ನಟ ದರ್ಶನ್ ಬಂಧನ ಸಂದರ್ಭದ ಚಿತ್ರ, ಒಳಚಿತ್ರದಲ್ಲಿ ಮೃತ ರೇಣುಕಾಸ್ವಾಮಿ ಸಂಗ್ರಹ ಚಿತ್ರ  
ರಾಜ್ಯ

ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ: ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನೀಡುತ್ತಿರುವ ಆಹಾರ ಜೀರ್ಣವಾಗುತ್ತಿಲ್ಲ, ದೇಹದ ತೂಕ ಕಳೆದುಕೊಂಡು ವಾಂತಿ-ಭೇದಿಯಾಗುತ್ತಿದೆ, ಇದಕ್ಕಾಗಿ ಮನೆ ಊಟಕ್ಕೆ ಅವಕಾಶ ನೀಡಬೇಕು ಎಂದು ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಮನೆ ಊಟ, ಹಾಸಿಗೆ, ಪುಸ್ತಕಗಳನ್ನು ಪಡೆಯಲು ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ನಟ ದರ್ಶನ್ ಮಾಡಿರುವಂತಹ ಮನವಿಯನ್ನು ಜೈಲು ನಿಯಮಗಳು ಅನುಮತಿಸುತ್ತವೆಯೇ, ಅರ್ಜಿದಾರರ ಮನವಿಯನ್ನು ಬೆಂಬಲಿಸುವ ಯಾವುದೇ ತೀರ್ಪುಗಳು ಮತ್ತು ಆರೋಪಿಗಳು ನೇರವಾಗಿ ಹೈಕೋರ್ಟ್‌ಗೆ ಹೋಗಬಹುದೇ ಎಂದು ಪರಿಶೀಲಿಸುವಂತೆ ಅರ್ಜಿದಾರರ ಪರ ವಕೀಲರು ಮತ್ತು ವಿಶೇಷ ಸರ್ಕಾರಿ ಅಭಿಯೋಜಕರನ್ನು ಕೋರಿದ ನ್ಯಾಯಮೂರ್ತಿ ಎಸ್‌ಆರ್ ಕೃಷ್ಣ ಕುಮಾರ್, ಜುಲೈ 18 ಕ್ಕೆ ವಿಚಾರಣೆಯನ್ನು ಮುಂದೂಡಿದರು.

ಇದಕ್ಕೂ ಮೊದಲು, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್, ಕೊಲೆಯಂತಹ ಘೋರ ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳು ಮನೆಯಿಂದ ಬಟ್ಟೆ ಮತ್ತು ಹಾಸಿಗೆಗೆ ಅರ್ಹರಲ್ಲ ಎಂದು ವಾದಿಸಿದರು. ಮನೆಯ ಆಹಾರಕ್ಕಾಗಿ, ಅವರು ಮೊದಲು ಕಾರಾಗೃಹಗಳ ಪೊಲೀಸ್ ಮಹಾನಿರೀಕ್ಷಕರಿಗೆ ಪ್ರಾತಿನಿಧ್ಯವನ್ನು ಸಲ್ಲಿಸಬೇಕು, ಅದನ್ನು ಪರಿಗಣಿಸದಿದ್ದರೆ, ಅವರು ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬೇಕು ಎಂದು ವಾದಿಸಿದರು.

ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನೀಡುತ್ತಿರುವ ಆಹಾರ ಜೀರ್ಣವಾಗುತ್ತಿಲ್ಲ, ದೇಹದ ತೂಕ ಕಳೆದುಕೊಂಡು ವಾಂತಿ-ಭೇದಿಯಾಗುತ್ತಿದೆ, ಇದಕ್ಕಾಗಿ ಮನೆ ಊಟಕ್ಕೆ ಅವಕಾಶ ನೀಡಬೇಕು ಎಂದು ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT