ಲೋಕಾಯುಕ್ತ  
ರಾಜ್ಯ

ED ದಾಳಿ ಬೆನ್ನಲ್ಲೇ ಲೋಕಾಯುಕ್ತ ಬೇಟೆ: ರಾಜ್ಯಾದ್ಯಂತ ಏಕಕಾಲದಲ್ಲಿ 11 ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ

ಭ್ರಷ್ಟಾಚಾರ ಎಸಗಿದ ಆರೋಪ ಕೇಳಿಬಂದ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ​​11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಪ್ರಮುಖ ಆರೋಪಿಗಳ ನಿವಾಸಗಳ ಮೇಲೆ ದಾಳಿ ಮಾಡಿದ ಬೆನ್ನಲ್ಲೇ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ.ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ನೇತೃತ್ವದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರ ಎಸಗಿದ ಆರೋಪ ಕೇಳಿಬಂದ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ​​11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. ಕೋಲಾರ ತಹಶೀಲ್ದಾರ್​ ವಿಜಿಣ್ಣ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಹಾಸನದಲ್ಲಿ ಗ್ರೇಡ್-1 ಕಾರ್ಯದರ್ಶಿ ಜಗದೀಶ್​ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆದಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ 11 ಸರ್ಕಾರಿ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.

ಇಂದು ಮುಂಜಾನೆ ಕಾರ್ಯಾಚರಣೆಯಲ್ಲಿ, ಸುಮಾರು 100 ಅಧಿಕಾರಿಗಳು ಒಂಬತ್ತು ಜಿಲ್ಲೆಗಳಲ್ಲಿ ಅಕ್ರಮ ಆಸ್ತಿಯನ್ನು ಸಂಗ್ರಹಿಸಿರುವ ಶಂಕಿತ ಸರ್ಕಾರಿ ಅಧಿಕಾರಿಗಳ ವಿರುದ್ಧ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಜಿಲ್ಲೆಗಳ ಅಧೀಕ್ಷಕರು ದಾಳಿಗಳನ್ನು ಮೇಲ್ವಿಚಾರಣೆ ಮಾಡಿದ್ದಾರೆ. 56 ಸ್ಥಳಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೆಂಗೇರಿ ವಿಭಾಗದಲ್ಲಿರುವ ಕಂದಾಯ ಅಧಿಕಾರಿಯೊಬ್ಬರ ಕಲಬುರಗಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಂಡ್ಯ, ಮೈಸೂರಿನಲ್ಲಿ ದಾಳಿ: ಮೈಸೂರಿನಲ್ಲಿ ನೀರಾವರಿ ಇಲಾಖೆಯ ಸೂಪರಿಡೆಂಟ್ ಇಂಜಿನಿಯರ್ ಮಹೇಶ್ ಕೆ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮೈಸೂರಿನ ಜೆಸಿ ನಗರದಲ್ಲಿರುವ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜತೆಗೆ, ಗೋಕುಲಂ ಕಚೇರಿಯಲ್ಲಿಯೂ ಕಡತಗಳ ಪರಿಶೀಲನೆ ನಡೆಯುತ್ತಿದೆ. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಕಾರ್ಯಾಚರಣೆ ನಡೆದಿದೆ.

ಮಂಡ್ಯದಲ್ಲಿ ನಿವೃತ್ತ ಇಇ ಶಿವರಾಜ್ ಮತ್ತು ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆದಿದೆ. ಮಂಡ್ಯ ಜಿಲ್ಲೆಯ 3 ಕಡೆ, ಮೈಸೂರಿನ 2 ಕಡೆ ದಾಳಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಇಜ್ಜಲಘಟ್ಟದಲ್ಲಿರುವ ಶಿವರಾಜ್​ಗೆ ಸೇರಿದ ಫಾರ್ಮ್​ಹೌಸ್​, ಶಿವರಾಜ್​ ತಂದೆ ಮನೆ, ಜಲ್ಲಿ ಕ್ರಷರ್​​ ಮೇಲೂ ದಾಳಿ ನಡೆದಿದೆ. ಲೋಕಾಯುಕ್ತ ಎಸ್​​​ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ಹಾಸನದಲ್ಲಿ ಪರಿಶೀಲನೆ: ಹಾಸನದಲ್ಲಿ ಗ್ರೇಡ್​​​-1 ಕಾರ್ಯದರ್ಶಿ ಮನೆಗಳ ಮೇಲೆ ದಾಳಿ ನಡೆದಿದೆ. ಗ್ರೇಡ್​​​-1 ಕಾರ್ಯದರ್ಶಿ ಎನ್​ಎಂ ಜಗದೀಶ್​ಗೆ ಸೇರಿದ ಹಾಸನದ ಮನೆ, ಬೆಂಗಳೂರಿನ ಮನೆಗಳಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ. ಲೋಕಾಯುಕ್ತ ಡಿವೈಎಸ್​​ಪಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ.

ಚಿತ್ರದುರ್ಗದಲ್ಲಿ ನಿವೃತ್ತ ಇಂಜಿನಿಯರ್​​ ಎಂ ರವೀಂದ್ರಗೆ ಸೇರಿದ ಮನೆ, ಫಾರ್ಮ್​ಹೌಸ್​ ಮೇಲೆ ದಾಳಿ ನಡೆದಿದೆ. ಹಿರಿಯೂರು ತಾಲೂಕಿನ ಸೂಗೂರು ಫಾರ್ಮ್​ಹೌಸ್​​ ಮೇಲೆ ದಾಳಿ ನಡೆದಿದೆ. ಜತೆಗೆ, ಐಮಂಗಲ ಬಳಿ ಬಾಟಲಿ ಫ್ಯಾಕ್ಟರಿ ಮೇಲೂ ದಾಳಿ ನಡೆದಿದೆ. ಲೋಕಾಯುಕ್ತ ಎಸ್​ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಕೋಲಾರದಲ್ಲಿ ತಹಸೀಲ್ದಾರ್, ಸೂಪರಿಂಟೆಂಡಿಂಗ್ ಎಂಜಿನಿಯರ್, ಕಾರ್ಯಪಾಲಕ ಎಂಜಿನಿಯರ್ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮನೆ ಮೇಲೆ ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT