ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ; 23 ಚಾಲಕರ ವಿರುದ್ಧ ಕೇಸ್ ದಾಖಲು

ಬೆಳಗ್ಗೆ 7 ರಿಂದ 9 ರವರೆಗೆ ನಡೆಸಿದ ವಿಶೇಷ ಅಭಿಯಾನದಲ್ಲಿ ಒಟ್ಟು 3016 ಶಾಲಾ ವಾಹನಗಳನ್ನು ತಪಾಸಣೆ ಮಾಡಲಾಗಿದ್ದು, ಈ ಪೈಕಿ 23 ಚಾಲಕರಿಗೆ ಮದ್ಯಪಾನ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ.

ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸುತ್ತಿದ್ದ 23 ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

ಬೆಳಗ್ಗೆ 7 ರಿಂದ 9 ರವರೆಗೆ ನಡೆಸಿದ ವಿಶೇಷ ಅಭಿಯಾನದಲ್ಲಿ ಒಟ್ಟು 3016 ಶಾಲಾ ವಾಹನಗಳನ್ನು ತಪಾಸಣೆ ಮಾಡಲಾಗಿದ್ದು, ಈ ಪೈಕಿ 23 ಚಾಲಕರಿಗೆ ಮದ್ಯಪಾನ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ 23 ಚಾಲಕರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗಿದೆ ಮತ್ತು ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅವರ ಚಾಲನಾ ಪರವಾನಗಿಯನ್ನು ಆಯಾ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ರವಾನಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ(ಸಂಚಾರ) ಎಂ ಎನ್ ಅನುಚೇತ್ ಅವರು ತಿಳಿಸಿದ್ದಾರೆ.

"ವಿಶೇಷ ಚಾಲನೆಯ ಸಂದರ್ಭದಲ್ಲಿ, ಫಿಟ್‌ನೆಸ್ ಪ್ರಮಾಣಪತ್ರವಿಲ್ಲದ 11 ವಾಹನಗಳು ಕಂಡುಬಂದಿದ್ದು, ಮುಂದಿನ ಅಗತ್ಯ ಕ್ರಮಕ್ಕಾಗಿ ಸಂಬಂಧಪಟ್ಟ ಆರ್‌ಟಿಒಗಳಿಗೆ ಹಸ್ತಾಂತರಿಸಲಾಗುವುದು.

ವಿದ್ಯಾರ್ಥಿಗಳು ಮತ್ತು ಇತರ ರಸ್ತೆ ಬಳಕೆದಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇಂತಹ ವಿಶೇಷ ಡ್ರೈವ್‌ಗಳು ನಿಯಮಿತವಾಗಿ ಮುಂದುವರಿಯುತ್ತವೆ" ಎಂದು ಅನುಚೇತ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT