ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ  
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ, ಶಾಸಕ ದದ್ದಲ್‌ ನಿವಾಸದಲ್ಲಿ ED ತಪಾಸಣೆ ಮುಂದುವರಿಕೆ, 18 ಕಡೆ ಶೋಧಕಾರ್ಯ

ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ ನಿವಾಸಗಳ ಮೇಲೆ ನಿನ್ನೆ ಆರಂಭವಾದ ಇಡಿ ಶೋಧಕಾರ್ಯ ನಿನ್ನೆ ರಾತ್ರಿ, ಇಂದು ಮುಂಜಾನೆ ಕೂಡ ಮುಂದುವರಿದಿದೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Development Corporation) ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ನಿನ್ನೆ ಬುಧವಾರ ಆರಂಭವಾಗಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಬೃಹತ್ ಕಾರ್ಯಾಚರಣೆ ಇಂದು ಗುರುವಾರ ಕೂಡ ಮುಂದುವರಿದಿದೆ.

ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ನಿವಾಸಗಳ ಮೇಲೆ ನಿನ್ನೆ ಆರಂಭವಾದ ಇಡಿ ಶೋಧಕಾರ್ಯ ನಿನ್ನೆ ರಾತ್ರಿ, ಇಂದು ಮುಂಜಾನೆ ಕೂಡ ಮುಂದುವರಿದಿದೆ.

ಸಚಿವ ನಾಗೇಂದ್ರ ನಿವಾಸದಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಗಳಿಂದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ. ಶಾಸಕ ದದ್ದಲ್ ನಿವಾಸ, ಕಚೇರಿ ಸೇರಿ ಉಳಿದ ಕಡೆಯೂ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ. ಒಟ್ಟು ಹದಿನೆಂಟು ಕಡೆ ಜಾರಿ ನಿರ್ದೇಶನಾಲಯ ದಾಳಿ ನಡೆದಿದ್ದು, ರಾತ್ರಿ ಹನ್ನೆರಡು ಗಂಟೆಗೆ ಅಧಿಕಾರಿಗಳು ದಾಳಿಗೆ ವಿರಾಮ ನೀಡಿದ್ದರು. ದಾಳಿ ಮಾಡಿದ್ದ ಸ್ಥಳದಲ್ಲೇ ಉಳಿದುಕೊಂಡಿದ್ದರು.

ಇಡಿ ಅಧಿಕಾರಿಗಳ ಒಂದು ತಂಡ ನಾಗೇಂದ್ರ ನಿವಾಸದಲ್ಲಿ ಹಾಗೂ ಇನ್ನೊಂದು ತಂಡ ದದ್ದಲ್ ನಿವಾಸದಲ್ಲಿ ಉಳಿದುಕೊಂಡಿದ್ದರು. ಇಂದು ಬೆಳ್ಳಂಬೆಳಗ್ಗೆಯೇ ಶೋಧ ಮುಂದುವರಿಸಿದ್ದಾರೆ. ಒಂದೇ ಕಾಲಕ್ಕೆ ಹದಿನೆಂಟಕ್ಕೂ ಹೆಚ್ಚು ಸ್ಥಳದಲ್ಲಿ ತಪಾಸಣೆ ನಡೆಸಲಾಗಿತ್ತು. ಎಲ್ಲಾ ದಾಳಿ ಸ್ಥಳಗಳಲ್ಲಿ ಏನೆಲ್ಲಾ ದೊರೆತಿದೆ ಎಂದು ಪರಿಶೀಲನೆ ಮಾಡಿ, ನಂತರ ಇಂಟರ್ ಲಿಂಕ್ ಹೊಂದಿರುವ ಸ್ಥಳದಲ್ಲಿ ಮತ್ತೆ ದಾಖಲೆಗಳ ಪರಿಶೀಲನೆ ನಡೆಯುವುದಿದೆ.

ನಿನ್ನೆ ಮಾಜಿ ಸಚಿವ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್‌ನನ್ನು ಇಡಿ ವಶಕ್ಕೆ ಪಡೆದು ತನಿಖೆ ನಡೆಸಿತ್ತು. ಇಂದು ಅಗತ್ಯ ಬಿದ್ದಲ್ಲಿ ಶಾಸಕ ದದ್ದಲ್‌ರನ್ನು ವಶಕ್ಕೆ ಪಡೆಯುವ‌ ಸಾಧ್ಯತೆ ಇದೆ. ಯಲಹಂಕ ಬಳಿ ಇರುವ ದದ್ದಲ್‌‌ ನಿವಾಸದಲ್ಲಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಎದುರಿಸುತ್ತಿರುವ ಮಾಜಿ ಸಚಿವ ನಾಗೇಂದ್ರ ಅವರ ಬಂಧನ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

SCROLL FOR NEXT