ಸಂಗ್ರಹಚಿತ್ರ  
ರಾಜ್ಯ

SSLC ಪರೀಕ್ಷೆ-2 ಫಲಿತಾಂಶ ಪ್ರಕಟ: ಶೇ.31.2ರಷ್ಟು ವಿದ್ಯಾರ್ಥಿಗಳು ಪಾಸ್

ಪರೀಕ್ಷೆಗೆ 2,23,293 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 69,275 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಬೆಂಗಳೂರು: ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಜೂನ್‌ನಲ್ಲಿ ನಡೆಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶವನ್ನು ಬುಧವಾರ ಪ್ರಕಟಿಸಿದ್ದು, ಶೇ.31.02 ಅಭ್ಯರ್ಥಿಗಳು ತೇರ್ಗಡೆಯಾಗಿದ್ದಾರೆ.

ಪರೀಕ್ಷಾ ಮಂಡಳಿಯು ಫಲಿತಾಂಶವನ್ನು ಬುಧವಾರ ಇಲಾಖೆ ಜಾಲತಾಣ https://karresults.nic.in ದಲ್ಲಿ ಪ್ರಕಟಿಸಿದೆ.

ಪರೀಕ್ಷೆಗೆ 2,23,293 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 69,275 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. 38,820 ಬಾಲಕರು ಮತ್ತು 30,455 ಬಾಲಕಿಯರು, 27,955 ನಗರ ಪ್ರದೇಶದ ಮತ್ತು 41,320 ಗ್ರಾಮೀಣ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.29.43 ಸರ್ಕಾರಿ, ಶೇ.28,71 ಅನುದಾನಿತ ಮತ್ತು ಶೇ.38.21 ಖಾಸಗಿ ಶಾಲೆ ಮಕ್ಕಳು ಉತ್ತೀರ್ಣರಾಗಿದ್ದಾರೆ.

ಜೂ.14ರಿಂದ 22ರವರೆಗೆ ರಾಜ್ಯದ 724 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಜೂ.26ರಿಂದ 30ರವರೆಗೆ 14 ಶೈಕ್ಷಣಿಕ ಜಿಲ್ಲೆಗಳ 85 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಸಲಾಗಿತ್ತು. 21,658 ಮೌಲ್ಯಮಾಪಕರು ಪಾಲ್ಗೊಂಡಿದ್ದರು.

ಉತ್ತರ ಪತ್ರಿಕೆಗಳ ಸ್ಕಾೃನ್ ಪ್ರತಿಯನ್ನು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜು.15 ಕೊನೆಯ ದಿನವಾಗಿದೆ. ಉತ್ತರ ಪತ್ರಿಕೆಗಳ ಮರು ಎಣಿಕೆಗೆ ಮತ್ತು ಮರು ಮೌಲ್ಯಮಾಪನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜು.18, ಶುಲ್ಕ ಪಾವತಿಸಲು ಜು.19 ಕೊನೆಯ ದಿನವಾಗಿದೆ. ಸ್ಕಾೃನ್ ಪ್ರತಿ, ಮರುಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಮಂಡಳಿ ಜಾಲತಾಣದ ಮೂಲಕವೇ ಅರ್ಜಿ ಸಲ್ಲಿಸಬೇಕು.

ಎಸ್ಸೆಸ್ಸೆಲ್ಸಿ ಪರೀಕ್ಷೆ 1 ಮತ್ತು 2ರಲ್ಲಿ ಅನುತ್ತೀರ್ಣಗೊಂಡಿರುವ ಹಾಗೂ ಫಲಿತಾಂಶ ಸುಧಾರಣೆ ಬಯಸುವ ವಿದ್ಯಾರ್ಥಿಗಳು ಪರೀಕ್ಷೆ-3ಕ್ಕೆ ನೋಂದಣಿ ಮಾಡಿಕೊಳ್ಳಲು ಜು.17 ಕೊನೆಯ ದಿನವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT