ಡಾ ಸತೀಶ್ ಪೂಜಾರಿ(ಸಂಗ್ರಹ ಚಿತ್ರ) 
ರಾಜ್ಯ

ಕರಾವಳಿ ಭಾಗದ ಜನಪ್ರಿಯ ವೈದ್ಯ, ಗಾಯಕ ಡಾ ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ

ತಮ್ಮ ವಿಭಿನ್ನ ಶೈಲಿಯ ಹಾಡುಗಾರಿಕೆಯ ಮೂಲಕ ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದ ಡಾ. ಸತೀಶ್ ಪೂಜಾರಿ ಕರಾವಳಿ ಭಾಗದಲ್ಲಿ ಸಾಂಸ್ಕೃತಿಕ ಮತ್ತು ಸಂಗೀತ ಕಾರ್ಯಕ್ರಮಗಳಿಗೆ ಸದಾ ಕಾಲ ಪ್ರೋತ್ಸಾಹ ನೀಡುತ್ತಿದ್ದರು.

ಕೋಟ: ಶ್ರೀ ಮಾತಾ ಆಸ್ಪತ್ರೆಯ ಮಾಲಿಕ, ಪ್ರವೃತ್ತಿಯಲ್ಲಿ ಗಾಯಕರಾಗಿದ್ದ ಡಾ.ಸತೀಶ್ ಪೂಜಾರಿ (54 ವರ್ಷ) ಹೃದಯಾಘಾತದಿಂದ ಕೋಟತಟ್ಟು ಮಣೂರಿನ ಅವರ ಸ್ವಗೃಹದಲ್ಲಿ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ.

ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯಲ್ಲಿ ಮಾಲೀಕರಾಗಿದ್ದ ಇವರು ಗಾಯಕರಾಗಿ ಕರಾವಳಿ ಭಾಗದಲ್ಲಿ ಜನಪ್ರಿಯತೆ ಗಳಿಸಿದ್ದರು. ಅನೇಕ ಸಂಗೀತ ವೀಡಿಯೊಗಳನ್ನು ಹೊರತಂದಿದ್ದರು.

ಅವರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಡಾ. ಸತೀಶ್ ಪೂಜಾರಿ ಇ.ಎನ್.ಟಿ. ತಜ್ಞ ಕೂಡ ಆಗಿದ್ದರು.

ತಮ್ಮ ವಿಭಿನ್ನ ಶೈಲಿಯ ಹಾಡುಗಾರಿಕೆಯ ಮೂಲಕ ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದ ಡಾ. ಸತೀಶ್ ಪೂಜಾರಿ ಕರಾವಳಿ ಭಾಗದಲ್ಲಿ ಸಾಂಸ್ಕೃತಿಕ ಮತ್ತು ಸಂಗೀತ ಕಾರ್ಯಕ್ರಮಗಳಿಗೆ ಸದಾ ಕಾಲ ಪ್ರೋತ್ಸಾಹ ನೀಡುತ್ತಿದ್ದರು. ಅಲ್ಲದೇ ಬೃಹತ್‌ ಮಟ್ಟದಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಸಹ ಆಯೋಜನೆ ಮಾಡುತ್ತಿದ್ದರು.

ಖ್ಯಾತ ಹಿರಿಯ ಗಾಯಕಿ ಎಸ್ ಜಾನಕಿಯವರ ಅಭಿಮಾನಿಯಾಗಿದ್ದ ಸತೀಶ್ ಪೂಜಾರಿಯವರು ಪ್ರತಿವರ್ಷ ಕೋಟೇಶ್ವರದಲ್ಲಿ ಡಾ ಎಸ್ ಜಾನಕಿ ಪುರಸ್ಕಾರ ಸಮಾರಂಭ ಆಯೋಜಿಸುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT