ಚಡ್ಡಿ ಗ್ಯಾಂಗ್ ನ ನಾಲ್ವರು ಸದಸ್ಯರನ್ನು ಬಂಧಿಸಿದ ಪೊಲೀಸರು  
ರಾಜ್ಯ

ಮಂಗಳೂರು: ಚಡ್ಡಿ ಗ್ಯಾಂಗ್ ನ ನಾಲ್ವರು ಸದಸ್ಯರ ಬಂಧನ

ದರೋಡೆಕೋರರು ಪರಾರಿಯಾಗಿದ್ದ ಕಾರು ಘಟನಾ ಸ್ಥಳದಿಂದ 25 ಕಿ.ಮೀ ದೂರವಿರುವ ಮುಲ್ಕಿ ಬಸ್ ನಿಲ್ದಾಣದ ಬಳಿ ಪತ್ತೆಯಾಗಿತ್ತು.

ಮಂಗಳೂರು: ವೃದ್ಧ ದಂಪತಿಗಳ ಮನೆಗೆ ಕನ್ನ ಹಾಕಿ, ಚಿನ್ನಾಭರಣ ಸೇರಿದಂತೆ ಮೌಲ್ಯಯುತ ವಸ್ತುಗಳನ್ನು ದರೋಡೆ ಮಾಡಿದ್ದ ನಟೋರಿಯಸ್ ಚಡ್ಡಿ ಗ್ಯಾಂಗ್ ನ ನಾಲ್ವರು ಸದಸ್ಯರನ್ನು ಮಂಗಳೂರು ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದರೋಡೆ ನಡೆದಿತ್ತು. ಕೋಟೆಕಣಿ ರಸ್ತೆಯಲ್ಲಿರುವ ವಿಕ್ಟರ್ ಮೆಂಡೋನ್ಕಾ ಮತ್ತು ಪೆಟ್ರೀಷಿಯಾ ಮೆಂಡೋನ್ಕಾ ಮನೆಗೆ ಮಧ್ಯ ರಾತ್ರಿ 1:45 ರ ವೇಳೆಗೆ ಕಿಟಕಿ ಗ್ರಿಲ್ ಗಳನ್ನು ಮುರಿಯುವ ಮೂಲಕ ನುಗ್ಗಿದ ಗ್ಯಾಂಗ್ ನ ಸದಸ್ಯರು, ವೃದ್ಧ ದಂಪತಿಗೆ ಥಳಿಸಿ ಚಿನ್ನಾಭರಣ, ವಾಚ್, ಮೊಬೈಲ್ ಫೋನ್ ಸೇರಿದಂತೆ 13 ಲಕ್ಷಕ್ಕೂ ಹೆಚ್ಚಿನ ಮೌಲ್ಯವುಳ್ಳ ವಸ್ತುಗಳನ್ನು ದರೋಡೆ ಮಾಡಿ, ಮನೆಯ ಮಾಲಿಕರ ಕಾರಿನಲ್ಲೇ ಪರಾರಿಯಾಗಿದ್ದಾರೆ.

ದರೋಡೆಕೋರರು ಪರಾರಿಯಾಗಿದ್ದ ಕಾರು ಘಟನಾ ಸ್ಥಳದಿಂದ 25 ಕಿ.ಮೀ ದೂರವಿರುವ ಮುಲ್ಕಿ ಬಸ್ ನಿಲ್ದಾಣದ ಬಳಿ ಪತ್ತೆಯಾಗಿತ್ತು.

ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂಲ್ಕಿ ಬಸ್ ನಿಲ್ದಾಣದ ಬಳಿಯಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಗ್ಯಾಂಗ್ ಮತ್ತೊಂದು ಬಸ್‌ನಲ್ಲಿ ಬೆಂಗಳೂರಿಗೆ ತೆರಳುವ ಮೊದಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಂಗಳೂರಿಗೆ ಮರಳಿದೆ ಎಂಬುದು ತಿಳಿದುಬಂದಿದೆ. ಬಸ್ ಕಂಡಕ್ಟರ್ ಅವರನ್ನು ಸಂಪರ್ಕಿಸಿ, ಹಾಸನ ಎಸ್ಪಿಗೆ ಮಾಹಿತಿ ನೀಡಿದ ನಂತರ ಸಕಲೇಶಪುರ ಡಿವೈಎಸ್ಪಿ ನೇತೃತ್ವದ ತಂಡ ಸಕಲೇಶಪುರ ಬಳಿ ಬಸ್ ನ್ನು ತಡೆದು ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳು ತಪ್ಪೊಪ್ಪಿಕೊಂಡಿದ್ದು, ಅವರ ಬಳಿಯಿದ್ದ ಸುಲಿಗೆ ಮಾಡಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜು ಸಿಂಗ್ವಾನಿಯಾ (24) ಮಯೂರ್ (30) ಬಾಲಿ (22) ಮತ್ತು ವಿಕ್ಕಿ (21) ಬಂಧಿತ ಆರೋಪಿಗಳಾಗಿದ್ದು ಎಲ್ಲರೂ ಮಧ್ಯಪ್ರದೇಶದವರಾಗಿದ್ದಾರೆ. ಚಡ್ಡಿ ಗ್ಯಾಂಗ್‌ನ ಸದಸ್ಯರು ಶಾರ್ಟ್ಸ್ ಧರಿಸಿ ಬರಿಗಾಲಿನಲ್ಲಿ ಚಲಿಸುತ್ತಾರೆ ಮತ್ತು ಮಳೆಗಾಲದಲ್ಲಿ ಸಕ್ರಿಯರಾಗಿರುತ್ತಾರೆ.

ಡಕಾಯಿತರು ತಮ್ಮ ಮೂರು ಮೊಬೈಲ್ ಫೋನ್‌ಗಳನ್ನು ಒಡೆದು ಹಾಕಿದರು ಮತ್ತು ದೀಪಗಳನ್ನು ಆನ್ ಮಾಡಲು ಅವಕಾಶ ನೀಡಲಿಲ್ಲ ಎಂದು ಪೆಟ್ರೀಷಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ ವಿಕ್ಟರ್ ಗೆ ಕಾಲು ಮುರಿತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆಟ್ರೀಷಿಯಾ ಅವರು ಎಚ್ಚರಗೊಂಡಾಗ ಸ್ಕ್ರೂ ಡ್ರೈವರ್‌ನಿಂದ ಆಕೆ ಮೇಲೆ ಹಲ್ಲೆ ನಡೆಸಲಾಯಿತು.

ಜೂನ್ 7ರ ವಾರದ ಅವಧಿಯಲ್ಲಿ ನಗರದ ಕೋಡಿಕಲ್‌ನಲ್ಲಿ ನಡೆದ ಮನೆಗಳ್ಳತನದಲ್ಲಿ ಇದೇ ಗ್ಯಾಂಗ್ ಭಾಗಿಯಾಗಿದೆಯೇ ಎಂದು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗ್ಯಾಂಗ್ ಪ್ರದೀಪ್ ಮನೆಯಲ್ಲಿ 10,000 ರೂ. ಗಳನ್ನು ದೋಚಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್