ಬೆಂಗಳೂರು: ನಿಗಮ-ಮಂಡಳಿಗಳಿಗೆ ನೇಮಕ ಮಾಡಲು ನಿರ್ದೇಶನಗಳು ಮತ್ತು ಸದಸ್ಯರ ಪಟ್ಟಿಯನ್ನು ಸಿದ್ಧಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ ಅಧ್ಯಕ್ಷತೆಯ ಸಮಿತಿಯಲ್ಲಿ ಸಚಿವರಾದ ರಾಮಲಿಂಗಾ ರಡ್ಡಿ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಸಂತೋಷ ಲಾಡ್, ಶರಣಪ್ರಕಾಶ ಪಾಟೀಲ, ರಾಜ್ಯಸಭಾ ಸದಸ್ಯ ಜೆ.ಸಿ.ಚಂದ್ರಶೇಖರ, ಶಾಸಕರಾದ ರೂಪಕಲಾ, ರಿಜ್ವಾನ್ ಅರ್ಷದ್, ವಿ.ಆರ್.ಸುದರ್ಶನ, ಹರೀಶ್ ಕುಮಾರ ಸದಸ್ಯರಾಗಿದ್ದಾರೆ.
ಜೂನ್ 24ರಂದು ಪರಮೇಶ್ವರ್ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯಲ್ಲಿ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ರಿಜ್ವಾನ್ ಅರ್ಷದ್ ಅವರು ಸದಸ್ಯರಾಗಿದ್ದರು. ಈಗ ಮತ್ತೆ ನಾಲ್ವರು ಸಚಿವರನ್ನು ಸಮಿತಿಗೆ ಸೇರ್ಪಡೆ ಮಾಡಲಾಗಿದೆ. 11 ಸದಸ್ಯರ ಸಮಿತಿಗೆ ಒಂದು ತಿಂಗಳೊಳಗೆ ಪಟ್ಟಿ ಸಿದ್ಧಪಡಿಸುವಂತೆ ಸೂಚಿಸಲಾಗಿದೆ.