ಕಲ್ಲಡ್ಕ ಪ್ರಭಾಕರ್‌ ಭಟ್‌ 
ರಾಜ್ಯ

ಮುಸ್ಲಿಂ ಮಹಿಳೆಯರ ವಿರುದ್ದ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ವಿಚಾರಣೆಗೆ 'ಹೈ' ತಡೆ

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡ ಡಾ.ಪ್ರಭಾಕರ ಭಟ್‌ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ನ್ಯಾಯಾಲಯದಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಈಚೆಗೆ ಮಧ್ಯಂತರ ತಡೆ ನೀಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಪ್ರಭಾಕರ ಭಟ್ ಪರ ಹಿರಿಯ ವಕೀಲ ಎಂ‌ ಅರುಣ್ ಶ್ಯಾಮ್ ವಾದಿಸಿದರು.

2023ರ ಡಿಸೆಂಬರ್ 24ರ ಮಧ್ಯಾಹ್ನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿನ ಸಾರ್ವಜನಿಕ ವೇದಿಕೆಯಲ್ಲಿ ಡಾ.ಪ್ರಭಾಕರ ಭಟ್ ಮಾತನಾಡಿದ್ದರು.

ಮುಸ್ಲಿಂ‌ ಮಹಿಳೆಯರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ದಿನಕ್ಕೊಬ್ಬ ಗಂಡ. ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ ಎಂದು ಹೇಳಿದ್ದಾರೆ. ಈ ಹೇಳಿಕೆಯು ಮಹಿಳೆಯರ ಖಾಸಗಿತ‌ನ, ಮಹಿಳೆಯನ್ನು ಲೈಂಗಿಕವಾಗಿ ನಿಂದಿಸುವ, ಮಹಿಳೆಯ ಮೇಲೆ ಸಾರ್ವಜನಿಕರು ಬಲ ಪ್ರಯೋಗಿಸುವಂತೆ ಪ್ರಚೋದಿಸುವ, ಮಹಿಳೆಗೆ ಲೈಂಗಿಕ, ಜೀವ ಬೆದರಿಕೆ ಒಡ್ಡುವ, ಮಹಿಳೆಯರ ಖಾಸಗಿ ವಿಷಯಗಳನ್ನು ಅಶ್ಲೀಲಗೊಳಿಸುವಿಕೆ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ, ಸಾರ್ವಜನಿಕವಾಗಿ ಮಹಿಳೆಯರನ್ನು ಚುಡಾಯಿಸಿದ, ಮಹಿಳೆಯರ ಘನತೆಗೆ ಅಡ್ಡಿ ಉಂಟು ಮಾಡಿದ ಅಪರಾಧ” ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಬಿನ್ ನಜೀರ್ ಅಹ್ಮದ್ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ 2023ರ ಡಿಸೆಂಬರ್ 26ರಂದು ದೂರು ನೀಡಿದ್ದರು.

ಡಾ.ಪ್ರಭಾಕರ ಭಟ್ ಕಲ್ಲಡ್ಕ ಹಾಗೂ ಇತರರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 354, 294, 509, 506, 153ಎ, 295, 295ಎ ಹಾಗೂ 298ರ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು. ದೂರಿನ ಅನ್ವಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದ ಪೊಲೀಸರು ಶ್ರೀರಂಗಪಟ್ಟಣ ಜೆಎಂಎಫ್‌ಸಿ ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್