ಸಂಸದ ಯದುವೀರ್ ಒಡೆಯರ್ ಸಾಂದರ್ಭಿಕ ಚಿತ್ರ 
ರಾಜ್ಯ

ವಾಲ್ಮೀಕಿ ನಿಗಮ, ಮುಡಾ ಹಗರಣ: ಸಿಬಿಐ ತನಿಖೆಗೆ ಯದುವೀರ್ ಒಡೆಯರ್ ಒತ್ತಾಯ

ಹಗರಣದಲ್ಲಿ ಭಾಗಿಯಾಗದಿದ್ದರೆ ಸಿಬಿಐ ತನಿಖೆ ಎದುರಿಸಲು ಕಾಂಗ್ರೆಸ್ ನಾಯಕರು ಹಿಂಜರಿಯಬಾರದು. ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಆರೋಪ ಎದುರಿಸುತ್ತಿರುವವರು ಸಿಬಿಐ ತನಿಖೆ ನಂತರ ಆರೋಪ ಮುಕ್ತರಾಗಿ ಬರಲಿ ಎಂದರು.

ಮಡಿಕೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಹಗರಣ ಕುರಿತು ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಲೋಕಸಭೆ ಎಂಪಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಿಯಾಗಿ ಆಡಳಿತ ನಡೆಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು. ಹಗರಣದಲ್ಲಿ ಭಾಗಿಯಾಗದಿದ್ದರೆ ಸಿಬಿಐ ತನಿಖೆ ಎದುರಿಸಲು ಕಾಂಗ್ರೆಸ್ ನಾಯಕರು ಹಿಂಜರಿಯಬಾರದು. ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಆರೋಪ ಎದುರಿಸುತ್ತಿರುವವರು ಸಿಬಿಐ ತನಿಖೆ ನಂತರ ಆರೋಪ ಮುಕ್ತರಾಗಿ ಬರಲಿ ಎಂದರು.

ಮುಡಾವನ್ನು ಹಿಂದಿನ ಮೈಸೂರು ಸಂಸ್ಥಾನದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನಿವೇಶನ ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾಗಿತ್ತು. ಆದರೆ, ಇಂದು ಪ್ರಾಧಿಕಾರ ಶ್ರೀಮಂತರಿಗೆ ನಿವೇಶನ ನೀಡುತ್ತಿದೆ ಎಂದು ಸಂಸದ ಯದುವೀರ್ ಒಡೆಯರ್ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!