ಬಿಬಿಎಂಪಿ ಕಚೇರಿ(ಸಂಗ್ರಹ ಚಿತ್ರ) 
ರಾಜ್ಯ

ನಗರದಲ್ಲಿ ಭೀತಿ ಹುಟ್ಟಿಸಿದ ಡೆಂಗ್ಯೂ: ಸ್ವಚ್ಛತೆ ಕಾಪಾಡದವರಿಗೆ 500 ರೂ ದಂಡ ವಿಧಿಸಲು BBMP ಮುಂದು!

ಖಾಸಗಿ ಜಾಗಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತಿಯಾಗುವ ಜಾಗ ಹಾಗೂ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಬಿಸಿಮುಟ್ಟಿಸಲು ಪಾಲಿಕೆ ಹೊರಟಿದ್ದು, ಎಲ್ಲೆಂದರಲ್ಲಿ ಕಸ ಎಸೆದರೆ, ನೀರು ನಿಂತು ಸೊಳ್ಳೆ ಬಂದರೆ ಆ ಭೂಮಿ ಮಾಲೀಕರಿಗೆ ದಂಡ ವಿಧಿಸಲು ಮುಂದಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಭೀತಿ ಹುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ಸ್ವಚ್ಛ ಕಾಪಾಡದ ಜನರ ಮೇಲೆ ದಂಡ ಪ್ರಯೋಗಕ್ಕೆ ಬಿಬಿಎಂಪಿ ಮುಂದಾಗಿದೆ.

ಖಾಸಗಿ ಜಾಗಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತಿಯಾಗುವ ಜಾಗ ಹಾಗೂ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಬಿಸಿಮುಟ್ಟಿಸಲು ಪಾಲಿಕೆ ಹೊರಟಿದ್ದು, ಎಲ್ಲೆಂದರಲ್ಲಿ ಕಸ ಎಸೆದರೆ, ನೀರು ನಿಂತು ಸೊಳ್ಳೆ ಬಂದರೆ ಆ ಭೂಮಿ ಮಾಲೀಕರಿಗೆ ದಂಡ ವಿಧಿಸಲು ಮುಂದಾಗಿದೆ.

ಆರೋಗ್ಯ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುನ್ಸಿಪಲ್ ಕಾಯ್ದೆ ಪ್ರಕಾರ ಅಶುಚಿತ್ವಕ್ಕೆ 50 ರೂಪಾಯಿ ದಂಡ ವಿಧಿಸುವ ಅವಕಾಶವಿದೆ. ಆದರೆ, ಇದೀಗ ಆ ದಂಡದ ಮೊತ್ತವನ್ನ 500 ರೂಪಾಯಿಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಏರಿಯಾಗಳು, ಮನೆಗಳು, ಖಾಸಗಿ ಜಾಗಗಳಲ್ಲಿ ಅಶುಚಿತ್ವ ಕಂಡು ಬಂದರೆ ಮೊದಲ ಬಾರಿಗೆ 500 ರೂ. ದಂಡ ವಿಧಿಸಲಾಗುತ್ತದೆ. ದಂಡದ ಬಳಿಕವೂ ಶುಚಿತ್ವ ಕಾಪಾಡದಿದ್ದರೆ ಪ್ರತಿನಿತ್ಯ 15 ರೂ. ದಂಡ ವಿಧಿಸೋಕೆ ಪಾಲಿಕೆ ಪ್ರಸ್ತಾವನೆ ಇಟ್ಟಿದೆ. ಸದ್ಯ ಕಾನೂನಿನ ಪ್ರಕಾರ 50 ರೂಪಾಯಿಯಷ್ಟೇ ದಂಡ ವಿಧಿಸಲು ಅವಕಾಶವಿದೆ.

ದಂಡದ ಮೊತ್ತ ಹೆಚ್ಚುವ ಪ್ರಸ್ತಾಪವನ್ನು ಸರ್ಕಾರದ ಮುಂದಿಡಲಾಗಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಲು ನಗರದಲ್ಲಿ ಸುಮಾರು 14 ಲಕ್ಷ ಮನೆಗಳಿಗೆ ಭೇಟಿ ನೀಡಲು ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ದೃಢಪಡಿಸಿದ್ದಾರೆ.

ಈ ಕ್ರಮಗಳು ಜನರ ಸುರಕ್ಷತೆಗೆ ಅತ್ಯಗತ್ಯವಾಗಿರುವುದರಿಂದ ಹೆಚ್ಚಿನ ದಂಡಗಳು ಜನರನ್ನು ಹೆಚ್ಚು ಜಾಗರೂಕರಾಗಿರುವಂತೆ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಆದರೆ, ಪಾಲಿಕೆಯ ಈ ನಿರ್ಧಾರಕ್ಕೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಸಾರ್ವಜನಿಕ ಸ್ಥಳಗಳಷ್ಟು ಕೊಳಕಾಗಿರುವ ಸ್ಥಳಗಳು ಬೆಂಗಳೂರಿನಲ್ಲಿ ಬೇಕಾದಷ್ಟಿವೆ. ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದನ್ನೇ ಮರೆತಿರೋ ಪಾಲಿಕೆ, ಇದೀಗ ಜನಸಾಮಾನ್ಯರ ಮೇಲೆ ದಂಡ ಹಾಕಲು ಹೊರಟಿರೋದಕ್ಕೆ ಸಿಲಿಕಾನ್ ಸಿಟಿ ಜನತೆ ಆಕ್ರೋಶ ಹೊರಹೊರ ಹಾಕುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT