ಬೆಂಗಳೂರು: ಜೈಲಿನ ಊಟದಿಂದ ವಾಂತಿ ಭೇದಿಯಾಗುತ್ತಿದೆ, ಮನೆಯಿಂದ ಊಟ, ಹಾಸಿಗೆ ಮತ್ತು ಪುಸ್ತಕ ತರಿಸಲು ಅವಕಾಶ ಮಾಡಿಕೊಡಿ ಎಂದು ಕೋರಿ ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜುಲೈ 18ಕ್ಕೆ ಮುಂದೂಡಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನ ನ್ಯಾ.ಎಸ್ ಆರ್ ಕೃಷ್ಣಕಮಾರ್ ಪೀಠ ವಿಚಾರಣೆ ನಡೆಸಿತು.
ನಟ ದರ್ಶನ್ ಪರ ವಾದ ಮಂಡಿಸಿದ ವಕೀಲ ಕೆ.ಎನ್ ಫಣೀಂದ್ರ, ಜೈಲು ನಿಯಮಾವಳಿಗಳಲ್ಲಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ದರ್ಶನ್ ಗೆ ಮನೆ ಊಟದ ಅವಕಾಶ ನೀಡಿಲ್ಲ ಎಂದರು.
ಈ ನಡುವೆ ಜೈಲು ಅಧಿಕಾರಿಗಳಿಗೆ ನೋಟಿಸ್ ನೀಡಿದ ನ್ಯಾ ಎಸ್ ಆರ್ ಕೃಷ್ಣಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಿಕೆ ಮಾಡಿತು.