ಎಸ್ಐಟಿ ವಿಚಾರಣೆಗೆ ನಾಗೇಂದ್ರ ಹಾಜರು PTI
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಐದು ಗಂಟೆಗಳ ಕಾಲ SITಯಿಂದ ಮಾಜಿ ಸಚಿವ ನಾಗೇಂದ್ರ ತೀವ್ರ ವಿಚಾರಣೆ

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರು ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಪ್ರಕರಣದಲ್ಲಿ ನಾಗೇಂದ್ರ ಹೆಸರು ಕೇಳಿಬಂದಿದ್ದರಿಂದ ಜೂನ್ 6ರಂದು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರರನ್ನು ವಿಶೇಷ ತನಿಖಾ ತಂಡ ಮಂಗಳವಾರ ವಿಚಾರಣೆ ನಡೆಸಿದೆ.

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರು ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಪ್ರಕರಣದಲ್ಲಿ ನಾಗೇಂದ್ರ ಹೆಸರು ಕೇಳಿಬಂದಿದ್ದರಿಂದ ಜೂನ್ 6ರಂದು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಚಂದ್ರಶೇಖರನ್ ಡೆತ್ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಸರ್ಕಾರಿ ಸ್ವಾಮ್ಯದ ನಿಗಮಕ್ಕೆ ಸೇರಿದ 187 ಕೋಟಿ ರೂಪಾಯಿಯನ್ನು ಅದರ ಬ್ಯಾಂಕ್ ಖಾತೆಯಿಂದ ಅನಧಿಕೃತವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಚಂದ್ರಶೇಖರನ್ ಆರೋಪಿಸಿದ್ದರು. ಇದಲ್ಲದೆ, ಕೆಲವು ಐಟಿ ಕಂಪನಿಗಳು ಮತ್ತು ಹೈದರಾಬಾದ್ ಮೂಲದ ಸಹಕಾರಿ ಬ್ಯಾಂಕ್‌ನ ವಿವಿಧ ಖಾತೆಗಳಿಗೆ 88.62 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಜಮಾ ಮಾಡಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರವು ಅದರ ತನಿಖೆಗಾಗಿ ಎಸ್‌ಐಟಿಯನ್ನು ರಚಿಸಿದ್ದರೆ, ಕೇಂದ್ರೀಯ ತನಿಖಾ ದಳವೂ ಏಕಕಾಲದಲ್ಲಿ ತನಿಖೆ ನಡೆಸುತ್ತಿದೆ.

ಇನ್ನು ಇಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ ಹೊಂದಿದ್ದ ನಾಗೇಂದ್ರ ಅವರನ್ನು ಐದು ಗಂಟೆಗೂ ಹೆಚ್ಚು ಕಾಲ ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದರು. ಈ ವೇಳೆ ನಿಗಮದ ಅಧ್ಯಕ್ಷರೂ ಆಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಸನಗೌಡ ದದ್ದಲ್‌ ಸಹ ವಿಚಾರಣೆಗೆ ಹಾಜರಾಗಿದ್ದಾರೆ. ಏತನ್ಮಧ್ಯೆ, ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಇಬ್ಬರು ನಿಗಮದ ಅಧಿಕಾರಿಗಳ ನಡುವಿನ ಸಂಭಾಷಣೆಯ ಎರಡು ಆಡಿಯೊ ಕ್ಲಿಪ್‌ಗಳು ವೈರಲ್ ಆಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಆಡಿಯೋ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಆದರೆ, ವಿಚಾರಣೆ ನಡೆಯುತ್ತಿದ್ದು, ಇದರಲ್ಲಿ ಯಾವುದೇ ಹಸ್ತಕ್ಷೇಪವಿಲ್ಲ. ನಾವು ತನಿಖಾ ತಂಡಕ್ಕೆ ಮುಕ್ತ ಹಸ್ತ ನೀಡಿದ್ದೇವೆ. ಈಗಾಗಲೇ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶೀಘ್ರದಲ್ಲೇ ಸತ್ಯ ಹೊರಬರಲಿದೆ ಎಂದು ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT