ಅಪರ್ಣಾ 
ರಾಜ್ಯ

ಸಿನಿ, ರಾಜಕೀಯ ರಂಗದ ಗಣ್ಯರಿಂದ ಅಪರ್ಣಾ ಅಂತಿಮ ದರ್ಶನ, ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ!

ತಾರಾ, ಶ್ರೀನಾಥ್, ಪದ್ಮಜಾ ರಾವ್, ದತ್ತಣ್ಣ, ಗಿರಿಜಾ ಲೋಕೇಶ್, ಮಂಡ್ಯ ರಮೇಶ್ ಸೇರಿದಂತೆ ಅನೇಕರು ಅಪರ್ಣಾ ಅಂತಿಮ ದರ್ಶನ ಪಡೆದಿದ್ದಾರೆ.

ಬೆಂಗಳೂರು: ಕ್ಯಾನ್ಸರ್ ನಿಂದ ನಿನ್ನೆ ನಿಧನರಾದ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಇಂದು ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬನಶಂಕರಿಯಲ್ಲಿರುವ ಅಪರ್ಣಾ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ತಾರಾ, ಶ್ರೀನಾಥ್, ಪದ್ಮಜಾ ರಾವ್, ದತ್ತಣ್ಣ, ಗಿರಿಜಾ ಲೋಕೇಶ್, ಮಂಡ್ಯ ರಮೇಶ್ ಸೇರಿದಂತೆ ಅನೇಕರು ಅಪರ್ಣಾ ಅಂತಿಮ ದರ್ಶನ ಪಡೆದಿದ್ದಾರೆ. ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದರು. ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಅಪರ್ಣಾ ಅವರ ಪೂರ್ಣ ಹೆಸರು ಅಪರ್ಣಾ ವಸ್ತಾರೆ. ಸ್ಪಷ್ಟ ಕನ್ನಡದ ನಿರೂಪಕಿಯಾಗಿ ಗುರುತಿಸಿಕೊಂಡಿದ್ದ ಅಪರ್ಣಾ ಅವರು ಸಿನಿಮಾ ಪತ್ರಕರ್ತರೊಬ್ಬರ ಪುತ್ರಿ. ಚಿಕ್ಕಮಗಳೂರಿನ ಪಂಚನಹಳ್ಳಿಯಲ್ಲಿ ಜನಿಸಿದ್ದ ಅಪರ್ಣಾ, 1989ರಲ್ಲಿ ನಿರೂಪಕಿಯಾಗಿ ಕಿರುತೆರೆಗೆ ಕಾಲಿಟ್ಟರು. ಬಳಿಕ 1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್​ ಅವರ 'ಮಸಣದ ಹೂವು ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದರು. ನಾಗರಾಜ್ ವಸ್ತಾರೆ ಅಪರ್ಣಾ ಅವರ ದಂಪತಿ.

ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿಯಲ್ಲಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ.

‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು. 2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ‘ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ಗೂಡಿಸಿದ್ದರು.

ಅಪರ್ಣಾ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT