಯಿಂದ ನಿರ್ಗಮಿಸಿದರು.

ಇನ್ನು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿಎನ್ ಮಂಜುನಾಥ್ ಅವರೂ ಇದೇ ರೀತಿಯ ಯಡವಟ್ಟು ಮಾಡಿಕೊಂಡರು. ಕುಣಿಗಲ್ ನಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು ಎಲ್ ಕೆ ಅಡ್ವಾನಿ ನಿಧನಕ್ಕೆ ಸಂತಾಪ ಸೂಚಿಸಿದರು. ಆದರೆ ಸತ್ಯ ಸಂಗತಿ ತಿಳಿದ ಕೂಡಲೇ ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳು ಸುದ್ದಿಯಿಂದ ಈ ಅಚಾತುರ್ಯವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್