ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಾಲೇಜು ಹಾಸ್ಟೆಲ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!

ಮೃತಪಟ್ಟ ವಿದ್ಯಾರ್ಥಿನಿಯನ್ನು ದ್ವಿತೀಯ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ ಮೊಂಡಲ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ನಗರದ ಎಂಇಎಸ್ ರಸ್ತೆಯಲ್ಲಿರುವ ಮದರ್ ತೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪಶ್ಚಿಮ ಬಂಗಾಳದ 21 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ಪೋಷಕರು ಪಶ್ಚಿಮ ಬಂಗಾಳದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಮೃತಪಟ್ಟ ವಿದ್ಯಾರ್ಥಿನಿಯನ್ನು ದ್ವಿತೀಯ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ ಮೊಂಡಲ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 7.30ರ ಸುಮಾರಿಗೆ ಹಾಸ್ಟೆಲ್‌ ರೂಮಿನಲ್ಲಿ ತನ್ನ ದುಪ್ಪಟ್ಟದೊಂದಿಗೆ ನೇಣು ಬಿಗಿದುಕೊಂಡಿದ್ದ ದಿಯಾಳನ್ನು ನೋಡಿದ ಆಕೆಯ ರೂಮ್ ಮೇಟ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಹಾಸ್ಟೆಲ್ ಸ್ನೇಹಿತೆಯರು ಹಾಗೂ ಆಡಳಿತ ಮಂಡಳಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಕೌಟುಂಬಿಕ ಸಮಸ್ಯೆಗಳೇ ದಿಯಾ ಅವರ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಭಾನುವಾರ ಸಂಜೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಆಕೆಯ ಕುಟುಂಬದವರು ದೂರು ದಾಖಲಿಸಿಕೊಂಡು ಮೃತದೇಹವನ್ನು ಸಂಗ್ರಹಿಸಿದ್ದಾರೆ.

ದಿಯಾ ಮಾನಸಿಕವಾಗಿ ಸದೃಢವಾಗಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿರಲಿಲ್ಲ. ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ, ಸ್ಥಳೀಯ ಹುಡುಗನೊಬ್ಬ ತೊಂದರೆ ನೀಡುತ್ತಿದ್ದ ಬಗ್ಗೆ ಹೇಳಿದ್ದಳು ಎಂದು ಆಕೆಯ ಕುಟುಂಬಸ್ಥರು ಮಾಧ್ಯಮಗಳಿಗೆ ಹೇಳಿರುವುದಾಗಿ ವರದಿಯಾಗಿದೆ.

ನೀವು ಆತ್ಮಹತ್ಯಾ ಆಲೋಚನೆಗಳನ್ನು ಹೊಂದಿದ್ದರೆ ಅಥವಾ ಸ್ನೇಹಿತರ ಬಗ್ಗೆ ಚಿಂತೆ ಮಾಡುತ್ತಿದ್ದರೆ ಅಥವಾ ಮಾನಸಿಕ ಬೆಂಬಲದ ಅಗತ್ಯವಿದ್ದರೆ ಸ್ನೇಹ ಫೌಂಡೇಶನ್ - 04424640050, ಟೆಲಿ ಮನಸ್ - 14416 (24x7 ಲಭ್ಯವಿದೆ) ಅಥವಾ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ ಸಹಾಯವಾಣಿ - 02225521111 ಗೆ ಕರೆ ಮಾಡಿ. ಇದು ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 10 ರವರೆಗೆ ಲಭ್ಯವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT