ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯಲ್ಲಿ ಸಿದ್ದರಾಮಯ್ಯ. 
ರಾಜ್ಯ

ರಾಜ್ಯದ ಆರ್ಥಿತಿ ಸ್ಥಿತಿ ಸ್ಥಿರವಾಗಿದೆ, ಅಭಿವೃದ್ಧಿ ಯೋಜನೆಗಳು ಮುಂದುವರೆಯಲಿದೆ: ಸಿಎಂ ಸಿದ್ದರಾಮಯ್ಯ

ಸರ್ವ ಜಾತಿ, ಜನಾಂಗಗಳ ಅನುಕೂಲಕ್ಕಾಗಿ ಕಾಂಗ್ರೆಸ್ ನಿರಂತರವಾಗಿ ಹಲವು ಭಾಗ್ಯಗಳನ್ನು ನೀಡುತ್ತಾ ಬಂದಿದೆ. ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದು ಗ್ಯಾರಂಟಿಗಳನ್ನು ನಾಡಿನ ಜನತೆಯ ಮನೆ-ಮನೆಗೆ ತಲುಪಿಸಿದ್ದೇನೆ.

ಮೈಸೂರು: ರಾಜ್ಯದ ಆರ್ಥಿಕ ಸ್ಥಿತಿ ಸ್ಥಿರವಾಗಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ. ಐದು ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪುನರುಚ್ಛರಿಸಿದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ನೆಹರೂ ಅವಧಿಯಿಂದ ಇವತ್ತಿನವರೆಗೆ ಕಾಂಗ್ರೆಸ್ ನಿರಂತರವಾಗಿ ಸಮಾಜದ ಸಮಗ್ರ ಅಭಿವೃದ್ಧಿಗೆ, ಸರ್ವ ಜನರ ಪ್ರಗತಿ ಮತ್ತು ಸಾಮರಸ್ಯಕ್ಕಾಗಿ ಶ್ರಮಿಸುತ್ತಿದೆ, ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ದಲಿತರು, ಮಹಿಳೆಯರು, ಹಿಂದುಳಿದವರು, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ಕೊಡಬೇಕು ಎನ್ನುವುದು ನನ್ನ ಗುರಿಯಾಗಿದೆ. ಇದೇ ಕಾಂಗ್ರೆಸ್ ಪಕ್ಷದ ಆಧ್ಯತೆಯೂ ಆಗಿದೆ.

ಈ ದೇಶದ ಸ್ವಾತಂತ್ರ್ಯಕ್ಕಾಗಿ ಅತಿ ಹೆಚ್ಚು ಪ್ರಾಣ, ಆಸ್ತಿ, ಪಾಸ್ತಿ ಕಳೆದುಕೊಂಡವರು ನಾವು ಕಾಂಗ್ರೆಸ್ಸಿಗರು. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಮಹಾತ್ಮಗಾಂಧಿ ಕರೆ ಕೊಟ್ಟಾಗ ಜನಸಂಘ ಬ್ರಿಟಿಷರ ಜೊತೆ ಕೈಜೋಡಿಸಿದರೆ ಉಳಿದ ಭಾರತೀಯರೆಲ್ಲರೂ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು ಎಂದು ಹೇಳಿದರು.

ಸರ್ವ ಜಾತಿ, ಜನಾಂಗಗಳ ಅನುಕೂಲಕ್ಕಾಗಿ ಕಾಂಗ್ರೆಸ್ ನಿರಂತರವಾಗಿ ಹಲವು ಭಾಗ್ಯಗಳನ್ನು ನೀಡುತ್ತಾ ಬಂದಿದೆ. ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದು ಗ್ಯಾರಂಟಿಗಳನ್ನು ನಾಡಿನ ಜನತೆಯ ಮನೆ - ಮನೆಗೆ ತಲುಪಿಸಿದ್ದೇನೆ. ಆದರೂ ಬಿಜೆಪಿಯವರು ನಿರಂತರ ಸುಳ್ಳುಗಳನ್ನು ಹುಟ್ಟುಹಾಕುತ್ತಾ, ಗ್ಯಾರಂಟಿಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬಜೆಟ್ ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಪುನರುಚ್ಛರಿಸಿದರು.

ನಾವು ನುಡಿದಂತೆ ನಡೆಯದಿದ್ದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷ 80 ಸಾವಿರ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ. ಬಿಜೆಪಿಯವರು ದೇಶದ ಮತದಾರರನ್ನು ದಡ್ಡರು ಎಂದು ಬಿಂಬಿಸುತ್ತಿದ್ದಾರೆ. ಆದರೆ ನಮ್ಮ ಮತದಾರರು ದಡ್ಡರಲ್ಲ.

ರಾಜ್ಯಕ್ಕೆ ಬರಗಾಲ ಬಂದರೂ ಕೇಂದ್ರ ಸರ್ಕಾರ ನಮ್ಮ ರಾಜ್ಯದ ಪಾಲಿನ ಹಣ ಕೊಡಲಿಲ್ಲ. ನಾವು ಕಾನೂನು ಹೋರಾಟ ಶುರು ಮಾಡಿದೆವು. ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಬಳಿಕ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಸ್ವಲ್ಪ ಹಣ ಬಿಡುಗಡೆ ಮಾಡಿತು. ಹೀಗಾಗಿ ಕೇಂದ್ರದಲ್ಲಿ ರಾಜ್ಯದ ಪರವಾಗಿ ಹೋರಾಟ ಮುಂದುವರೆಸಲು ಎಲ್ಲಾ 28 ಮಂದಿ ಸಂಸದರಿಗೆ ಸೂಚನೆ ನೀಡಿದ್ದೇವೆಂದು ತಿಳಿಸಿದರು.

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ಚಾಮರಾಜನಗರ ಜಿಲ್ಲೆಗೆ ವಸತಿ ನಿಲಯಗಳಲ್ಲಿ ಮೂಲ ಸೌಕರ್ಯಗಳನ್ನು ಸುಧಾರಿಸಲು 300 ಕೋಟಿ ರೂ.ಗಳನ್ನು ಇಲಾಖೆ ಬಿಡುಗಡೆ ಮಾಡಿದ್ದು, ಕ್ಷೇತ್ರದ ಅಭಿವೃದ್ಧಿಗೆ ಒಗ್ಗಟ್ಟಾಗಿ ಶ್ರಮಿಸುತ್ತೇವೆಂದು ಭರವಸೆ ನೀಡಿದರು.

ರೇಷ್ಮೆ ಕೃಷಿಯನ್ನು ಪುನರುಜ್ಜೀವನಗೊಳಿಸಲು, ಅಭಿವೃದ್ಧಿಗೆ ಹಣವನ್ನು ತರಲು ಮತ್ತು ಉದ್ಯೋಗಗಳನ್ನು ಸೃಷ್ಟಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಸಂಸದ ಸುನೀಲ್ ಬೋಸ್ ಅವರು ಮೈಸೂರು ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಚಾಮರಾಜನಗರ-ಸತ್ಯಮಂಗಲ ಸಂಪರ್ಕಿಸುವ ಹೊಸ ರೈಲ್ವೆ ಯೋಜನೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT