ಸಾಂದರ್ಭಿಕ ಚಿತ್ರ 
ರಾಜ್ಯ

ರಾಯಚೂರು: ಹಟ್ಟಿ ಚಿನ್ನದ ಗಣಿಯಲ್ಲಿ ಭೂ ಕುಸಿತ; ಓರ್ವ ಕಾರ್ಮಿಕ ಸಾವು, ನಾಲ್ವರಿಗೆ ಗಾಯ

ಹಟ್ಟಿ ಚಿನ್ನದ ಗಣಿಯ ಮಲ್ಲಪ್ಪ‌ ಶಾಫ್ಟ್ ವಿಭಾಗದಲ್ಲಿ‌ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೌನೇಶ್ (48) ಮೃತಪಟ್ಟಿದ್ದಾರೆ.

ರಾಯಚೂರು: ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಹಟ್ಟಿ ಚಿನ್ನದ ಗಣಿಯ ಮಲ್ಲಪ್ಪ‌ ಶಾಫ್ಟ್ ವಿಭಾಗದಲ್ಲಿ‌ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೌನೇಶ್ (48) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ಕಂಪನಿಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ರಾತ್ರಿ ಪಾಳಿಯಲ್ಲಿ ಕಾರ್ಮಿಕರು ಕೆಲಸಕ್ಕೆ ತೆರಳಿದ್ದರು. ಭೂಮಿಯ ಕೆಳಮೈ ವಿಭಾಗದಲ್ಲಿ ಕಾರ್ಯ ನಿರ್ವಹಿಸುವಾಗ ಭೂಕುಸಿತವಾಗಿ ಈ ದುರ್ಘಟನೆ ಸಂಭವಿಸಿದೆ.

ಚಿನ್ನ ತೆಗೆಯುವ ಮುನ್ನ ಕೆಳಮೈ ನಲ್ಲಿ ನಿರಂತರ ಬ್ಲಾಸ್ಟ್ ಮಾಡುವ ವೇಳೆ ಇಂತಹ ದುರ್ಘಟನೆಗಳು ಸಂಭವಿಸುತ್ತವೆ. ಆದರೂ ಕಂಪನಿ ಕಾರ್ಮಿಕರಿಗೆ ರಕ್ಷಣೆ ನೀಡದೇ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಮೃತ ಕಾರ್ಮಿಕನ ಕುಟುಂಬಕ್ಕೆ ಕಂಪನಿ 50 ಲಕ್ಷ ರೂ. ಪರಿಹಾರ ಘೋಷಿಸುವಂತೆ ಮೃತನ ಸಂಬಂಧಿಕರು, ಕಾರ್ಮಿಕ ಸಂಘಟನೆಗಳ ಮುಖಂಡರು ಒತ್ತಾಯಿಸಿದರು. ಗಣಿ ಕಂಪನಿ ಆಸ್ಪತ್ರೆಗೆ ಕಾರ್ಯನಿರ್ವಾಹಕ ನಿರ್ದೇಶಕ, ಪ್ರಧಾನ ವ್ಯವಸ್ಥಾಪಕ ಹಾಗೂ ಉಪ ಪ್ರಧಾನ ವ್ಯವಸ್ಥಾಪಕರು, ಅಧಿಕಾರಿಗಳು ಕಾರ್ಮಿಕ ಸಂಘದ ಮುಖಂಡರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್; 12 TMC ಸಂಸದರು BJP ಸೇರ್ಪಡೆ!

SCROLL FOR NEXT