ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ 
ರಾಜ್ಯ

ಮೈಸೂರು: ಆಷಾಢ ಶುಕ್ರವಾರ, ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ!

ಆಷಾಢ ಮಾಸದಲ್ಲಿ ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸುವುದಕ್ಕಾಗಿ ಮೈಸೂರು, ಹಾಸನ, ಚಾಮರಾಜನಗರ, ಮಡಿಕೇರಿ ಸೇರಿದಂತೆ ತಮಿಳುನಾಡು ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರಗಳಿಂದ ಸಾವಿರಾರು ಭಕ್ತಾದಿಗಳು ಆಗಮಿಸಿದ್ದಾರೆ.

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮುಂಜಾನೆಯಿಂದಲೇ ಬೆಟ್ಟದ ಪಾದದಿಂದ ಸಾವಿರ ಮೆಟ್ಟಿಲು ಹತ್ತಿದ ಭಕ್ತರು, ದಾರಿಯುದ್ದಕ್ಕೂ ಜಯಘೋಷ ಮೊಳಗಿಸಿದರು. ಮೆಟ್ಟಿಲುಗಳಿಗೆ ಅರಿಶಿನ- ಕುಂಕುಮ ಹಚ್ಚಿ ಹರಕೆ ತೀರಿಸುತ್ತಿದ್ದಾರೆ.

ಆಷಾಢ ಮಾಸದಲ್ಲಿ ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸುವುದಕ್ಕಾಗಿ ಮೈಸೂರು, ಹಾಸನ, ಚಾಮರಾಜನಗರ, ಮಡಿಕೇರಿ ಸೇರಿದಂತೆ ತಮಿಳುನಾಡು ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರಗಳಿಂದ ಸಾವಿರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ಆಗಮಿಸಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯುತ್ತಿದ್ದಾರೆ.

ಆಷಾಢ ಶುಕ್ರವಾರ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ

ಮುಂಜಾನೆ 1:30 ರಿಂದ ಚಾಮುಂಡೇಶ್ವರಿಗೆ ವಿಶೇಷ ಅಭಿಷೇಕ ನೆರವೇರಿಸಿದ್ದು, ನಾಲ್ಕು ವಾರಗಳು ಕಾಲ ಭಕ್ತರಿಗೆ ದೇವರ ದರ್ಶನವಾಗಲಿದೆ. ಭಕ್ತಾದಿಗಳು ಬೆಟ್ಟ ಹತ್ತಿ ದರ್ಶನ ಪಡೆಯುತ್ತಿದ್ದಾರೆ ಎಂದು ದೇವಸ್ಥಾನದ ಅರ್ಚಕರಾದ ಶಶಿಧರ್ ದೀಕ್ಷಿತ್ ತಿಳಿಸಿದ್ದಾರೆ.

ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧಿಸಿದ್ದರಿಂದ ಜನರು ವಾಹನಗಳನ್ನು ಲಲಿತ ಮಹಲ್ ಅರಮನೆ ಸಮೀಪದ ಜಾಗದಲ್ಲಿ ನಿಲ್ಲಿಸಿ, ಅಲ್ಲಿಂದ ಸಾರಿಗೆ ಬಸ್ ಗಳಲ್ಲಿ ಬೆಟ್ಟಕ್ಕೆ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ನಗರ ಬಸ್ ನಿಲ್ದಾಣದಿಂದಲೂ ಬಸ್ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷಿಕಾಂತ್ ರೆಡ್ಡಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!