ಸಾಂದರ್ಭಿಕ ಚಿತ್ರ 
ರಾಜ್ಯ

ಕನಕಪುರ- ರಾಮನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅನುಮತಿ ನಿರಾಕರಣೆ: ಕೇಂದ್ರ ಸರ್ಕಾರದ 'ರಾಜಕೀಯ' ಎಂದು ಕಾಂಗ್ರೆಸ್ ಆರೋಪ

ವೈದ್ಯಕೀಯ ಕಾಲೇಜು ಮಂಜೂರಾತಿ ಮತ್ತು ಅನುಮೋದನೆ ಹಿಂದೆ ಕೇಂದ್ರ ಸರ್ಕಾರ ರಾಜಕೀಯ ನಡೆಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಬೆಂಗಳೂರು: ಸಿಬ್ಬಂದಿ ನೇಮಕಾತಿ ಮತ್ತು ಸಮರ್ಪಕ ಮೂಲ ಸೌಕರ್ಯವನ್ನು ಇನ್ನೂ ಕಲ್ಪಿಸದಿರುವ ಕಾರಣ ರಾಮನಗರ ಮತ್ತು ಕನಕಪುರ ವೈದ್ಯಕೀಯ ಕಾಲೇಜುಗಳನ್ನು ರಾಷ್ಟ್ರೀಯ ವೈದ್ಯಕೀಯ ಪರಿಷತ್ತು (ಎನ್‌ಎಂಸಿ) ಕೊನೇ ಹಂತದಲ್ಲಿ ಅನುಮತಿ ನೀಡಲು ನಿರಾಕರಿಸಿದೆ. ವೈದ್ಯಕೀಯ ಕಾಲೇಜು ಮಂಜೂರಾತಿ ಮತ್ತು ಅನುಮೋದನೆ ಹಿಂದೆ ಕೇಂದ್ರ ಸರ್ಕಾರ ರಾಜಕೀಯ ನಡೆಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರವು ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿರಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕನಕಪುರ ಮತ್ತು ರಾಮನಗರದಂತಹ ಗ್ರಾಮಾಂತರ ಪ್ರದೇಶಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ಅನುಮತಿ ನೀಡಿದರೆ ಹಲವಾರು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ನ್ಯಾಯಯುತವಾಗಿಲ್ಲ ಏಕೆಂದರೆ ಒಕ್ಕೂಟದ ಅಧಿಕಾರಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ವೈದ್ಯಕೀಯ ಆಯೋಗವು ರಾಮನಗರ ಮತ್ತು ಕನಕಪುರದಲ್ಲಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲು ಅಗತ್ಯ ಅನುಮತಿಗಳನ್ನು ನಿರಾಕರಿಸಿದೆ ಎಂದು ಅವರು ಆರೋಪಿಸಿದರು. ರಾಮನಗರ ಮತ್ತು ಕನಕಪುರದಲ್ಲಿ ವೈದ್ಯಕೀಯ ಕಾಲೇಜುಗಳ ಅಗತ್ಯವನ್ನು ಒತ್ತಿ ಹೇಳಿದ ರಾಮಲಿಂಗಾ ರೆಡ್ಡಿ, ಹೆಚ್ಚಿನ ಗ್ರಾಮೀಣ ಪ್ರದೇಶಗಳಾಗಿದ್ದು, ಅಂತಹ ಸಂಸ್ಥೆಗಳು ಇಡೀ ಪ್ರದೇಶಕ್ಕೆ ಪ್ರಯೋಜನವನ್ನು ನೀಡುತ್ತವೆ, ಹೀಗಾಗಿ ಈ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ಮಾಡುವುದನ್ನು ಕೇಂದ್ರ ಸರ್ಕಾರ ತಪ್ಪಿಸಬೇಕು ಎಂದು ಒತ್ತಾಯಿಸಿದರು.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈ ಪ್ರದೇಶಗಳಿಗೆ ವೈದ್ಯಕೀಯ ಕಾಲೇಜುಗಳನ್ನು ತರಲು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ, ಹೀಗಾಗಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ನಿರ್ಧಾರದಿಂದ ಬಹುಶಃ ಅಸಮಾಧಾನಗೊಂಡಿದ್ದಾರೆ.

ಸ್ವತಃ ವೈದ್ಯರಾಗಿರುವ ಕುಣಿಗಲ್‌ ಕಾಂಗ್ರೆಸ್‌ ಶಾಸಕ ಡಾ.ರಂಗನಾಥ್‌.ಡಿ, ರಾಮನಗರ ಮತ್ತು ಕನಕಪುರವನ್ನು ಹೊರಗಿಟ್ಟಿದ್ದಕ್ಕೆ ಬೇಸರ ವ್ಯಕ್ತಪಡಿಸಿದರು. ಕನಕಪುರದ ಹಾಲಿ ಉಪ ಮುಖ್ಯಮಂತ್ರಿಯನ್ನು ಗುರಿಯಾಗಿಸಿಕೊಂಡು ರಾಜಕೀಯ ಪ್ರೇರಿತ ನಿರ್ಧಾರ ಕೈಗೊಂಡಿರಬಹುದು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ರಾಮನಗರದ ಕ್ಲಿನಿಕಲ್ ಪ್ರಾಕ್ಟೀಸ್‌ ಸೂಕ್ತತೆ ಬಗ್ಗೆ ಮಾತಾಡಿದ ಡಾ. ರಂಗನಾಥ್ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಾದ ಚೆನ್ನಪಟ್ಟಣ, ಮಳವಳ್ಳಿ ಮತ್ತು ಮಾಗಡಿಯ ವಿದ್ಯಾರ್ಥಿಗಳಿಗೆ ಅಲ್ಲಿನ ಕಾಲೇಜು ಸೇವೆ ಉಪಯೋಗಕ್ಕೆ ಬರುತ್ತಿತ್ತು, ಗ್ರಾಮೀಣ ವಿದ್ಯಾರ್ಥಿಗಳಿಗೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತಿತ್ತುೆ ಎಂದು ಪ್ರತಿಪಾದಿಸಿದ್ದಾರೆ.

ರಾಷ್ಟ್ರೀಯ ವೈದ್ಯಕೀಯ ಆಯೋಗವು ಮೂರು ಸ್ಥಳಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಅನುಮೋದಿಸಿದೆ ಎಂದು ದೃಢಪಡಿಸಿದ್ದರು. ಬೆಂಗಳೂರು ಉತ್ತರದ ವ್ಯಾಪ್ತಿಯ ಬಿಜಿಎಸ್​​ ವೈದ್ಯಕೀಯ ಕಾಲೇಜು, ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್ & ರಿಸರ್ಚ್ ಸೆಂಟರ್ ಹಾಗೂ ಬಾಗಲಕೋಟೆಯ ಎಸ್‌ಆರ್ ವೈದ್ಯಕೀಯ ಕಾಲೇಜು ಸ್ಥಾಪನೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಒಪ್ಪಿಗೆ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಆದರೆ, ಅಪೂರ್ಣ ಮೂಲಸೌಕರ್ಯ ಕೊರತೆಯೇ ರಾಮನಗರ ಮತ್ತು ಕನಕಪುರದ ಅರ್ಜಿಗಳನ್ನು ತಿರಸ್ಕರಿಸಲು ಕಾರಣ ಎಂದು ಅವರು ಹೇಳಿದ್ದಾರೆ. ಕರ್ನಾಟಕವು ಪ್ರಸ್ತುತ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಹೊಂದಿದೆ, ಜೊತೆಗೆ 2 ESI ಕಾಲೇಜುಗಳು ಮತ್ತು 70 ಖಾಸಗಿ ವೈದ್ಯಕೀಯ ಕಾಲೇಜುಗಳನ್ನು ಹೊಂದಿದೆ.

ಕನಕಪುರ ಮತ್ತು ರಾಮನಗರ ಎರಡನ್ನೂ ಪ್ರತಿನಿಧಿಸುವ ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿ.ಕೆ.ಸುರೇಶ್ ತೀವ್ರ ನಿರಾಸೆ ವ್ಯಕ್ತಪಡಿಸಿದ್ದಾರೆ, ‘ರಾಮನಗರ ಮತ್ತು ಕನಕಪುರ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಅನುಮತಿ ನಿರಾಕರಿಸಿರುವುದು ಅತ್ಯಂತ ಬೇಸರ ತಂದಿದೆ, ಇದರಿಂದ ಹಿಂದುಳಿದವರಿಗೆ ಹೆಚ್ಚು ಅನುಕೂಲವಾಗುತ್ತಿತ್ತು. ಆದರೆ ಕೇಂದ್ರದ ಈ ನಿರ್ಣಯದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನಾನುಕೂಲವಾಗತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT