ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿರುವ ಭವಾನಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಕೋರಿ ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ಮೇಲೆ ಭವಾನಿ ರೇವಣ್ಣ ಅವರಿಗೆ ನೋಟಿಸ್ ನೀಡಿದೆ.
ಎಸ್‌ಐಟಿ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. ವಿಚಾರಣೆಯನ್ನು ನ್ಯಾಯಾಪೀಠ ಮುಂದಿನವಾರಕ್ಕೆ ಮುಂದೂಡಿತು. ಹೈಕೋರ್ಟ್ ತನ್ನ ಆದೇಶದಲ್ಲಿ ನೀಡಿರುವ ಕಾರಣಗಳನ್ನು ಗಮನಿಸಿದ ನ್ಯಾಯಾಲಯ ರಾಜಕೀಯ ಕಾರಣಗಳನ್ನು ಬಿಟ್ಟುಬಿಡುವಂತೆ ಹೇಳಿದೆ. ಓಡಿಹೋಗಿ ಕೊನೆಗೆ ಸಿಕ್ಕಿಬಿದ್ದ ಮಗನ ವಿರುದ್ಧದ ಗಂಭೀರ ಆರೋಪಗಳನ್ನೂ ನ್ಯಾಯಾಲಯ ಗಮನಿಸಿದೆ. ಆ ನಂತರ, ಅಂತಹ ಆರೋಪಗಳಲ್ಲಿ, ತನ್ನ ಮಗ ಮಾಡಿದ ಅಪರಾಧಕ್ಕೆ ಕುಮ್ಮಕ್ಕು ನೀಡುವಲ್ಲಿ ತಾಯಿ ಯಾವ ರೀತಿಯ ಪಾತ್ರವನ್ನು ವಹಿಸಿದ್ದಾಳೆ ಎಂದು ನ್ಯಾಯಾಲಯ ಪ್ರಶ್ನಿಸಿದೆ.
ಕರ್ನಾಟಕ ರಾಜ್ಯದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಸಂತ್ರಸ್ತೆಯನ್ನು ಕುಟುಂಬದ ನಿರ್ದೇಶನದ ಮೇರೆಗೆ ಬಂಧನದಲ್ಲಿ ಇರಿಸಲಾಗಿತ್ತು ಇದಕ್ಕೆ ಭವಾನಿ ರೇವಣ್ಣ ನಿರ್ದೇಶನ ನೀಡಿದ್ದರು ಎಂದು ಆರೋಪಿಸಲಾಗಿತ್ತು.
ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಎಸ್‌ಐಟಿ ವಕೀಲ ವಿಎನ್ ರಘುಪತಿ ಮೂಲಕ ಅರ್ಜಿ ಸಲ್ಲಿಸಿದೆ. ಮೈಸೂರು ಮತ್ತು ಹಾಸನ ಪ್ರವೇಶಿಸುವಂತಿಲ್ಲ ಎಂಬ ಷರತ್ತಿನ ಮೇಲೆ ಆಕೆಗೆ ಜಾಮೀನು ನೀಡಲಾಗಿದೆ.