ಡಾ.ಜಿ.ಪರಮೇಶ್ವರ್ 
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸೂಕ್ತ ಸಾಕ್ಷ್ಯಧಾರ ಸಂಗ್ರಹದ ನಂತರ ಚಾರ್ಜ್ ಶೀಟ್- ಗೃಹ ಸಚಿವ ಜಿ. ಪರಮೇಶ್ವರ್

ಪವಿತ್ರಗೌಡ ಭೇಟಿ ಮಾಡಿಸುವ ನೆನಪಿನಲ್ಲಿ ಆರೋಪಿಗಳಲ್ಲಿ ಒಬ್ಬನಾದ ಚಿತ್ರದುರ್ಗದ ದರ್ಶನ್ ತೂಗದೀಪ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರ, ರೇಣುಕಾಸ್ವಾಮಿಯನ್ನು ಜೂನ್ 8 ರಂದು ರಾಜರಾಜೇಶ್ವರಿನಗರದ ಶೆಡ್ ಗೆ ಕರೆದುಕೊಂಡು ಬಂದಿದ್ದ, ನಂತರ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಲಾಗಿತ್ತು.

ಬೆಂಗಳೂರು: ಜನಪ್ರಿಯ ನಟ ದರ್ಶನ್ ತೂಗುದೀಪ್, ಅವರ ಆಪ್ತೆ ಪವಿತ್ರಗೌಡ ಮತ್ತಿತರ 15 ಮಂದಿ ಆರೋಪಿಗಳಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮರ್ಪಕವಾದ ಸಾಕ್ಷ್ಯಧಾರ ಸಂಗ್ರಹದ ನಂತರ ಜಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೋಮವಾರ ತಿಳಿಸಿದರು.

ಎಲ್ಲಾ ಆರೋಪಿಗಳು ಜುಲೈ 18ರವರೆಗೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್ ಅಭಿಮಾನಿ 33 ವರ್ಷದ ರೇಣುಕಾಸ್ವಾಮಿ ಪವಿತ್ರಗೌಡಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದರಿಂದ ಆಕ್ರೋಶಗೊಂಡು ದರ್ಶನ್ ಗ್ಯಾಂಗ್ ಕೊಲೆ ಮಾಡಿದೆ ಎಂದು ಪೊಲೀಸ್ ಮೂಲಗಳು ಹೇಳುತ್ತವೆ. ಜೂನ್ 9 ರಂದು ಸುಮನಹಳ್ಳಿಯ ಅಪಾರ್ಟ್ ಮೆಂಟ್ ವೊಂದರ ಮುಂಭಾಗದ ರಾಜ ಕಾಲುವೆ ಬಳಿ ಆತನ ಮೃತದೇಹ ಪತ್ತೆಯಾಗಿತ್ತು.

ಈ ಘಟನೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ. ಸಾಕ್ಷ್ಯಧಾರಗಳನ್ನು ಸಂಗ್ರಹಿಸಲಾಗುತ್ತಿದೆ. ಬಳಿಕ ಚಾರ್ಜ್ ಶೀಟ್ ಸಲ್ಲಿಸಲಾಗುವುದು, ಅದಕ್ಕೆ ತನ್ನದೇ ಆದ ಪ್ರಕ್ರಿಯೆಗಳಿವೆ. ಸೂಕ್ತವಾದ ಸಾಕ್ಷ್ಯಧಾರ ಸಂಗ್ರಹಿಸಿದ ನಂತರ ಚಾರ್ಜ್ ಶೀಟ್ ಸಲ್ಲಿಸಲಾಗುವುದು, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಅದನ್ನು ಮಾಡುವುದಿಲ್ಲ ಎಂದರು.

ಪವಿತ್ರಗೌಡ ಭೇಟಿ ಮಾಡಿಸುವ ನೆನಪಿನಲ್ಲಿ ಆರೋಪಿಗಳಲ್ಲಿ ಒಬ್ಬನಾದ ಚಿತ್ರದುರ್ಗದ ದರ್ಶನ್ ತೂಗದೀಪ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರ, ರೇಣುಕಾಸ್ವಾಮಿಯನ್ನು ಜೂನ್ 8 ರಂದು ರಾಜರಾಜೇಶ್ವರಿನಗರದ ಶೆಡ್ ಗೆ ಕರೆದುಕೊಂಡು ಬಂದಿದ್ದ, ನಂತರ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು ಸಾಧಿಸಿದು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ