ಚಿರತೆ (ಸಾಂದರ್ಭಿಕ ಚಿತ್ರ) 
ರಾಜ್ಯ

ಚಿರತೆ ಹತ್ಯೆ: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಚಿರತೆ ಬೆಳಿಗ್ಗೆ ಮೂವರ ಮೇಲೆ ಹಾಗೂ ಮಧ್ಯಾಹ್ನ ಒಬ್ಬರ ಮೇಲೆ ದಾಳಿ ಮಾಡಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಬಂಡೆಗಲ್ಲುಗಳ ಮಧ್ಯೆ ಕುಳಿತಿದ್ದ ಚಿರತೆಯನ್ನು ಭರ್ಚಿಯಿಂದ ಹೊಡೆದು ಕೊಂದು ಹಾಕಿದ್ದರು.

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕಮದಾಳ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಸಮ್ಮುಖದಲ್ಲಿ ಸಾರ್ವಜನಿಕರೇ ಚಿರತೆ ಕೊಂದ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ.

ಚಿರತೆಯನ್ನು ಹಿಡಿದು ಅರಣ್ಯ ಪ್ರದೇಶಕ್ಕೆ ಸಾಗಿಸುವ ಹಾಗೂ ಚಿರತೆಯ ಪ್ರಾಣ ಉಳಿಸುವ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದ ರಾಯಚೂರಿನ ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿ ಸಮ್ಮುಖದಲ್ಲೇ ಸಾರ್ವಜನಿಕರು ಚಿರತೆಯನ್ನು ಹತ್ಯೆ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹೊಣೆಗಾರಿಕೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿರುವ ಅಧಿಕಾರಿ ವಿರುದ್ಧ ಇಲಾಖೆಯಿಂದ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕ್ರಮ ಕೈಗೊಂಡು ಶೀಘ್ರ ವರದಿ ಸಲ್ಲಿಸಬೇಕು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರದಲ್ಲಿ ನಿರ್ದೇಶನ ನೀಡಿದ್ದಾರೆ.

ಚಿರತೆ ದೇವದುರ್ಗ ತಾಲ್ಲೂಕಿನಲ್ಲಿ ಮೂರು ತಿಂಗಳಿಂದ ಓಡಾಡುತ್ತಿತ್ತು. ತಾಲ್ಲೂಕಿನ ಅನೇಕ ಗ್ರಾಮಗಳ ಗ್ರಾಮಸ್ಥರು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅರವಳಿಕೆ ನೀಡಿ ಅಥವಾ ಬಲೆ ಹಾಕಿ ಹಿಡಿದು ಬೇರೆ ಕಡೆಗೆ ಸಾಗಿಸುವಂತೆ ಮನವಿಯನ್ನೂ ಮಾಡಿದ್ದರು.

ಭಾನುವಾರ ಚಿರತೆ ದಿನವೀಡಿ ಒಂದೇ ಗ್ರಾಮದಲ್ಲಿ ಇದ್ದರೂ ಅದನ್ನು ಹಿಡಿಯುವ ಪ್ರಯತ್ನ ನಡೆಯಲಿಲ್ಲ. ಚಿರತೆ ಬೆಳಿಗ್ಗೆ ಮೂವರ ಮೇಲೆ ಹಾಗೂ ಮಧ್ಯಾಹ್ನ ಒಬ್ಬರ ಮೇಲೆ ದಾಳಿ ಮಾಡಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಬಂಡೆಗಲ್ಲುಗಳ ಮಧ್ಯೆ ಕುಳಿತಿದ್ದ ಚಿರತೆಯನ್ನು ಭರ್ಚಿಯಿಂದ ಹೊಡೆದು ಕೊಂದು ಹಾಕಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT