ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ 
ರಾಜ್ಯ

Gruhalaksmi Scheme: ತಡವಾಗಿದೆಯಾದರೂ ಇದೇ ತಿಂಗಳಲ್ಲಿ ಅಕೌಂಟ್‌ಗೆ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬರುತ್ತೆ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!

ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಇನ್ನೂ ಪಾವತಿಯಾಗದೇ ಇರುವುದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು.

ಬೆಂಗಳೂರು: ಪಾವತಿಯಾಗದೇ ಇರುವ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ (Gruhalaksmi Scheme) ಕಂತಿನ ಹಣ ಮತ್ತು ಜುಲೈ ತಿಂಗಳ ಕಂತಿನ ಎರಡೂ ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.

ಜೂನ್ (June) ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಇನ್ನೂ ಪಾವತಿಯಾಗದೇ ಇರುವುದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು.

ಈ ಬಗ್ಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ (Women and Children welfare minister) ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಭರವಸೆ ನೀಡಿದ್ದಾರೆ.

ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!