ಕೋಮಾಗೆ ಜಾರಿದ ವೃದ್ಧ 
ರಾಜ್ಯ

ಬೆಂಗಳೂರಿನಲ್ಲಿ ಫ್ಲೆಕ್ಸ್ ದುರಂತ: ತಲೆ ಮೇಲೆ ಬ್ಯಾನರ್ ಬಿದ್ದು ಗಂಭೀರವಾಗಿ ಗಾಯ, 'ಕೋಮಾ'ಗೆ ಜಾರಿದ ವೃದ್ಧ!

ಶನಿವಾರ ತನ್ನ ಮೊಮ್ಮಗನನ್ನು ಶಾಲೆಯಿಂದ ಕರೆದುಕೊಂಡು ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿತ್ತು. ಫ್ಲೆಕ್ಸ್ ಬ್ಯಾನರ್ ಬಿದ್ದಿದ್ದು, ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿತ್ತು.

ಬೆಂಗಳೂರು: ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿ ಬಿಜೆಪಿ ಶಾಸಕ ವಿಶ್ವನಾಥ್ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಲು ಹಾಕಲಾಗಿದ್ದ ಫ್ಲೆಕ್ಸ್ ತಲೆ ಮೇಲೆ ಬಿದ್ದು ವಯೋವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶನಿವಾರ ತನ್ನ ಮೊಮ್ಮಗನನ್ನು ಶಾಲೆಯಿಂದ ಕರೆದುಕೊಂಡು ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿತ್ತು. ಫ್ಲೆಕ್ಸ್ ಬ್ಯಾನರ್ ಬಿದ್ದಿದ್ದು, ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿತ್ತು. ಇದೀಗ ವೃದ್ಧ ಕೋಮಾಗೆ ಜಾರಿದ್ದಾರೆ. ವೃದ್ಧನನ್ನು ರಾಜಾನುಕುಂಟೆ ನಿವಾಸಿ ಭಕ್ತ ವತ್ಸಲಾ (70) ಎಂದು ಗುರುತಿಸಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಫ್ಲೆಕ್ಸ್ ಬಿದ್ದ ಸ್ಥಳ ಸಿಂಗನಾಯಕನಹಳ್ಳಿ ತನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಸಿಂಗನಾಯಕನಹಳ್ಳಿ ಯಲಹಂಕ ತಾಲೂಕಿಗೆ ಸೇರಿದ್ದು ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ಒತ್ತಿ ಹೇಳಿದೆ. ಕೆಲವು ಮಾಧ್ಯಮಗಳು ಈ ಪ್ರದೇಶ ಬಿಬಿಎಂಪಿ ವ್ಯಾಪ್ತಿಗೆ ಒಳಪಟ್ಟಿದೆ ಎಂದು ತಪ್ಪಾಗಿ ವರದಿ ಮಾಡಿವೆ.

ಬಿಬಿಎಂಪಿ ಈಗಾಗಲೇ ಅನಧಿಕೃತ ಫ್ಲೆಕ್ಸ್ ಬ್ಯಾನರ್‌ಗಳನ್ನು ತೆಗೆದುಹಾಕುತ್ತಿದ್ದು, ತನ್ನ ವ್ಯಾಪ್ತಿಯಲ್ಲಿ ಬ್ಯಾನರ್‌ಗಳನ್ನು ಹಾಕುವವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್